ಚನ್ನಪಟ್ಟಣ ಉಪಚುನಾವಣೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ಇದೀಗ ಯಾರು ಗೆಲ್ಲಬಹುದು ಎಂಬ ನಿರೀಕ್ಷೆಗಳು ಹೆಚ್ಚಿವೆ. ಆದರೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸೋಲು ಒಪ್ಪಿಕೊಂಡಂತೆ ಕಾಣುತ್ತಿದೆ.
ಕೃಷ್ಣ ನದಿಗೆ RTPSನಿಂದ ವಿಷಪೂರಿತ ಬೂದಿ ನೀರು
ವಿಷಪೂರಿತ ಬೂದಿಯಿಂದ ಕೃಷ್ಣ ಜಲಮಾಲಿನ್ಯ
ರಾಯಚೂರಿನ ಶಕ್ತಿನಗರನಲ್ಲಿರುವ ವಿದ್ಯುತ್ ಕೇಂದ್ರ
ಆರ್ಟಿಪಿಎಸ್ ಹಾಗೂ ವೈಟಿಪಿಎಸ್ನ ಶಾಖೋತ್ಪನ್ನ
ಕಲ್ಲಿದ್ದಲು ಬೂದಿ ಕೃಷ್ಣ ನದಿಗೆ ಬಿಟ್ಟ ಹಿನ್ನೆಲೆ
ಕಾಲುವೆ ಮೂಲಕ ವಿಷಪೂರಿತ ನೀರು ಕೃಷ್ಣ ನದಿಗೆ
2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ಸಮಸ್ಯೆಗಳಿಗೆ ಇದುವರೆಗೂ ಯಾವುದೇ ಪರಿಹಾರ ಕಂಡುಕೊಳ್ಳಲಾಗಿಲ್ಲ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿರುವ ಈ ಪ್ರತಿಷ್ಠೆಯ ಹೋರಾಟದಿಂದಾಗಿ ಇದೀಗ ಐಸಿಸಿ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿಕೊಂಡಿದೆ.
ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್ಐಟಿ ರಚನೆ ಮಾಡಲಾಗುವುದು.
ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದರೂ ಕೂಡ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ.
ಸರ್ಕಾರದ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಹೊತ್ತವರು ಇಲಾಖಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ಬದ್ಧತೆ ಹಾಗೂ ಕಾಳಜಿ ಇರಲಿ ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು.
ಈಗಾಗಲೇ ಅಪ್ಲೋಡ್ ಮಾಡಿರುವ ಇ ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಎನ್ಆರ್ಐ ಮಾಲೀಕತ್ವದ ಆಸ್ತಿಗೆ ಅಫಿಡವಿಟ್ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನ ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.