Aloe Vera Juice For High Cholesterol & Weight Loss: ಅಧಿಕ ತೂಕ ಮತ್ತು ಕೊಲೆಸ್ಟ್ರಾಲ್ ಇವೆರಡೂ ಸಹ ನಮ್ಮ ಆರೋಗ್ಯಕ್ಕೆ ಶತ್ರುಗಳಿದ್ದಂತೆ. ಏಕೆಂದರೆ ಅಧಿಕ ತೂಕ ಅಥವಾ ಸ್ಥೂಲಕಾಯತೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿ ಅಧಿಕ ರಕ್ತದೊತ್ತಡ, ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಇವುಗಳ ನಿಯಂತ್ರಕ್ಕೆ ನೀವು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದಾದ ಅಲೋವೆರಾ ಜ್ಯೂಸ್ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. 


COMMERCIAL BREAK
SCROLL TO CONTINUE READING

ಹೌದು, ಸಾಮಾನ್ಯವಾಗಿ,  ಚರ್ಮ ಮತ್ತು ಕೂದಲಿನ ಆರೈಕೆಗೆ ದಿವ್ಯೌಷಧ ಎಂದು ಪರಿಗಣಿಸಲಾಗಿರುವ ಅಲೋವೆರಾವನ್ನು ಜ್ಯೂಸ್  (Aloe Vera Juice) ತಯಾರಿಸಿ ಸೇವಿಸುವುದರಿಂದ ಇದು ಹಲವು ಕಾಯಿಲೆಗಳಿಂದ ನಮಗೆ ರಕ್ಷಣೆಯನ್ನು ನೀಡುತ್ತದೆ. ಹಾಗಿದ್ದರೆ ಪ್ರತಿದಿನ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ ಎಂದು ತಿಳಿಯೋಣ... 


ಆರೋಗ್ಯದ ನಿಧಿ ಅಲೋವೆರಾ: 
ಆಯುರ್ವೇದದಲ್ಲಿ ಅಲೋವೆರಾವನ್ನು (Aloe Vera) ಆರೋಗ್ಯದ ನಿಧಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಅಡಕವಾಗಿರುವ ಲೆಕ್ಕವಿಲ್ಲದಷ್ಟು ಔಷಧೀಯ ಗುಣಗಳಿಂದಾಗಿ ಅಲೋವೆರಾ ನಮಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. 


ಇದನ್ನೂ ಓದಿ- ಬಿಸಿಲಿನಿಂದ ಚರ್ಮ ಕಳೆಗುಂದಿದೆಯೇ? ಹೊಳೆಯುವ ತ್ವಚೆಯನ್ನು ಮರಳಿ ಪಡೆಯಲು ಇಲ್ಲಿವೆ 5 ಫೇಸ್ ಪ್ಯಾಕ್‌ಗಳು


ವಾಸ್ತವವಾಗಿ, ಇತ್ತೀಚಿನ ದಿನಗಳಲ್ಲಿ ಹಲವಾರು ವಿಧದ ಪ್ಯಾಕ್ಡ್  ಅಲೋವೆರಾ ಜ್ಯೂಸ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೂ, ನಿತ್ಯ  ಮನೆಯಲ್ಲಿ ತಯಾರಿಸಿದ ತಾಜಾ ಅಲೋವೆರಾ ಜ್ಯೂಸ್ (Fresh Aloe Vera Juice) ಅನ್ನು ಒಂದು ಲೋಟ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.


ಪ್ರತಿದಿನ ಒಂದು ಲೋಟ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೆಂದರೆ... 
* ಕೊಲೆಸ್ಟ್ರಾಲ್ ನಿಯಂತ್ರಣ: 

ಪ್ರತಿದಿನ ಒಂದು ಲೋಟ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ರಕ್ತನಾಳಗಳಲ್ಲಿ ಶೇಖರವಾಗಿರುವ ಕೆಟ್ಟ ಕೊಲೆಸ್ಟ್ರಾಲ್ (Bad Cholesterol) ಅನ್ನು ಆರೋಗ್ಯಕರವಾಗಿ ನಿಯಂತ್ರಿಸಬಹುದು. 


* ತೂಕ ನಿಯಂತ್ರಣ: 
ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕರವಾಗಿ ತೂಕ ಇಳಿಸ (Weight Loss) ಬಹುದು. ಇದು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದ್ರೋಗದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. 


ಇದನ್ನೂ ಓದಿ- Aloe Vera for Hair Care: ಕೂದಲಿನ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ ಅಲೋವೆರಾ


* ಉದರ ಸಮಸ್ಯೆಗಳಿಂದ ಪರಿಹಾರ: 
ನಿತ್ಯ ಒಂದು ಲೋಟ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಇದು ಚಯಾಪಚಯ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರಿಂದ ಅಜೀರ್ಣ, ಮಲಬದ್ಧತೆ, ಆಮ್ಲೀಯತೆ ಮತ್ತು ಗ್ಯಾಸ್ಟ್ರಿಕ್ ಸೇರಿದಂತೆ ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. 


* ಚರ್ಮಕ್ಕೆ ಪಯೋಜನಕಾರಿ: 
ಅಲೋವೆರಾ ಚರ್ಮಕ್ಕೆ ಪ್ರಯೋಜನಕಾರಿ ಆಗಿದೆ. ನಿತ್ಯ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕರ, ಕಾಂತಿಯುತ ಚರ್ಮವನ್ನು (Glowing Skin) ಪಡೆಯಲು ಇದು ಸಹಕಾರಿ ಆಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=O-hDphMYFMg
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.