ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ₹300 ವಸೂಲಿ; 3 ಸೈಬರ್ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ!
Gruha Lakshmi Scheme: ಸೈಬರ್ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರದ ಐಡಿ ಮತ್ತು ಪಾಸ್‌ವರ್ಡ್ ಬಳಸಿಕೊಂಡು ಮಹಿಳೆಯರಿಂದ ಹಣ ವಸೂಲಿ ಮಾಡಲಾಗುತ್ತಿತ್ತು. ಫಲಾನುಭವಿಗಳ ಮೊಬೈಲ್‍ಗೆ ಮೆಸೇಜ್ ಬಂದಿದ್ದರೂ ನೋಂದಣಿ ಮಾಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದರು.
ರಾಯಚೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಈಗಾಗಲೇ ಚಾಲನೆ ದೊರೆತಿದೆ. ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ಕೇಳಿದ ಆರೋಪದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ 3 ಗ್ರಾಮ ಒನ್ ಕೇಂದ್ರಗಳ ಐಡಿ ರದ್ದುಗೊಳಿಸಲಾಗಿತ್ತು.
ಸರ್ಕಾರಿ ಯೋಜನೆಯಾಗಿರುವ ಗೃಹಲಕ್ಷ್ಮಿ ಅರ್ಜಿಗೆ ಜನರಿಂದ ಹೆಚ್ಚುವರಿ ಹಣ ಪಡೆಯುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ಆದರೂ ಸಹ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಜನರಿಂದ ಹೆಚ್ಚುವರಿ ಹಣ ಪಡೆಯುತ್ತಿರುವ ಪ್ರಕರಣಗಳು ನಿಲ್ಲುತ್ತಿಲ್ಲ.
ಇದನ್ನೂ ಓದಿ: 3 ವರ್ಷ ಪ್ರೀತಿಸಿ ಕೈಕೊಟ್ಟ ಯುವತಿ : ಮನನೊಂದು ಯುವಕ ಆತ್ಮಹತ್ಯೆ
3 ಸೈಬರ್ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ
ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಸಾರ್ವಜನಿಕರಿಂದ 300 ರೂ. ಫೀಸ್ ವಸೂಲಿ ಮಾಡಿದ ಹಿನ್ನೆಲೆ 3 ಸೈಬರ್ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ಜನರಿಂದ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿತ್ತು.
ಸೈಬರ್ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರದ ಐಡಿ ಮತ್ತು ಪಾಸ್‌ವರ್ಡ್ ಬಳಸಿಕೊಂಡು ಮಹಿಳೆಯರಿಂದ ಹಣ ವಸೂಲಿ ಮಾಡಲಾಗುತ್ತಿತ್ತು. ಫಲಾನುಭವಿಗಳ ಮೊಬೈಲ್‍ಗೆ ಮೆಸೇಜ್ ಬಂದಿದ್ದರೂ ನೋಂದಣಿ ಮಾಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆ ಮಾನ್ವಿ ತಹಶೀಲ್ದಾರ್ ಎಲ್.ಡಿ.ಚಂದ್ರಕಾಂತ್ ನೇತೃತ್ವದಲ್ಲಿ ದಾಳಿ ಸೈಬರ್ ಕೇಂದ್ರಗಳ ಮೇಲೆ ದಾಳಿ ನಡೆಸಲಾಗಿತ್ತು.
ಇದನ್ನೂ ಓದಿ: ನಾವೀನ್ಯತೆಗೆ ಸ್ವಿಟ್ಜರ್ಲೆಂಡ್ ಆಸಕ್ತಿ, ಸಚಿವರ ಜತೆ ಕಾನ್ಸುಲ್ ಜನರಲ್ ಚರ್ಚೆ
ಪಟ್ಟಣದ ಎಕ್ಸೆಲ್ ಕಂಪ್ಯೂಟರ್ಸ್, ಲಕ್ಷ್ಮೀ ಕಂಪ್ಯೂಟರ್ ಮತ್ತು ಸೂರ್ಯ ಕಂಪ್ಯೂಟರ್ ಕೇಂದ್ರಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿ ಬಳಿಕ ಸೈಬರ್ ಕೇಂದ್ರಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಮಾನ್ವಿ ಪಟ್ಟಣದ ಸಾದಾಪುರ ಗ್ರಾಮ ಒನ್ ಕೇಂದ್ರದ ಐಡಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸೈಬರ್ ಕೇಂದ್ರದ ಮಾಲೀಕರ ಮೇಲೆ ಪ್ರಕರಣ ದಾಖಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.