ನವದೆಹಲಿ : ಕಿಡ್ನಿಗೆ ಸಂಬಂಧಿಸಿದ ರೋಗಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 10 ರಂದು ವಿಶ್ವ ಕಿಡ್ನಿ ದಿನವನ್ನು (Word Kidney day) ಆಚರಿಸಲಾಗುತ್ತದೆ. ಕಿಡ್ನಿ ನಮ್ಮ ದೇಹದ ಪ್ರಮುಖ ಅಂಗವಾಗಿದ್ದು, ದೇಹದ ಕಲ್ಮಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.  ಹೀಗಿರುವಾಗ , ಮೂತ್ರಪಿಂಡದ ಆರೋಗ್ಯಕ್ಕಾಗಿ ಕೆಲವು ಅಭ್ಯಾಸಗಳಿಂದ ದೂರವಿರುವುದು ಅವಶ್ಯಕ, ಇಲ್ಲದಿದ್ದರೆ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. 


COMMERCIAL BREAK
SCROLL TO CONTINUE READING

ಕಿಡ್ನಿ ಆರೋಗ್ಯಕ್ಕಾಗಿ ಈ ಅಭ್ಯಾಸಗಳನ್ನು ಬಿಟ್ಟುಬಿಡಿ :
1. ಹೆಚ್ಚು ಸಕ್ಕರೆ ತಿನ್ನುವುದು :
ನೀವು ಹೆಚ್ಚು ಸಕ್ಕರೆಯನ್ನು (Sugar) ಸೇವಿಸಿದರೆ, ಅದು ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು (High Blood pressure) ಮಧುಮೇಹದಂತಹ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಇದು ಮೂತ್ರಪಿಂಡದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತದೆ. ಆದ್ದರಿಂದ ಸಿಹಿ ಖಾದ್ಯದಿಂದ ದೂರವಿರುವುದು ಉತ್ತಮ.


2. ಧೂಮಪಾನ :
ಧೂಮಪಾನವು ಅನೇಕ ಗಂಭೀರ ಕಾಯಿಲೆಗಳ ಮೂಲವೆಂದು ಪರಿಗಣಿಸಲಾಗಿದೆ. ಇದು ಕ್ಯಾನ್ಸರ್ (Cancer) ಅಪಾಯವನ್ನು ಹೆಚ್ಚಿಸುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ಸತ್ಯ. ಧೂಮಪಾನವು ಮೂತ್ರದಲ್ಲಿ ಪ್ರೋಟೀನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದು ಮೂತ್ರಪಿಂಡಗಳನ್ನು ಹಾನಿಗೊಳಿಸುತ್ತದೆ. 


ಇದನ್ನೂ ಓದಿ :  ಈ ಮೂರು ರೀತಿಯ ಹಾಲು ಕುಡಿಯುವ ಮೂಲಕ ಡಯಾಬಿಟೀಸ್ ನಿಯಂತ್ರಣದಲ್ಲಿಡಬಹುದು, ಸೇವನೆ ಸಮಯ ಹೀಗಿರಲಿ


3. ನಿದ್ರೆಯ ಕೊರತೆ :
ಉತ್ತಮ ನಿದ್ರೆಯನ್ನು ಪಡೆಯುವುದು ದೇಹದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಮೂತ್ರಪಿಂಡದ ಕಾರ್ಯವು ಮಲಗುವ ಚಕ್ರಕ್ಕೆ ನೇರವಾಗಿ ಸಂಬಂಧಿಸಿರುವುದರಿಂದ ಮೂತ್ರಪಿಂಡದ ಆರೋಗ್ಯಕ್ಕೆ ಇದು ತುಂಬಾ ಮುಖ್ಯವಾಗಿದೆ (Kidney Health).


4. ಮದ್ಯಪಾನ :
ಹೆಚ್ಚು ಆಲ್ಕೊಹಾಲ್ ಸೇವಿಸುವ ಜನರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯ ಅಪಾಯವನ್ನು ಹೊಂದಿರುತ್ತಾರೆ (Diet for Kidney Health). ಇಂತಹ ಪರಿಸ್ಥಿತಿಯಲ್ಲಿ ಮದ್ಯಪಾನದಿಂದ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ.


ಇದನ್ನೂ ಓದಿ : ಸರಿಯಾದ ಸಮಯದಲ್ಲಿ ನೀರು ಕುಡಿಯುವ ಮೂಲಕವೂ ದೇಹ ತೂಕವನ್ನು ಕಳೆದುಕೊಳ್ಳಬಹುದು


5. ಹೆಚ್ಚು ಉಪ್ಪು ತಿನ್ನುವುದು :
ಹೆಚ್ಚು ಉಪ್ಪು ಅಂದರೆ ಸೋಡಿಯಂ ಇರುವ ಆಹಾರ ಸೇವನೆಯಿಂದ ರಕ್ತದೊತ್ತಡ ಗಣನೀಯವಾಗಿ ಹೆಚ್ಚಾಗುತ್ತದೆ. ಇದರಿಂದ ಕಿಡ್ನಿ ಸಂಬಂಧಿ ಕಾಯಿಲೆಗಳು ಬರುವ ಅಪಾಯವಿದೆ.  ಉಪ್ಪಿನ ಬಳಕೆಯನ್ನು ಮಿತಿಗೊಳಿಸುವುದು ಒಳ್ಳೆಯದು.

 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.