Diabetes Diet:ನೆಲ್ಲಿಕಾಯಿಯೊಂದಿಗೆ ಈ ವಸ್ತುವನ್ನು ಬೆರೆಸಿದರೆ ಮಧುಮೇಹ ರೋಗಿಗಳಿಗೆ ಸಿಗುತ್ತದೆ ಪರಿಹಾರ

Diabetes Diet: ಮಧುಮೇಹದ ಸಂದರ್ಭದಲ್ಲಿ ನೆಲ್ಲಿಕಾಯಿ ತಿನ್ನುವಂತೆ ಸೂಚಿಸಲಾಗುತ್ತದೆ. ಇದರಲ್ಲಿ ಇಂತಹ ಹಲವಾರು ಔಷಧೀಯ ಗುಣಗಳಿದ್ದು, ಇದು ದೇಹಕ್ಕೆ ಸಾಕಷ್ಟು ಪ್ರಯೋಜನವನ್ನು ನೀಡುತ್ತದೆ.

Written by - Ranjitha R K | Last Updated : May 19, 2022, 11:08 AM IST
  • ಮಧುಮೇಹ ರೋಗಿಗಳು ತಮ್ಮ ಆರೋಗ್ಯದತ್ತ ವಿಶೇಷ ಗಮನ ಹರಿಸಬೇಕಾಗುತ್ತದೆ
  • ಆರೋಗ್ಯಕರ ಆಹಾರವನ್ನು ಮಾತ್ರ ಸೇವಿಸುವುದು ಬಹಳ ಮುಖ್ಯವಾಗಿದೆ.
  • ಈ ಒಂದು ವಸ್ತುವನ್ನು ನೆಲ್ಲಿಕಾಯಿಯೊಂದಿಗೆ ಸೇರಿಸಿ
Diabetes Diet:ನೆಲ್ಲಿಕಾಯಿಯೊಂದಿಗೆ ಈ ವಸ್ತುವನ್ನು ಬೆರೆಸಿದರೆ ಮಧುಮೇಹ ರೋಗಿಗಳಿಗೆ ಸಿಗುತ್ತದೆ ಪರಿಹಾರ  title=
Diabetes Diet (file photo)

ಬೆಂಗಳೂರು : Diabetes Diet: ಮಧುಮೇಹ ರೋಗಿಗಳು ತಮ್ಮ ಆರೋಗ್ಯದತ್ತ ವಿಶೇಷ ಗಮನ ಹರಿಸಬೇಕಾಗುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ,  ಆರೋಗ್ಯಕರ ಆಹಾರವನ್ನು ಮಾತ್ರ ಸೇವಿಸುವುದು ಬಹಳ ಮುಖ್ಯವಾಗಿದೆ. ಇಲ್ಲದಿದ್ದರೆ ಬಹಳಷ್ಟು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಮಧುಮೇಹದ ಸಂದರ್ಭದಲ್ಲಿ ನೆಲ್ಲಿಕಾಯಿ ತಿನ್ನುವಂತೆ ಸೂಚಿಸಲಾಗುತ್ತದೆ. ಇದರಲ್ಲಿ ಇಂತಹ ಹಲವಾರು ಔಷಧೀಯ ಗುಣಗಳಿದ್ದು, ಇದು ದೇಹಕ್ಕೆ ಸಾಕಷ್ಟು ಪ್ರಯೋಜನವನ್ನು ನೀಡುತ್ತದೆ.

ಈ ಒಂದು ವಸ್ತುವನ್ನು ನೆಲ್ಲಿಕಾಯಿಯೊಂದಿಗೆ ಸೇರಿಸಿ : 
ನೆಲ್ಲಿಕಾಯಿಯೊಂದಿಗೆ ಜೇನುತುಪ್ಪವನ್ನು ಬೆರೆಸಿದರೆ, ಅದು ನಮ್ಮ ದೇಹಕ್ಕೆ ಲಾಭದಾಯಕವಾಗಿ ಪರಿಣಮಿಸಲಿದೆ. ಈ ಎರಡೂ ಆಹಾರಗಳು ಅನೇಕ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಇವೆರಡನ್ನೂ ಒಟ್ಟಿಗೆ ಸೇರಿಸಿ ತಿಂದರೆ ಅದರ ಪರಿಣಾಮ ಕೂಡಾ ದ್ವಿಗುಣವಾಗಿರುತ್ತದೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದೆ, ಜೊತೆಗೆ ನಂಜುನಿರೋಧಕ, ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ. ಜೀವಸತ್ವಗಳು, ಖನಿಜಗಳು ಮತ್ತು ಕಾರ್ಬೋಹೈಡ್ರೇಟ್ ಜೇನುತುಪ್ಪದಲ್ಲಿ ಕಂಡುಬರುತ್ತವೆ.

