Surya Grahan 2023 Effect: ಸೂರ್ಯ-ಚಂದ್ರ ಗ್ರಹಣಗಳು ಖಗೋಳ ಘಟನೆಯಾದರೂ ಸಹ ಜ್ಯೋತಿಷ್ಯ ಶಾಸ್ತ್ರದಲ್ಲೂ ಇದಕ್ಕೆ ಬಹಳ ಮಹತ್ವವಿದೆ. ಶೀಘ್ರದಲ್ಲೇ 2023 ರ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಏಪ್ರಿಲ್ 20 ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಜ್ಯೋತಿಷ್ಯದ ಪ್ರಕಾರ, ಇದನ್ನು ಕೆಲವು ರಾಶಿಯವರಿಗೆ ಮಂಗಳಕರ ಎಂದು ಪರಿಗಣಿಸಲಾಗುವುದಿಲ್ಲ. ಹಾಗಿದ್ದರೆ, 2023ರ ಮೊದಲ ಸೂರ್ಯಗ್ರಹಣ ಯಾವ ರಾಶಿಯವರಿಗೆ ಶುಭಕರವಲ್ಲ, ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ತಿಳಿಯೋಣ...
ಈ ರಾಶಿಯವರ ಸಂಕಷ್ಟವನ್ನು ಹೆಚ್ಚಿಸಲಿದೆ ವರ್ಷದ ಮೊದಲ ಸೂರ್ಯಗ್ರಹಣ:
ಮೇಷ ರಾಶಿ:
ವರ್ಷದ ಮೊದಲ ಸೂರ್ಯಗ್ರಹಣವು ಮೇಷ ರಾಶಿಯಲ್ಲಿ ಸಂಭವಿಸಲಿದೆ. ಅಂತಹ ಪರಿಸ್ಥಿತಿಯಲ್ಲಿ, ಜ್ಯೋತಿಷ್ಯದ ಪ್ರಕಾರ, ಮೇಷ ರಾಶಿಯ ಜನರು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ನೀವು ಆರೋಗ್ಯ ಮತ್ತು ಆರ್ಥಿಕ ವಿಷಯಗಳಲ್ಲಿ ಸಮಸ್ಯೆಗಳನ್ನು ಎದುರಿಸಬಹುದು. ಒಡಹುಟ್ಟಿದವರೊಂದಿಗಿನ ನಿಮ್ಮ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತವೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- ಕೆಲವೇ ಗಂಟೆಗಳಲ್ಲಿ ಮೇಷ ರಾಶಿಯಲ್ಲಿ ತ್ರಿಗ್ರಹಿ ಯೋಗ, 5 ರಾಶಿಗಳ ಜನರಿಗೆ ಅಪಾರ ಧನಪ್ರಾಪ್ತಿಯ ಯೋಗ!
ಸಿಂಹ ರಾಶಿ:
ಸೂರ್ಯ ಗ್ರಹಣದ ಪ್ರಭಾವದಿಂದಾಗಿ ಸಿಂಹ ರಾಶಿಯವರು ಶಿಕ್ಷಣ, ಉದ್ಯೋಗ ಕ್ಷೇತ್ರಗಳಲ್ಲಿ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವ್ಯಾಪಾ-ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೂ ಸಹ ತುಂಬಾ ಎಚ್ಚರಿಕೆಯಿಂದ ಯೋಚಿಸಿ ನಿರ್ಧರಿಸಿ.
ಕನ್ಯಾ ರಾಶಿ:
ಕನ್ಯಾ ರಾಶಿಯವರಿಗೂ ಸಹ ವರ್ಷದ ಮೊದಲ ಸೂರ್ಯಗ್ರಹಣವನ್ನು ಮಂಗಲಕಾರ ಎಂದು ಪರಿಗಣಿಸಲಾಗುವುದಿಲ್ಲ. ಈ ಸಮಯದಲ್ಲಿ ನೀವು ಚಾಲನೆ ಮಾಡುವಾಗ ತುಂಬಾ ಜಾಗರೂಕರಾಗಿರಿ. ಇದಲ್ಲದೆ, ಮಾತಿನ ಮೇಲೆ ಸಂಯಮ ಕಾಯ್ದುಕೊಳ್ಳಿ.
ಇದನ್ನೂ ಓದಿ- Lunar Eclipse 2023: ಈ ದಿನ ಸಂಭವಿಸಲಿದೆ ವರ್ಷದ ಮೊದಲ ಚಂದ್ರ ಗ್ರಹಣ, ಈ ರಾಶಿಯವರಿಗೆ ಲಾಭದಾಯಕ
ಮಕರ ರಾಶಿ:
ವರ್ಷದ ಮೊದಲ ಸೂರ್ಯಗ್ರಹಣ ಮಕರ ರಾಶಿಯವರ ಮೇಲೂ ಸಹ ನಕಾರಾತ್ಮಕ ಪರಿಣಾಮ ಬೀರಲಿದೆ. ಸಮಯದಲ್ಲಿ ನೀವು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಮಾತ್ರವಲ್ಲ, ನಿಮ್ಮ ಆದಾಯಕ್ಕಿಂತ ಖರ್ಚು ಹೆಚ್ಚಾಗಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಬಹುದು.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.