ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ನಾಳೆಯಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


COMMERCIAL BREAK
SCROLL TO CONTINUE READING

ದಕ್ಷಿಣ ಒಳನಾಡಿನ ಬೆಂಗಳೂರು(Bengalure), ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ಬಳ್ಳಾರಿಯಲ್ಲಿ ನ.26ರಿಂದ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಹತೇಕ ಜಿಲ್ಲೆಗಳಲ್ಲಿ ನ.28ರಂದು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ.


'ನನ್ನ ಜತೆ ಮುಂಬೈಗೆ ಬಂದವರೆಲ್ಲರಿಗೂ ಸಚಿವ ಸ್ಥಾನ ಖಚಿತ'


ಚಳಿ ವಾತಾವರಣ: ನಿವಾರ ಚಂಡಮಾರುತ ಪರಿಣಾಮದಿಂದ ತಮಿಳುನಾಡಿನಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆಯಿಂದಲೇ ಥಂಡಿ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ, ಮೋಡ ಕವಿದ ವಾತಾವರಣ ಉಂಟಾಗಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಳಿತವಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.


'ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿಯುವುದು ಖಚಿತ'