Aloe Vera Juice Benefits: ಇತರ ಹಸಿರು ಸಸ್ಯಗಳಂತೆ ಅಲೋವೆರಾ ಕೂಡ ಹಲವು ಔಷಧೀಯ ಗುಣಗಳಿಂದ ಕೂಡಿದೆ. ಹಾಗಾಗಿಯೇ, ಅಲೋವೆರಾವನ್ನು ಆರೋಗ್ಯಕ್ಕೆ ಬಲು ಪ್ರುಯೋಜನಕಾರಿ ಎಂದು ಹೇಳಲಾಗುತ್ತದೆ. ಸಾಮಾನ್ಯವಾಗಿ ಅಲೋವೆರಾವನ್ನು ಚರ್ಮದ ಆರೋಗ್ಯಕ್ಕೆ ಉತ್ತಮ, ಕೂದಲ ಆರೈಕೆಯಲ್ಲಿ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಅನೇಕ ರೋಗಗಳಿಂದ ದೂರ ಉಳಿಯಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಅಲೋವೆರಾದಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಬಿ6 ಮತ್ತು ವಿಟಮಿನ್ ಬಿ12 ಸಮೃದ್ಧವಾಗಿದೆ. ಇದರಲ್ಲಿ  ಸೋಡಿಯಂ, ಕಬ್ಬಿಣ, ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್, ಸತು, ಕ್ರೋಮಿಯಂ, ಸೆಲೆನಿಯಮ್ ಮತ್ತು ಕ್ಯಾಲ್ಸಿಯಂನಂತಹ ಖನಿಜಗಳು ಕೂಡ ಕಂಡುಬರುತ್ತವೆ. ವಿಶೇಷವಾಗಿ ಚಳಿಗಾಲದಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅಲೋವೆರಾ ಜ್ಯೂಸ್ ತಯಾರಿಸುವುದು ಹೇಗೆ? ಅದರ ಪ್ರಯೋಜನಗಳೇನು ತಿಳಿಯೋಣ...


COMMERCIAL BREAK
SCROLL TO CONTINUE READING

ಅಲೋವೆರಾ ಜ್ಯೂಸ್ ತಯಾರಿಸಲು ಹೀಗೆ ಮಾಡಿ:
ಮೊದಲಿಗೆ ಅಲೋವೆರಾ ಸಿಪ್ಪೆ ತೆಗೆದು ಅದನ್ನು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿಕೊಳ್ಳಿ. ಬಳಿಕ ಅದನ್ನು ಬಿಸಿ ನೀರಿನಲ್ಲಿ ಹಾಕಿ ಕುಡಿಯಲು ಬಿಡಿ. ಸ್ವಲ್ಪ ಸಮಯ ಅದನ್ನು ಕುದಿಸಿದ ನಂತರ  ಅಲೋವೆರಾದ ಪೋಷಕಾಂಶಗಳು ನೀರಿಗೆ ಸೇರುತ್ತವೆ. ನಂತರ ಆ ನೀರನ್ನು ಫಿಲ್ಟರ್ ಮಾಡಿ ಅದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿ.


ಅಲೋವೆರಾ ಜ್ಯೂಸ್ ಸೇವನೆಯ ಪ್ರಯೋಜನಗಳೇನು?
ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ:

ಅಲೋವೆರಾ ಜ್ಯೂಸ್‌ನಲ್ಲಿರುವ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಚಳಿಗಾಲದಲ್ಲಿ ಸಾಮಾನ್ಯಾಗಿ ಕಾಡುವ ಶೀತ ಮತ್ತು ಜ್ವರದಂತಹ ಕಾಯಿಲೆಗಳಿಂದ ದೂರ ಉಳಿಯಬಹುದು.


ಇದನ್ನೂ ಓದಿ- ಶುಗರ್ ಕಂಟ್ರೋಲ್ ಆಗುತ್ತಿಲ್ಲ ಎಂದಾದರೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು


ಜೀರ್ಣಕ್ರಿಯೆಗೆ ಒಳ್ಳೆಯದು:
ಅಲೋವೆರಾ ಜ್ಯೂಸ್ ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಪೋಷಕಾಂಶಗಳು ಗ್ಯಾಸ್, ಅಸಿಡಿಟಿ ಮತ್ತು ಅಜೀರ್ಣ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಕರುಳಿಗೆ ಸಂಬಂಧಿಸಿದ ಸಮಸ್ಯೆ ಇರುವವಫ್ರು ಪ್ರತಿದಿನ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಪರಿಹಾರ ಪಡೆಯಬಹುದು.


ತೂಕ ಇಳಿಕೆ:
ಆಲೋವೆರಾದಲ್ಲಿ ಆಂಟಿಆಕ್ಸಿಡೆಂಟ್‌ಗಳು ಕೂಡ ಹೆಚ್ಚಾಗಿ ಕಂಡು ಬರುತ್ತವೆ. ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಚಯಾಪಚಯ ಸುಧಾರಿಸುತ್ತದೆ. ಇದು ತೂಕ ನಷ್ಟಕ್ಕೂ ಸಹಕಾರಿ ಆಗಿದೆ. 


ಇದನ್ನೂ ಓದಿ- Hot Water Bath : ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನ ಆರೋಗ್ಯಕ್ಕೆ ಹಾನಿ : ಎಚ್ಚರದಿಂದಿರಿ!


ಚರ್ಮಕ್ಕೆ ಪ್ರಯೋಜನಕಾರಿ:
ಅಲೋವೆರಾ ಆರೋಗ್ಯಕ್ಕೆ ಮಾತ್ರವಲ್ಲದೆ ಚರ್ಮಕ್ಕೂ ಪ್ರಯೋಜನಕಾರಿಯಾಗಿದೆ. ಅಲೋವೆರಾದಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಸಿ ಇದ್ದು ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಮೊಡವೆಗಳು, ಸುಕ್ಕುಗಳು ಮತ್ತು ಶುಷ್ಕತೆಯಂತಹ ಅನೇಕ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ..