Ash Gourd Benefits: ಶರೀರದಿಂದ ವಿಷಕಾರಿ ಪದಾರ್ಥ ಹೊರಹಾಕಿ ತೂಕ ಇಳಿಕೆಗೆ ಸಹಕರಿಸುತ್ತೆ ಈ ಜ್ಯೂಸ್!

Ash Gourd Health Benefits:  ಬೂದು ಕುಂಬಳಕಾಯಿ ರಸವು ದೇಹದಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದರಿಂದ ಕರಳು ಕೂಡ ಸ್ವಚ್ಛವಾಗಿ ಉಳಿಯುತ್ತದೆ ಮತ್ತು ಹೊಟ್ಟೆಯು ಸ್ವಚ್ಛವಾಗುತ್ತದೆ (benefits of ash gourd juice in empty stomach). ಇದಲ್ಲದೆ, ಇದು ಯಕೃತ್ತು, ಚರ್ಮ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಸಾಕಷ್ಟು ಪರಿಣಾರ ನೀಡುತ್ತದೆ. (Lifestyle News In Kannada)  

Written by - Nitin Tabib | Last Updated : Mar 24, 2024, 01:17 PM IST
  • ಕೆಲವೊಮ್ಮೆ ನಮ್ಮ ದೇಹದಲ್ಲಿನ ಟಾಕ್ಸಿನ್‌ಗಳಿಂದ ತೂಕವೂ ಹೆಚ್ಚಾಗಲು ಪ್ರಾರಂಭಿಸುತ್ತದೆ.
  • ಅಂತಹ ಪರಿಸ್ಥಿತಿಯಲ್ಲಿ, ಬೂದು ಕುಂಬಳಕಾಯಿ ರಸವು ಪ್ರಯೋಜನಕಾರಿಯಾಗಿದೆ.
  • ಕುಂಬಳಕಾಯಿ ರಸದಲ್ಲಿ ಕೊಬ್ಬಿನ ಅಂಶವು ತುಂಬಾ ಕಡಿಮೆ ಇರುತ್ತದೆ.
Ash Gourd Benefits: ಶರೀರದಿಂದ ವಿಷಕಾರಿ ಪದಾರ್ಥ ಹೊರಹಾಕಿ ತೂಕ ಇಳಿಕೆಗೆ ಸಹಕರಿಸುತ್ತೆ ಈ ಜ್ಯೂಸ್! title=

Health Benefits Of Ash Gourd: ಹಲವು ಪೋಷಕಾಂಶಗಳ ಆಗರ: ಬೂದು ಕುಂಬಳಕಾಯಿ  ಕ್ಯಾಲ್ಸಿಯಂ, ಸತು, ಕಬ್ಬಿಣ, ರಂಜಕ, ಮೆಗ್ನೀಸಿಯಮ್, ಮ್ಯಾಂಗನೀಸ್ ಮತ್ತು ತಾಮ್ರ, ನಿಯಾಸಿನ್, ಥಯಾಮಿನ್, ವಿಟಮಿನ್ ಸಿ ಮತ್ತು ರೈಬೋಫ್ಲಾವಿನ್ ಅನ್ನು ಹೊಂದಿರುತ್ತದೆ. ಈ ಎಲ್ಲಾ ಪೋಷಕಾಂಶಗಳು ಒಟ್ಟಾರೆ ನಮ್ಮ ಆರೋಗ್ಯಕ್ಕೆ ಅತ್ಯಗತ್ಯವಾಗಿವೆ.(Lifestyle News In Kannada)

ಆರೋಗ್ಯಕರ ಜೀರ್ಣಕ್ರಿಯೆಗೆ ಸಹಕಾರಿ (Ash Gourd For Better Digestion)
ದೇಹದಲ್ಲಿ ವಿಷಕಾರಿ ಅಂಶಗಳ ಉಪಸ್ಥಿತಿಯಿಂದಾಗಿ, ಜೀರ್ಣಾಂಗ ವ್ಯವಸ್ಥೆಯು ಕ್ಷೀಣಿಸಲು ಪ್ರಾರಂಭಿಸುತ್ತದೆ (benefits of ash gourd juice in empty stomach). ಆದರೆ ಬೂದು ಕುಂಬಳ ಕಾಯಿ ದೇಹದಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಗಳಿಂದ ಶೀಘ್ರ ಪರಿಹಾರ ನೀಡುತ್ತದೆ(ash gourd benefits for liver).

