ಇಂದಿನಿಂದ ಯುವನಿಧಿ ಯೋಜನೆ ಜಾರಿ: ಅರ್ಜಿ ಸಲ್ಲಿಸುವುದು ಹೇಗೆ..?

Yuva Nidhi Scheme 2023 Online Apply: ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ₹3000, ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ಈ ಯೋಜನೆಯ ಲಾಭ ಪಡೆಯಬಹುದು.

Written by - Puttaraj K Alur | Last Updated : Dec 26, 2023, 01:59 PM IST
  • "ಯುವನಿಧಿ" ಯೋಜನೆಯು ಯುವ ಸಮುದಾಯದ ಭವಿಷ್ಯಕ್ಕೊಂದು ಆಶಾಕಿರಣ
  • ಪದವಿ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದ ಅರ್ಹ ಯುವ ಸಮುದಾಯಕ್ಕೆ ನೆರವು
  • ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ₹3000, ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500
ಇಂದಿನಿಂದ ಯುವನಿಧಿ ಯೋಜನೆ ಜಾರಿ: ಅರ್ಜಿ ಸಲ್ಲಿಸುವುದು ಹೇಗೆ..? title=
ಇಂದಿನಿಂದ ಯುವನಿಧಿ ಯೋಜನೆ ಜಾರಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಇಂದಿನಿಂದ(ಡಿ.26) ಜಾರಿಗೊಳಿಸುತ್ತಿದೆ. ಪದವೀಧರರು ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದವರು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ. ಶಿಕ್ಷಣ ಪಡೆದು ಉದ್ಯೋಗ ಸಿಗದಿರುವ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವುದೇ ಯುವನಿಧಿ ಯೋಜನೆಯ ಉದ್ದೇಶವಾಗಿದೆ.

ಅರ್ಜಿ ಸಲ್ಲಿಸುವುದ ಹೇಗೆ..?

ಯುವನಿಧಿ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್‍ಸೈಟ್ sevasindhugs.Karnataka.gov.inಗೆ ಲಾಗಿನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು. ಪದವಿ/ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು NAD ಪೋರ್ಟಲ್ ಸಂಬಂಧಪಟ್ಟ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ಮಂಡಳಿಗಳು ಧೃಡಿಕರಿಸಲು nad.karnataka.gov.in/#/YuvaNidhi ವೆಬ್‍ಸೈಟ್‍ಗೆ ಲಾಗಿನ್ ಆಗಬೇಕು.   

ಇದನ್ನೂ ಓದಿ: ತೀವ್ರ ಸಂಕಷ್ಟದಲ್ಲಿರುವ ಕೊಬ್ಬರಿ ಬೆಳೆಗಾರರು

ಎಲ್ಲಿ ಅರ್ಜಿ ಸಲ್ಲಿಸಬಹುದು?

ಯುವನಿಧಿ ಯೋಜನೆಗೆ ಕರ್ನಾಟಕ ಒನ್‌, ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ ಒನ್‌ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಯುವನಿಧಿ ಯೋಜನೆಗೆ ಯಾರು ಅರ್ಹರು?

  • ಅಭ್ಯರ್ಥಿಗಳು ಕಳೆದ 6 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರಬೇಕು
  • ಕರ್ನಾಟಕದಲ್ಲಿ ಪದವಿ ಅಥವಾ ಡಿಪ್ಲೋಮಾ ಹಾಗೂ ತತ್ಸಮಾನ ಶಿಕ್ಷಣ ಪಡೆದಿರಬೇಕು.
  • ಕರ್ನಾಟಕ ನಿವಾಸಿ ಪ್ರಮಾಣ ಪತ್ರಕ್ಕಾಗಿ SSLC, PUC, CET ನೋಂದಣಿ ಸಂಖ್ಯೆ ಅಥವಾ ಪಡಿತರ ಚೀಟಿ ಹೊಂದಿರಬೇಕು.
  • ಡಿಪ್ಲೊಮಾ ಅಭ್ಯರ್ಥಿಗಳು SSLC, 8 ಅಥವಾ 9ನೇ ತರಗತಿ ಅಂಕಪಟ್ಟಿ ಅಥವಾ ರೇಷನ್‌ ಕಾರ್ಡ್‌ ಹೊಂದಿರಬೇಕು.
  • SSLC ಮತ್ತು ದ್ವಿತೀಯ PUC ಅಂಕಪಟ್ಟಿ ಕಡ್ಡಾಯವಾಗಿರುತ್ತದೆ.

ಇಂದಿನಿಂದ 5ನೇ ಗ್ಯಾರಂಟಿ ಜಾರಿ

ಯುವನಿಧಿ ಯೋಜನೆ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಇಂದಿನಿಂದ 5ನೇ ಗ್ಯಾರಂಟಿ ಜಾರಿ. ನಾವು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಯುವನಿಧಿ" ಯೋಜನೆಯ ಅರ್ಜಿ ಸಲ್ಲಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಡಿಪ್ಲೊಮಾ ಹಾಗೂ ಪದವೀಧರ ಯುವಸಮುದಾಯ ಉದ್ಯೋಗ ದೊರಕುವವರೆಗೆ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಯುವಸಮುದಾಯ ಈ ದೇಶದ ಆಸ್ತಿ, ಆ ಅತ್ಯಮೂಲ್ಯ ಆಸ್ತಿಯನ್ನು ಕಾಪಾಡಿಕೊಳ್ಳುವುದು ನಮ್ಮ ಸರ್ಕಾರದ ಹೊಣೆ’ ಎಂದು ಹೇಳಿದೆ.

ಇದನ್ನೂ ಓದಿ: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ವಿಚಾರ

‘"ಯುವನಿಧಿ" ಯುವ ಸಮುದಾಯದ ಭವಿಷ್ಯಕ್ಕೊಂದು ಆಶಾಕಿರಣ. ಪದವಿ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದ ಅರ್ಹ ಯುವ ಸಮುದಾಯಕ್ಕೆ ನೆರವು ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ₹3000, ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ಈ ಯೋಜನೆಯ ಲಾಭ ಪಡೆಯಬಹುದು. ನಮ್ಮ ಸರ್ಕಾರ ಉದ್ಯೋಗ ಸೃಷ್ಟಿಗೆ ಸಮರೋಪಾಧಿಯಲ್ಲಿ ಯೋಜನೆಗಳನ್ನು ರೂಪಿಸುತ್ತಿದ್ದು, ಉದ್ಯೋಗ ಸಿಗುವವರೆಗೆ ಯುವ ಸಮುದಾಯದ ನೆರವಿಗೆ ನಿಲ್ಲಲು ನಮ್ಮ ಸರ್ಕಾರದ ಬದ್ಧತೆಯ ಯೋಜನೆ ಇದು’ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News