ಮನೆಯ ದಕ್ಷಿಣ ದಿಕ್ಕಿಗೆ ತಪ್ಪಿಯೂ ಈ ಮೂರು ಸಸಿಗಳನ್ನು ಇಡಲೇಬಾರದು !

Vastu Tips for plant : ಕೆಲವು ಗಿಡಗಳನ್ನು  ನಿಯಮಕ್ಕೆ ಅನುಸಾರ ನೆಡದಿದ್ದಲ್ಲಿ ಮನೆಯಲ್ಲಿ ಜಗಳಗಳು ನಡೆಯುತ್ತವೆ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ.   

Written by - Ranjitha R K | Last Updated : Dec 21, 2023, 05:59 PM IST
  • ಮನೆಯಲ್ಲಿ ಗಿಡಗಳನ್ನು ನೆಡುವುದು ತುಂಬಾ ಒಳ್ಳೆಯದು.
  • ಮರಗಳನ್ನು ನೆಡುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಬರುತ್ತದೆ
  • ದಕ್ಷಿಣ ದಿಕ್ಕಿಗೆ ಈ ಗಿಡಗಳನ್ನು ನೆಟ್ಟರೆ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮನೆಯ ದಕ್ಷಿಣ ದಿಕ್ಕಿಗೆ ತಪ್ಪಿಯೂ ಈ ಮೂರು ಸಸಿಗಳನ್ನು ಇಡಲೇಬಾರದು ! title=

Vastu Tips for plant : ಮನೆಯಲ್ಲಿ ಗಿಡಗಳನ್ನು ನೆಡುವುದು ತುಂಬಾ ಒಳ್ಳೆಯದು. ಮರಗಳನ್ನು ನೆಡುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಬರುತ್ತದೆ ಮತ್ತು ನಕಾರಾತ್ಮಕತೆ ದೂರವಾಗುತ್ತದೆ. ಸಸ್ಯಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ.ಕೆಲವು ಗಿಡಗಳನ್ನು  ನಿಯಮಕ್ಕೆ ಅನುಸಾರ ನೆಡದಿದ್ದಲ್ಲಿ ಮನೆಯಲ್ಲಿ ಜಗಳಗಳು ನಡೆಯುತ್ತವೆ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ದಕ್ಷಿಣ ದಿಕ್ಕಿನಲ್ಲಿ ನೆಡಬಾರದು ಎನ್ನುವಂಥಹ ಮೂರು ಸಸ್ಯಗಳನ್ನು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ಈ ಸಸ್ಯಗಳನ್ನು ಒಂದು ವೇಳೆ  ದಕ್ಷಿಣ ದಿಕ್ಕಿಗೆ ನೆಟ್ಟರೆ ಬಹಳಷ್ಟು  ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

1. ತುಳಸಿ ಗಿಡ  : 
ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಲಕ್ಷ್ಮೀ ದೇವಿ ನೆಲೆಸಿದ್ದಾಳೆ ಎಂದು ಹೇಳಲಾಗುತ್ತದೆ. ಇದೆ ಕಾರಣಕ್ಕೆ ಈ ಗಿಡವನ್ನು ನಿತ್ಯವೂ ಪೂಜಿಸಬೇಕು. ಅಪ್ಪಿತಪ್ಪಿಯೂ ತುಳಸಿ ಗಿಡವನ್ನು ದಕ್ಷಿಣ ದಿಕ್ಕಿನಲ್ಲಿ ನೆಡಬಾರದು. ಇದು ಹಣಕಾಸಿನ ಸಮಸ್ಯೆಗಳಿಗೆ ಕಾರಣವಾಗಬಹುದು. ತುಳಸಿ ಗಿಡವನ್ನು ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ನೆಡುವುದು ಮಂಗಳಕರವಾಗಿದೆ. 

ಇದನ್ನೂ ಓದಿ : ಕ್ರಿಸ್‌ಮಸ್‌ ದಿನವನ್ನು 'ಬಿಗ್ ಡೇ' ಎಂದು ಏಕೆ ಕರೆಯುತ್ತಾರೆ ? ನಿಮಗೆ ಇದು ತಿಳಿದಿದೆಯೇ

2. ಮನಿ ಪ್ಲಾಂಟ್ : 
ಹಿಂದೂ ಧರ್ಮದಲ್ಲಿ ಮನಿ ಪ್ಲಾಂಟ್ ಅನ್ನು ಕೂಡಾ ಮಂಗಳಕರ ಎಂದು ಹೇಳಲಾಗಿದೆ. ಬಹುತೇಕ ಮನೆಗಳಲ್ಲಿ ಮನಿ ಪ್ಲಾಂಟ್ ಇದ್ದೇ ಇರುತ್ತದೆ. ಈ ಸಸ್ಯಕ್ಕೆ ಸಂಬಂಧಿಸಿದ ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸದಿದ್ದರೆ, ಬಹಳಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಇದರ ಪ್ರಕಾರ ದಕ್ಷಿಣ ದಿಕ್ಕಿನಲ್ಲಿ ಮನಿ ಪ್ಲಾಂಟ್ ನಅನ್ನು ನೆಡಬಾರದು. ಇದು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಬಹುದು. ಈ ಸಸ್ಯವನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ನೆಡಬೇಕು.

3. ಬಾಳೆ ಗಿಡ :
ಜ್ಯೋತಿಷ್ಯದಲ್ಲಿ ಬಾಳೆ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅಪ್ಪಿತಪ್ಪಿಯೂ ಈ ಗಿಡವನ್ನು ಮನೆಯ ದಕ್ಷಿಣ ದಿಕ್ಕಿಗೆ ನೆಡಬಾರದು. ಬಾಳೆ ಗಿಡವನ್ನು ಯಾವಾಗಲೂ ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ನೆಡಬೇಕು.

ಇದನ್ನೂ ಓದಿ : ನೀವು ತಿಳಿಯದೆ ಮಾಡುವ ಈ ತಪ್ಪುಗಳು ನಿಮ್ಮನ್ನು ಬೀದಿಗೆ ತರಬಹುದು ಎಚ್ಚರ..!

 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

Trending News