Aloe Vera Juice For High Cholesterol & Weight Loss: ಅಧಿಕ ತೂಕ ಮತ್ತು ಕೊಲೆಸ್ಟ್ರಾಲ್ ಇವೆರಡೂ ಸಹ ನಮ್ಮ ಆರೋಗ್ಯಕ್ಕೆ ಶತ್ರುಗಳಿದ್ದಂತೆ. ಏಕೆಂದರೆ ಅಧಿಕ ತೂಕ ಅಥವಾ ಸ್ಥೂಲಕಾಯತೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿ ಅಧಿಕ ರಕ್ತದೊತ್ತಡ, ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಇವುಗಳ ನಿಯಂತ್ರಕ್ಕೆ ನೀವು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದಾದ ಅಲೋವೆರಾ ಜ್ಯೂಸ್ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
ಹೌದು, ಸಾಮಾನ್ಯವಾಗಿ, ಚರ್ಮ ಮತ್ತು ಕೂದಲಿನ ಆರೈಕೆಗೆ ದಿವ್ಯೌಷಧ ಎಂದು ಪರಿಗಣಿಸಲಾಗಿರುವ ಅಲೋವೆರಾವನ್ನು ಜ್ಯೂಸ್ (Aloe Vera Juice) ತಯಾರಿಸಿ ಸೇವಿಸುವುದರಿಂದ ಇದು ಹಲವು ಕಾಯಿಲೆಗಳಿಂದ ನಮಗೆ ರಕ್ಷಣೆಯನ್ನು ನೀಡುತ್ತದೆ. ಹಾಗಿದ್ದರೆ ಪ್ರತಿದಿನ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ ಎಂದು ತಿಳಿಯೋಣ...
ಆರೋಗ್ಯದ ನಿಧಿ ಅಲೋವೆರಾ:
ಆಯುರ್ವೇದದಲ್ಲಿ ಅಲೋವೆರಾವನ್ನು (Aloe Vera) ಆರೋಗ್ಯದ ನಿಧಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಅಡಕವಾಗಿರುವ ಲೆಕ್ಕವಿಲ್ಲದಷ್ಟು ಔಷಧೀಯ ಗುಣಗಳಿಂದಾಗಿ ಅಲೋವೆರಾ ನಮಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ಇದನ್ನೂ ಓದಿ- ಬಿಸಿಲಿನಿಂದ ಚರ್ಮ ಕಳೆಗುಂದಿದೆಯೇ? ಹೊಳೆಯುವ ತ್ವಚೆಯನ್ನು ಮರಳಿ ಪಡೆಯಲು ಇಲ್ಲಿವೆ 5 ಫೇಸ್ ಪ್ಯಾಕ್‌ಗಳು
ವಾಸ್ತವವಾಗಿ, ಇತ್ತೀಚಿನ ದಿನಗಳಲ್ಲಿ ಹಲವಾರು ವಿಧದ ಪ್ಯಾಕ್ಡ್ ಅಲೋವೆರಾ ಜ್ಯೂಸ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೂ, ನಿತ್ಯ ಮನೆಯಲ್ಲಿ ತಯಾರಿಸಿದ ತಾಜಾ ಅಲೋವೆರಾ ಜ್ಯೂಸ್ (Fresh Aloe Vera Juice) ಅನ್ನು ಒಂದು ಲೋಟ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಪ್ರತಿದಿನ ಒಂದು ಲೋಟ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೆಂದರೆ...
* ಕೊಲೆಸ್ಟ್ರಾಲ್ ನಿಯಂತ್ರಣ:
ಪ್ರತಿದಿನ ಒಂದು ಲೋಟ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ರಕ್ತನಾಳಗಳಲ್ಲಿ ಶೇಖರವಾಗಿರುವ ಕೆಟ್ಟ ಕೊಲೆಸ್ಟ್ರಾಲ್ (Bad Cholesterol) ಅನ್ನು ಆರೋಗ್ಯಕರವಾಗಿ ನಿಯಂತ್ರಿಸಬಹುದು.
* ತೂಕ ನಿಯಂತ್ರಣ:
ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕರವಾಗಿ ತೂಕ ಇಳಿಸ (Weight Loss) ಬಹುದು. ಇದು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದ್ರೋಗದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
ಇದನ್ನೂ ಓದಿ- Aloe Vera for Hair Care: ಕೂದಲಿನ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ ಅಲೋವೆರಾ
* ಉದರ ಸಮಸ್ಯೆಗಳಿಂದ ಪರಿಹಾರ:
ನಿತ್ಯ ಒಂದು ಲೋಟ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಇದು ಚಯಾಪಚಯ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರಿಂದ ಅಜೀರ್ಣ, ಮಲಬದ್ಧತೆ, ಆಮ್ಲೀಯತೆ ಮತ್ತು ಗ್ಯಾಸ್ಟ್ರಿಕ್ ಸೇರಿದಂತೆ ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
* ಚರ್ಮಕ್ಕೆ ಪಯೋಜನಕಾರಿ:
ಅಲೋವೆರಾ ಚರ್ಮಕ್ಕೆ ಪ್ರಯೋಜನಕಾರಿ ಆಗಿದೆ. ನಿತ್ಯ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕರ, ಕಾಂತಿಯುತ ಚರ್ಮವನ್ನು (Glowing Skin) ಪಡೆಯಲು ಇದು ಸಹಕಾರಿ ಆಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=O-hDphMYFMg
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.