ಬೆಂಗಳೂರು: ಕಲುಷಿತ ನೀರು ಸೇವಿಸಿ ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವುದು ಒಂದು ಕಡೆ ಇರಲಿ, ಕೊನೆ ಪಕ್ಷ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುದ್ಧ ಕುಡಿಯುವ ನೀರು ಪೂರೈಕೆ ಮಾಡದಷ್ಟು ಅಸಮರ್ಥರಾಗಿದ್ದಾರೆ ಎಂದು ಟೀಕಿಸಿದೆ.


ಇದನ್ನೂ ಓದಿ: ನಗರ ಪ್ರದಕ್ಷಿಣೆ ಮಾಡಿ ಮಳೆಗಾಲ ಎದುರಿಸಲು ಪೂರ್ವಭಾವಿ ತಯಾರಿ, ವಿವಿಧ ಕಾಮಗಾರಿ ಪರಿಶೀಲಿಸಿದ ಸಿಎಂ, ಡಿಸಿಎಂ


ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಯುವಕ ಸಾವನಪ್ಪಿದ್ದಾನೆ. ಇನ್ನೂ ನಾಲ್ವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಆರಂಭದಲ್ಲಿ ಕಲುಷಿತ ನೀರು ಪೂರೈಸಿ ಸಾವಿರಾರು ಜನರ ಜೀವದ ಜೊತೆ ಚೆಲ್ಲಾಟವಾಡಿತ್ತು. ಇದೀಗ ಮೈಸೂರಿನಲ್ಲಿ ಆರಂಭವಾಗಿದೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ. 


ಕಲುಷಿತ ನೀರು ಸೇವಿಸಿ ಯುವಕ ಸಾವು!


ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟಿದ್ದ. ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 48 ಮಂದಿ ಗ್ರಾಮಸ್ಥರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಈ ಪೈಕಿ 47 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 


ಪ್ರಜ್ವಲ್‌ ತಪ್ಪು ಮಾಡಿಲ್ಲ ಅಂದ್ರೆ ಬಂದು ಎಸ್ಐಟಿಗೆ ಸಹಕಾರ ನೀಡು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews