ಬೆಂಗಳೂರು: ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ  ಕರ್ನಾಟಕ ಕೇಂದ್ರೀಕೃತ  ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ  ಸ್ಕಾಚ್‌ ಅವಾರ್ಡ್‌ನಲ್ಲಿ 'ಚಿನ್ನ' ಪಡೆದಿದೆ.


COMMERCIAL BREAK
SCROLL TO CONTINUE READING

"ಸುಲಲಿತ ವ್ಯವಹಾರಕ್ಕೆ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ಯೋಜನೆ ಜಾರಿಗೊಳಿಸಿರುವ ಕರ್ನಾಟಕ, ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ಶ್ರೇಯಾಂಕ ಪಟ್ಟಿಯಲ್ಲಿ “ಟಾಪ್‌ ಅಚೀವರ್” ಆಗಿ ಹೊರಹೊಮ್ಮಿದೆ. ಇದೀಗ,  ಕೈಗಾರಿಕೆಗಳಿಗೆ ಕೇಂದ್ರೀಕೃತ ತಪಾಸಣೆ ವ್ಯವಸ್ಥೆ ಜಾರಿಗೊಳಿಸಿರುವ ರಾಜ್ಯ 'ಸ್ಕಾಚ್‌ ಅವಾರ್ಡ್ಸ್‌'ನಲ್ಲಿ ಚಿನ್ನ ಪಡೆದಿರುವುದು ಸಂತಸದ ವಿಷಯ,"ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ಆರ್. ನಿರಾಣಿ ಹರ್ಷ ವ್ಯಕ್ತಪಡಿಸಿದ್ದಾರೆ. 


"ಕೈಗಾರಿಕೆಗಳ ಕಾರ್ಯ ನಿರ್ವಹಣೆ ನಿಯಮಗಳ ಪಾಲನೆಗಳ ತಪಾಸಣೆ, ಮೇಲ್ವಿಚಾರಣೆಗಾಗಿ ನಾನಾ ಇಲಾಖೆಗಳು ಪ್ರತ್ಯೇಕವಾಗಿ ತಪಾಸಣಾ ಭೇಟಿ ನೀಡುವುದರಿಂದ ಉಂಟಾಗುವ ಅನಗತ್ಯ ಕಿರಿಕಿರಿ ತಪ್ಪಿಸಲು ಹಾಗೂ ಪಾರದರ್ಶಕ ಪರಿಶೀಲನೆಗಾಗಿ ವಾಣಿಜ್ಯ  ಕೈಗಾರಿಕಾ ಇಲಾಖೆಯು ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ (ಸೆಂಟ್ರಲ್‌ ಇನ್‌ಸ್ಪೆಕ್ಷನ್‌ ಸಿಸ್ಟೆಮ್‌) ಜಾರಿ ತರಲಾಗಿದೆ," ಎಂದರು. Love Proposal: ಇಂಡೋ-ಡಚ್ಚ್ ಪಂದ್ಯದ ವೇಳೆ ‘ಲವ್ ಪ್ರಪೋಸ್’: ಪ್ರಿಯಕರನ ತಬ್ಬಿಕೊಂಡು ‘ಒಕೆ’ ಅಂದ್ಳು ಚೆಲುವೆ


"ರಾಜ್ಯದ ಕೈಗಾರಿಕೆಗಳಲ್ಲಿ ನಿಯಮಾವಳಿಗಳ ಪಾಲನೆ, ಕಾರ್ಮಿಕರಿಗೆ ಸಂಬಂಧಪಟ್ಟ ಕಾನೂನುಗಳ ಅನುಷ್ಠಾನ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಸ್ಥಿತಿಗತಿ ಇತರೆ ಅಂಶಗಳ ಪರಿಶೀಲನೆಗಾಗಿ ಸಂಬಂಧಪಟ್ಟ ಇಲಾಖೆಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತವೆ. ಮುಖ್ಯವಾಗಿ ಕಾರ್ಮಿಕ ಇಲಾಖೆ, ಕಾರ್ಖಾನೆಗಳು- ಬಾಯ್ಲರ್‌ಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುತ್ತವೆ," ಎಂದು ಸಚಿವ ನಿರಾಣಿ ತಿಳಿಸಿದರು.


"ಪ್ರತಿಯೊಂದು ಇಲಾಖೆಗಳು ಪ್ರತ್ಯೇಕವಾಗಿ ಭೇಟಿ ನೀಡುವುದರಿಂದ ವರ್ಷವಿಡೀ ತಪಾಸಣೆ ಕಾರ್ಯ ನಡದೇ ಇರುತ್ತದೆ. ಪ್ರತಿ ಇಲಾಖೆಯು ಅಧಿಕಾರಿಗಳು ಭೇಟಿ ನೀಡಿದಾಗ ಮಾಹಿತಿ ಒದಗಿಸುವುದು, ಪ್ರಾಯೋಗಿಕ ಪರಿಶೀಲನೆ ಕಾರ್ಯ ನಡೆಯುವುದರಿಂದ ಕೈಗಾರಿಕೆಗಳಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರು ಇತ್ತು . ಇದಕ್ಕೆ ಪರಿಹಾರವಾಗಿ 'ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ' ರೂಪಿಸಿದ್ದೇವೆ,"ಎಂದು ಸಚಿವರು ತಿಳಿಸಿದರು. 