ಇದನ್ನೂ ಓದಿ :  Raisins Benefits : ಒಣದ್ರಾಕ್ಷಿ ತಿನ್ನುವುದರಿಂದ ದೇಹಕ್ಕಿದೆ 4 ಪ್ರಯೋಜನಗಳು!

ನೆಲ್ಲಿಕಾಯಿ ಮತ್ತು ಜೇನುತುಪ್ಪವನ್ನು ಒಟ್ಟಿಗೆ ತಿನ್ನುವುದರಿಂದ ಆಗುವ ಪ್ರಯೋಜನಗಳು :
1. ಮಧುಮೇಹ ನಿಯಂತ್ರಣ : 
ನೆಲ್ಲಿಕಾಯಿಯಲ್ಲಿನ ಮಧುಮೇಹ ವಿರೋಧಿ ಗುಣಲಕ್ಷಣಗಳು ಮಧುಮೇಹ ರೋಗಿಗಳಿಗೆ ವರದಾನವೆಂದೇ ಹೇಳಬಹುದು. ಹಾಗಾಗಿ ನೆಲ್ಲಿಕಾಯಿ ಮತ್ತು ಜೇನುತುಪ್ಪವನ್ನು ಒಟ್ಟಿಗೆ ಬೆರೆಸಿ ತಿಂದರೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಇದು ತುಂಬಾ ಸಹಕಾರಿಯಾಗಿರುತ್ತದೆ. 

2. ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ : 
ಆಮ್ಲಾ ಅಥವಾ ನೆಲ್ಲಿಕಾಯಿಯಲ್ಲಿ ಉತ್ತಮ ಪ್ರಮಾಣದಲ್ಲಿ ಫೈಬರ್‌ ಇರುತ್ತದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿಂದರೆ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಮಲ ವಿಸರ್ಜನೆಯಲ್ಲಿ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. 

ಇದನ್ನೂ ಓದಿ : ಫ್ಯಾಟ್ ರಿಮೂವಲ್ ಸರ್ಜರಿ ಎಷ್ಟು ಸುರಕ್ಷಿತ? ಇಲ್ಲಿದೆ ವೈದ್ಯರ ಉತ್ತರ!

3. ಕೂದಲಿಗೆ ಪ್ರಯೋಜನಕಾರಿ : 
ಕೂದಲಿನ ಆರೋಗ್ಯಕ್ಕಾಗಿ ಬಳಸುವ ಪ್ರಾಡಕ್ಟ್ ಗಳಲ್ಲಿ ನೆಲ್ಲಿಕಾಯಿಯ ಬಳಕೆ ಇದ್ದೇ ಇರುತ್ತದೆ. ಇದು ಕೂದಲನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ. ಜೇನುತುಪ್ಪವನ್ನು ನೆಲ್ಲಿಕಾಯಿಯೊಂದಿಗೆ ಬೆರೆಸಿ ಸೇವಿಸಿದರೆ  ಸ್ಕಾಲ್ಪ್ ನ ಸೋಂಕಿನಿಂದ ಮುಕ್ತಿ ಪಡೆಯಬಹುದು.

4. ರೋಗನಿರೋಧಕ ಶಕ್ತಿಹೆಚ್ಚುತ್ತದೆ : 
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಾರೆ. ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದರೆ, ಯಾವುದೇ ರೀತಿಯ ಸೋಂಕಿನ ಅಪಾಯವನ್ನು ತಪ್ಪಿಸಬಹುದು. ನೆಲ್ಲಿಕಾಯಿ ಜೊತೆಗೆ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಜೇನುತುಪ್ಪ ಸೇವನೆಯಿಂದ ದೇಹದಲ್ಲಿ ಆ್ಯಂಟಿ ಬಾಡಿ ರೂಪುಗೊಳ್ಳಲು ಪ್ರಾರಂಭಿಸುತ್ತವೆ.

 

( ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News