ಯುವನಿಧಿ ಯೋಜನೆ: ಸೇವಾ ಸಿಂಧು ಪೋರ್ಟ್ ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಿದ ಸರ್ಕಾರ
2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲಾ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.
ಬೆಂಗಳೂರು: 2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲಾ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ: 5 ವರ್ಷದವರೆಗೂ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ
ಈಗ ಯುವ ನಿಧಿಗೆ ಅರ್ಜಿ ಸಲ್ಲಿಸಲು ಸರ್ಕಾರ ಆದೇಶವನ್ನು ಪ್ರಕಟಿಸಿದ್ದು, ಇದಕ್ಕೆ ಅನುಗುಣವಾಗಿ ಈಗ ಪದವಿ-ಡಿಪ್ಲೊಮಾ ಪಡೆದಿರುವ ವಿದ್ಯಾರ್ಥಿಗಳು ಉತ್ತೀರ್ಣರಾಗಿ 6 ತಿಂಗಳು ಪೂರ್ಣವಾದ ಬಳಿಕ ಯುವನಿಧಿ ಸೌಲಭ್ಯ ಕಲ್ಪಿಸಲು ಮುಂದಾಗಿದೆ.ಈಗ ಈ ಆದೇಶಕ್ಕೆ ಅನುಗುಣವಾಗಿ 2023ರ ನವೆಂಬರ್ ಬಳಿಕ ಯುವನಿಧಿ ಯೋಜನೆ ಅಡಿಯಲ್ಲಿ3000 ರೂ ಗಳನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಿದೆ. ಈ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ನಿಯಮ,ಷರತ್ತು,ಅರ್ಜಿ ಸಲ್ಲಿಸುವ ವಿಧಾನವನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.ಯುವನಿಧಿಗೆ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ನೊಂದಾಯಿಸಬೇಕಾಗುತ್ತದೆ.
ಇದನ್ನೂ ಓದಿ: ಒಡಿಶಾ ಸರ್ಕಾರದ ಜೊತೆಗೆ ನಾವು ಸಂಪರ್ಕದಲ್ಲಿದ್ದೇವೆ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಸಭೆಯ ನಂತರ ಈ ಕುರಿತಾಗಿ ಅಧಿಕೃತ ಹೇಳಿಕೆ ನೀಡುತ್ತಾ 2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲಾ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದೇವೆ" ಎಂದು ಹೇಳಿದ್ದರು.
ಪದವಿ ಪಡೆದು 180 ದಿನಗಳು ಕಳೆದರೂ ಉದ್ಯೋಗ ಸಿಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿರುವ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಮೂಲಕ ಉದ್ಯೋಗ ಹುಡುಕಾಟಕ್ಕೆ ಅನುಕೂಲ ಕಲ್ಪಿಸುವುದು ಮತ್ತು ಆರ್ಥಿಕ ಸಂಕಷ್ಟದಿಂದ ಅವರನ್ನು ಪಾರುಮಾಡುವುದು ನಮ್ಮ ಈ ಯೋಜನೆಯ ಉದ್ದೇಶ. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಯೋಜನೆಯ ಲಾಭ ಪಡೆಯಬಹುದಾಗಿದೆ.ಸ್ವಂತ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊಂದಿದ್ದು, ಉದ್ಯೋಗ ಸಿಗದೆ ಸಂಕಷ್ಟದಲ್ಲಿರುವ ನಾಡಿನ ಯುವಶಕ್ತಿಗೆ ಆರ್ಥಿಕ ನೆರವು ನೀಡಿ ಅವರ ಭವಿಷ್ಯದ ಕನಸಿಗೆ ಬೆಂಬಲವಾಗಿ ನಿಲ್ಲಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.