"ಕೇಂದ್ರ ಸರಕಾರ ಈಸ್‌ ಆಫ್‌ ಡೂಯಿಂಗ್‌ ವ್ಯವಸ್ಥೆಯಡಿ  ಕೈಗಾರಿಕೆಗಳ ಸುಗಮ ಕಾರ್ಯ ನಿರ್ವಹಣೆಗೆ ಸೂಕ್ತ ಕ್ರಮ ವಹಿಸುವಂತೆ ನೀಡಿರುವ ನಿರ್ದೇಶದನ್ವಯ ಹೊಸ ಸಿಐಎಸ್‌ ತಂತ್ರಾಂಶ ರೂಪುಗೊಂಡಿದೆ. ಈ ತಂತ್ರಾಂಶದ ಬಳಕೆಯಿಂದ ಕೈಗಾರಿಕೆಗಳ ತಪಾಸಣೆ, ನಿಯಮಗಳ ಪಾಲನೆ ಹಾಗೂ ಗುಣಮಟ್ಟದ ನಿರ್ವಹಣೆಗೆ ಸಹಕಾರಿಯಾಗಲಿದೆ,"ಎಂದು  ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ ಅವರು ವಿವರಿಸಿದ್ದಾರೆ.


ಇದನ್ನೂ ಓದಿ: Team Indiaದ ‘ತ್ರಿಮೂರ್ತಿ’ಗಳ ಅಬ್ಬರ: ರೋಹಿತ್, ಕೊಹ್ಲಿ, ಯಾದವ್ ಆಟಕ್ಕೆ ನಲುಗಿತು ನೆದರ್ಲ್ಯಾಂಡ್


ಏನಿದು ಸಿಐಎಸ್‌ ವ್ಯವಸ್ಥೆ:


 "ಸಿಐಎಸ್‌ ವ್ಯವಸ್ಥೆಯಡಿ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಚರ್ಚಿಸಿ  ಜಂಟಿ ತಪಾಸಣೆಗೆ ಆದ್ಯತೆ ನೀಡುವುದು. ತಪಾಸಣೆ ಬಗ್ಗೆ ಕೈಗಾರಿಕೆಗಳಿಗೆ ಮೊದಲೇ ಮಾಹಿತಿ ನೀಡದೇ, ಆ ದಿನ ಆಯಾ ಇಲಾಖೆಯು ತನ್ನ ಕಾರ್ಯವ್ಯಾಪ್ತಿಯಲ್ಲಿನ ಅಂಶಗಳ ಪರಿಶೀಲನೆ, ನಿಯಮ ಉಲ್ಲಂಘನೆ, ಲೋಪಗಳ ಪತ್ತೆ ಕಾರ್ಯವನ್ನು ಏಕಕಾಲಕ್ಕೆ ನಡೆಸಲಿದೆ. ತಪಾಸಣಾ ಅಧಿಕಾರಿಯನ್ನು ಗಣಕೀಕೃತ ವ್ಯವಸ್ಥೆ ಆಯ್ಕೆ ಮಾಡುವುದರಿಂದ ಒಬ್ಬರೇ ಅಧಿಕಾರಿ ಎರಡು ಬಾರಿ ಒಂದೇ ಕೈಗಾರಿಕೆಯಲ್ಲಿ ತಪಾಸಣೆ ನಡೆಸಲು ಅವಕಾಶವಿರುವುದಿಲ್ಲ.ಕೈಗಾರಿಕೆಗಳ ಮಾಲೀಕರೊಂದಿಗೆ ಮುಂಚಿತವಾಗಿ ಹಂಚಿಕೊಳ್ಳುವುದಲ್ಲದೇ, ತಪಾಸಣೆ ವರದಿಯನ್ನು ನಿರ್ದಿಷ್ಟ ಸಮಯದೊಳಗೆ ಅಪ್‌ಲೋಡ್ ಮಾಡಲಾಗುತ್ತದೆ,"ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಮಾಹಿತಿ ನೀಡಿದರು.


ಸ್ಕಾಚ್‌ ಅವಾರ್ಡ್‌: 


'ಸ್ಟೇಟ್‌  ಆಫ್‌ ಗವರ್ನನ್ಸ್‌' ಎಂಬ ಪರಿಕಲ್ಪನೆಯಡಿ ನಡೆದ  83ನೇ ಸ್ಕಾಚ್‌ ಶೃಂಗಸಭೆಯಲ್ಲಿ ಸುಲಲಿತ ವ್ಯವಹಾರಗಳ ವಿಭಾಗದಲ್ಲಿ ಕರ್ನಾಟಕಕ್ಕೆ ಅಗ್ರಮಾನ್ಯ  ಪ್ರಶಸ್ತಿ ಘೋಷಿಸಲಾಗಿದೆ.ಕಾರ್ಯಕ್ಷಮತೆಯ ಆಧಾರದ ಮೇಲೆ ರಾಜ್ಯಗಳು, ಇಲಾಖೆಗಳು, ಜಿಲ್ಲೆಗಳು ಮತ್ತು ಪುರಸಭೆಗಳನ್ನು ಶ್ರೇಣೀಕರಿಸಿ ಪ್ರತಿವರ್ಷ ಶ್ರೇಯಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