ಅಲ್ಸರ್ ಗೆ ರಾಮಬಾಣ ಚಿಕಿತ್ಸೆ (Ash Gourd For Ulcer Treatment)
ಇದು ಪೆಪ್ಟಿಕ್ ಅಲ್ಸರ್ ಅನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು ,  ಹೊಟ್ಟೆಯಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದು ಕರುಳಿನಿಂದ ಬ್ಯಾಕ್ಟೀರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ಶ್ವಾಸಕೋಶವನ್ನು ಆರೋಗ್ಯವಾಗಿರಿಸುತ್ತದೆ (Ash Gourd For Lungs Health)
ಬೂದು ಕುಂಬಳಕಾಯಿಯಲ್ಲಿರುವ ಹಲವು ಗುಣಲಕ್ಷಣಗಳು ಕಫ ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಇದು ಲೋಳೆಯ ಮ್ಯೂಕಸ್ ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

ತೂಕ ಇಳಿಕೆಗೆ ಸಹಾಯ ಮಾಡುತ್ತದೆ (Ash Gourd For Weight Loss)
ಕೆಲವೊಮ್ಮೆ ನಮ್ಮ ದೇಹದಲ್ಲಿನ ಟಾಕ್ಸಿನ್‌ಗಳಿಂದ ತೂಕವೂ ಹೆಚ್ಚಾಗಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಬೂದು ಕುಂಬಳಕಾಯಿ ರಸವು ಪ್ರಯೋಜನಕಾರಿಯಾಗಿದೆ. ಕುಂಬಳಕಾಯಿ ರಸದಲ್ಲಿ ಕೊಬ್ಬಿನ ಅಂಶವು ತುಂಬಾ ಕಡಿಮೆ ಇರುತ್ತದೆ. ಇದು ಹೆಚ್ಚು ಫೈಬರ್ ಆದರೆ ಕಡಿಮೆ ಕಾರ್ಬೋಹೈಡ್ರೇಟ್ ಅನ್ನು ಹೊಂದಿರುತ್ತದೆ. ವಿಟಮಿನ್ ಬಿ -3 ಇರುವ ಕಾರಣ, ಇದು ದೇಹದಲ್ಲಿ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ರಕ್ತಹೀನತೆ ಮತ್ತು ದೌರ್ಬಲ್ಯದಿಂದ ಬಳಲುತ್ತಿರುವ ಜನರಿಗೆ ಈ ರಸವು ಹೆಚ್ಚು ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ-Weight Reduce Tips: ಕೆಲವೇ ದಿನಗಳಲ್ಲಿ ಹೊಟ್ಟೆ ಭಾಗ

ಈ ವಿಷಯಗಳನ್ನು ನೆನಪಿನಲ್ಲಿಡಿ (Tips To Consume Ash Gourd Juice)
>> ನೀವು ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಅದು ನಿಮಗೆ ಹೆಚ್ಚು ಪ್ರಯೋಜನಗಳನ್ನು ನೀಡುತ್ತದೆ.
>> ಯಾವಾಗಲೂ ತಾಜಾ ಬೂದು ಕುಂಬಳಕಾಯಿ ರಸವನ್ನು ಕುಡಿಯಿರಿ. ಏಕೆಂದರೆ ದೀರ್ಘಕಾಲ ಅದನ್ನು ಶೇಖರಿಸಿ ಇಟ್ಟರೆ ಅದರ ಪೋಷಕಾಂಶಗಳು ಕಡಿಮೆಯಾಗತೊಡಗುತ್ತವೆ.
>> ಯಾವುದೇ ಆರೋಗ್ಯ ಸಮಸ್ಯೆಗೆ ಔಷಧಿ ಸೇವಿಸುವ ಮುನ್ನ ವೈದ್ಯರ ಸಲಹೆ ತೆಗೆದುಕೊಳ್ಳಿ. 3 ವಾರಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಸೇವಿಸಬೇಡಿ.
>> ಬೂದು ಕುಂಬಳಕಾಯಿಯ ಗುಣಧರ್ಮ ತಂಪಾಗಿರುತ್ತದೆ.  ಹೀಗಾಗಿ, ಜ್ವರದಿಂದ ಬಳಲುತ್ತಿರುವವರು ಇದನ್ನು ಸೇವಿಸಬಾರದು.

ಇದನ್ನೂ ಓದಿ-Adulterated Salt Effects: ನಕಲು ಉಪ್ಪು ಮೆದುಳಿನ ಆರೋಗ್ಯಕ್ಕೆ ಹಾನಿಕಾರಕ, ಈ ರೀತಿ ಪತ್ತೆ ಹಚ್ಚಿ!

(Disclaimer- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News