ಬೆಂಗಳೂರು : ನಮ್ಮ ಆರೋಗ್ಯವು ಸಂಪೂರ್ಣವಾಗಿ ನಮ್ಮ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಜಂಕ್ ಫುಡ್ ನತ್ತ ವಾಲುತ್ತಿದ್ದಾರೆ. ಇದು ನಮ್ಮ ಆರೋಗ್ಯದ ಮೇಲೆ ಕೂಡಾ ಪರಿಣಾಮ ಬೀರುತ್ತದೆ.  ಇನ್ನು ನಾವು ಏನು ತಿನ್ನುತ್ತೇವೆ ಎನ್ನುವುದು ನಮ್ಮ ಕೂದಲಿನ ಮೇಲೆ ಬಹಳವಾಗಿ ಪರಿಣಾಮ ಬೀರುತ್ತದೆ. ಕೆಟ್ಟ ಆಹಾರ ಪದ್ದತಿಯಿಂದಾಗಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ    ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಸ್ಯೆಯ ಪರಿಹಾರಕ್ಕಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಶಾಂಪೂ, ಕಂಡಿಷನರ್, ಎಣ್ಣೆ, ಬಣ್ಣ ಇತ್ಯಾದಿಗಳನ್ನು ಬಳಸುತ್ತೇವೆ. ಆದರೆ ಇವುಗಳಲ್ಲಿ ಅಪಾಯಕಾರಿ ರಾಸಾಯನಿಕ ಸೇರಿರುತ್ತವೆ. ಒಂದು ಸಮಸ್ಯೆಯ ಪರಿಹಾರದ ಬದಲಿಗೆ ಮತ್ತೊಂದು ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದರೆ ಈಗ  ನಾವು ಹೇಳುವ ಮನೆಮದ್ದನ್ನು ಬಳಸಿದರೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ಸಿಗುತ್ತದೆ. 


COMMERCIAL BREAK
SCROLL TO CONTINUE READING

ಕೂದಲಿನ ಆರೋಗ್ಯಕ್ಕೆ ಕರಿ ಬೇವು : 
ಕರಿಬೇವಿನ ಎಲೆಗಳು ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ. ಮೆಲನಿನ್ ಕೊರತೆಯಿಂದಾಗಿ, ಕೂದಲು ಬಿಳಿಯಾಗುತ್ತವೆ. ಕರಿಬೇವಿನ ಎಲೆಗಳು ಕೂದಲಿನಲ್ಲಿರುವ ಮೆಲನಿನ್ ಕೊರತೆಯನ್ನು ಹೋಗಲಾಡಿಸುತ್ತದೆ. ಕರಿಬೇವಿನ ಎಲೆಗಳನ್ನು ಬಳಸುವುದರಿಂದ ಕೂದಲು ಹೊಳೆಯುತ್ತದೆ ಮತ್ತು ಮೃದುವಾಗುತ್ತದೆ. 


ಇದನ್ನೂ ಓದಿ : High Cholesterol: ಕೆಟ್ಟ ಕೊಲೆಸ್ಟ್ರಾಲ್‌ನಿಂದ ಮುಕ್ತಿ ಪಡೆಯಲು ಈ ಆಹಾರಗಳನ್ನು ತಪ್ಪದೇ ಸೇವಿಸಿ


ಕರಿಬೇವಿನ ಎಲೆಗಳಿಂದ ಹೇರ್ ಮಾಸ್ಕ್ : 
ಮಾಸ್ಕ್ ಮಾಡಲು, ಕರಿಬೇವಿನ ಎಲೆಗಳು, ತೆಂಗಿನ ಎಣ್ಣೆ, ಬೇವಿನ ಎಲೆಗಳು, ವಿಟಮಿನ್ ಇ ಕ್ಯಾಪ್ಸುಲ್ ಗಳು ಮತ್ತು ಮೊಸರು ಬೇಕಾಗುತ್ತದೆ. ಮಾಸ್ಕ್ ಮಾಡಲು ಕರಿಬೇವಿನ ಸೊಪ್ಪು ಮತ್ತು ಬೇವಿನ ಸೊಪ್ಪನ್ನು ಮಿಕ್ಸಿಯಲ್ಲಿ ರುಬ್ಬಿ ಬಟ್ಟಲಿನಲ್ಲಿ ತೆಗೆದುಕೊಂಡು ಇಟ್ಟುಕೊಳ್ಳಿ. ನಂತರ ಇನ್ನೊಂದು ಪಾತ್ರೆಯಲ್ಲಿ ತೆಂಗಿನೆಣ್ಣೆ, ವಿಟಮಿನ್ ಇ ಕ್ಯಾಪ್ಸುಲ್ ಮತ್ತು ಮೊಸರು ಹಾಕಿ ಸರಿಯಾಗಿ ಬೀಟ್ ಮಾಡಿ. ಅದರ ನಂತರ ಈ ಮಿಶ್ರಣವನ್ನು ಸ್ವಲ್ಪ ಬಿಸಿ ಮಾಡಿ. ಅದು ತಣ್ಣಗಾದ ನಂತರ ಕರಿಬೇವಿನ ಸೊಪ್ಪು ಮತ್ತು ಬೇವಿನ ಸೊಪ್ಪಿನ ಮಿಶ್ರಣವನ್ನು ಹಾಕಿ ಚೆನ್ನಾಗಿ ಕಲಸಿ. ನಿಮ್ಮ ಹೇರ್ ಮಾಸ್ಕ್ ರೆಡಿಯಾಗುತ್ತದೆ. 


ಈ ರೀತಿ ಕೂದಲಿಗೆ ಹಚ್ಚಿ : 
ಕೂದಲಿಗೆ ಹೇರ್ ಮಾಸ್ಕ್ ಅನ್ನು ಹಚ್ಚುವ ಮೊದಲು, ಕೂದಲನ್ನು ಸರಿಯಾಗಿ ತೊಳೆದು ಒಣಗಿಸಿ. ನಂತರ ಕೂದಲು ಮತ್ತು ನೆತ್ತಿಯ ಮೇಲೆ ಹೇರ್ ಮಾಸ್ಕ್ ಅನ್ನು  ಹಚ್ಚಿ. ಒಂದು ಗಂಟೆಯ ನಂತರ ಮತ್ತೆ ಕೂದಲನ್ನು ತೊಳೆಯಿರಿ. ವಾರದಲ್ಲಿ ಎರಡು ಬಾರಿ ಈ ಮನೆಮದ್ದನ್ನು  ಅನುಸರಿಸುತ್ತಾ ಬನ್ನಿ, ಶೀಘ್ರದಲ್ಲಿಯೇ ಪರಿಣಾಮ ಗೋಚರಿಸುತ್ತದೆ.


ಇದನ್ನೂ ಓದಿ : ಈ ಕರೋನಾ ಲಸಿಕೆ ಹೃದಯ ಸ್ತಂಭನದ ಅಪಾಯವನ್ನು ಹೆಚ್ಚಿಸುತ್ತಿದೆಯಂತೆ.!


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.