ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸುವ ಪ್ರಕರಣಗಳು ಮರುಕಳಿಸಿದರೆ  ಜಿಲ್ಲಾ ಪಂಚಾಯತ ಸಿ.ಇ.ಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಹಾಗೂ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಅವರು ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.


ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.


ಇದನ್ನೂ ಓದಿ : ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ, 3.5 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ


ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ   ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತಿದೆ.ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಕಲುಷಿತ ನೀರಿನಿಂದ ಸಾವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಆದೇಶಿಸಿದರು


ಹಾಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು. ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು.ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಬೇಕು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.


ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ 2 ವಿಧದ 500 ರೂ. ನೋಟುಗಳು: ಆರ್ ಬಿಐ ನೀಡಿದೆ ಮಹತ್ವದ ಅಪ್ ಡೇಟ್


ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಂ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ|| ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.