ಸೀತಾಫಲ ಹಣ್ಣಿನಷ್ಟೇ ಆರೋಗ್ಯಕರ ಅದರ ಎಲೆಗಳು, ಏನೆಲ್ಲಾ ಪ್ರಯೋಜನಗಳಿವೆ ಗೊತ್ತೇ!
Custard Apple Leaves: ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಪೌಷ್ಟಿಕಾಂಶದ ಗುಣಗಳಿಂದ ತುಂಬಿರುತ್ತದೆ. ಸೀತಾಫಲದ ಎಲೆಗಳು ಸಹ ಔಷಧೀಯ ಗುಣಗಳನ್ನು ಹೊಂದಿವೆ.
Custard Apple : ಸೀತಾಫಲ ಹಣ್ಣು ರುಚಿ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಸೀತಾಫಲ ಹಣ್ಣಿನಲ್ಲಷ್ಟೇ ಅಲ್ಲ.. ಅದರ ಎಲೆಗಳಲ್ಲೂ ಔಷಧೀಯ ಗುಣಗಳು ತುಂಬಿವೆ. ಇವುಗಳಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಫೈಬರ್, ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿವೆ.
ಹೃದಯದ ಆರೋಗ್ಯ : ಸೀತಾಫಲದ ಎಲೆಗಳು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ಎಲೆಗಳಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಈ ಎಲೆಗಳೊಂದಿಗೆ ಚಹಾವನ್ನು ಕುಡಿಯುವುದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ : Fitness Drink: ದೇಹದ ಬೊಜ್ಜನ್ನು 15 ದಿನದಲ್ಲಿ ಕರಗಿಸುತ್ತೆ ಈ ಬೊಜ್ಜು
ಚರ್ಮದ ಆರೈಕೆ : ಸೀತಾಫಲ ಎಲೆಗಳು ಆರೋಗ್ಯಕ್ಕೆ ಮಾತ್ರವಲ್ಲ ತ್ವಚೆಯ ಆರೈಕೆಗೂ ಒಳ್ಳೆಯದು. ಸೀತಾಫಲದ ಎಲೆಗಳನ್ನು ಬೆರೆಸಿ ಆ ಮಿಶ್ರಣವನ್ನು ಚರ್ಮಕ್ಕೆ ಹಚ್ಚಿದರೆ ಚರ್ಮ ಸಂಬಂಧಿ ಕಾಯಿಲೆಗಳು ದೂರವಾಗುತ್ತವೆ.
ಮಧುಮೇಹ : ಸೀತಾಫಲ ಹಣ್ಣು ಮಧುಮೇಹ ರೋಗಿಗಳಿಗೆ ಒಳ್ಳೆಯದಲ್ಲ. ಸೀತಾಫಲ ಎಲೆಗಳು ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಈ ಎಲೆಗಳ ಚಹಾವನ್ನು ಕುಡಿಯುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ.
ಇದನ್ನೂ ಓದಿ : ಕಿಡ್ನಿ ಸ್ಟೋನ್ ಇರುವವರು ಈ ಹಣ್ಣುಗಳನ್ನು ಸೇವಿಸಿದರೆ ಕಲ್ಲು ಕರಗಿ ನೀರಾಗುವುದು !
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.