ಇಂದಿನಿಂದ ಯುವನಿಧಿ ಯೋಜನೆ ಜಾರಿ: ಅರ್ಜಿ ಸಲ್ಲಿಸುವುದು ಹೇಗೆ..?
Yuva Nidhi Scheme 2023 Online Apply: ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ₹3000, ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ಈ ಯೋಜನೆಯ ಲಾಭ ಪಡೆಯಬಹುದು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಇಂದಿನಿಂದ(ಡಿ.26) ಜಾರಿಗೊಳಿಸುತ್ತಿದೆ. ಪದವೀಧರರು ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದವರು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ. ಶಿಕ್ಷಣ ಪಡೆದು ಉದ್ಯೋಗ ಸಿಗದಿರುವ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವುದೇ ಯುವನಿಧಿ ಯೋಜನೆಯ ಉದ್ದೇಶವಾಗಿದೆ.
ಅರ್ಜಿ ಸಲ್ಲಿಸುವುದ ಹೇಗೆ..?
ಈ ಯುವನಿಧಿ ಯೋಜನೆಗೆ ಆನ್‌ಲೈನ್ ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್‍ಸೈಟ್ sevasindhugs.Karnataka.gov.inಗೆ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು. ಪದವಿ/ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು NAD ಪೋರ್ಟಲ್ ಸಂಬಂಧಪಟ್ಟ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ಮಂಡಳಿಗಳು ಧೃಡಿಕರಿಸಲು nad.karnataka.gov.in/#/YuvaNidhi ವೆಬ್‍ಸೈಟ್‍ಗೆ ಲಾಗಿನ್ ಆಗಬೇಕು.
ಇದನ್ನೂ ಓದಿ: ತೀವ್ರ ಸಂಕಷ್ಟದಲ್ಲಿರುವ ಕೊಬ್ಬರಿ ಬೆಳೆಗಾರರು
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ವಿಚಾರ
‘"ಯುವನಿಧಿ" ಯುವ ಸಮುದಾಯದ ಭವಿಷ್ಯಕ್ಕೊಂದು ಆಶಾಕಿರಣ. ಪದವಿ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದ ಅರ್ಹ ಯುವ ಸಮುದಾಯಕ್ಕೆ ನೆರವು ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ₹3000, ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ಈ ಯೋಜನೆಯ ಲಾಭ ಪಡೆಯಬಹುದು. ನಮ್ಮ ಸರ್ಕಾರ ಉದ್ಯೋಗ ಸೃಷ್ಟಿಗೆ ಸಮರೋಪಾಧಿಯಲ್ಲಿ ಯೋಜನೆಗಳನ್ನು ರೂಪಿಸುತ್ತಿದ್ದು, ಉದ್ಯೋಗ ಸಿಗುವವರೆಗೆ ಯುವ ಸಮುದಾಯದ ನೆರವಿಗೆ ನಿಲ್ಲಲು ನಮ್ಮ ಸರ್ಕಾರದ ಬದ್ಧತೆಯ ಯೋಜನೆ ಇದು’ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.