Health Benefits Of Pumpkin Juice: ಕೀಲು ನೋವಿನ ಸಮಸ್ಯೆಯಾಗಿರಲಿ ಅಥವಾ ಆಯಾಸದ ಸಮಸ್ಯೆಯಾಗಿರಲಿ, ದೇಹದಲ್ಲಿ ವಿಟಮಿನ್ ಡಿ ಕೊರತೆಯಿಂದ ಅನೇಕ ಆರೋಗ್ಯ ಸಮಸ್ಯೆಗಳು ವ್ಯಕ್ತಿಯನ್ನು ಸುತ್ತುವರಿಯಲು ಪ್ರಾರಂಭಿಸುತ್ತವೆ. ಆದರೆ ಕುಂಬಳಕಾಯಿ ರಸವು ಈ ಕೊರತೆಯನ್ನು ನೈಸರ್ಗಿಕವಾಗಿ ನೀಗಿಸುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ. ವಿಟಮಿನ್ ಡಿ ಜೊತೆಗೆ, ಕುಂಬಳಕಾಯಿ ರಸ ತಾಮ್ರ, ಕಬ್ಬಿಣ ಮತ್ತು ರಂಜಕದ ಆಗರವಾಗಿದೆ. ಇದಲ್ಲದೆ, ಅದು ವಿಟಮಿನ್ ಬಿ 1, ಬಿ 2, ಬಿ 6, ಸಿ, ಇ ಮತ್ತು ಬೀಟಾ-ಕ್ಯಾರೋಟಿನ್ ಗಳಿಂದ ಸಮೃದ್ಧವಾಗಿದೆ. ಕುಂಬಳಕಾಯಿಯ ರಸವನ್ನು ಕುಡಿಯುವುದರಿಂದ ವ್ಯಕ್ತಿಗೆ ಯಾವ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಮಲಬದ್ಧತೆ ಸಮಸ್ಯೆ ನಿವಾರಿಸುತ್ತದೆ
ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಹಲವು ವರ್ಷಗಳ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಕುಂಬಳಕಾಯಿ ರಸವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಮಲಬದ್ಧತೆ, ಅಲ್ಸರ್ ಮತ್ತು ಗ್ಯಾಸ್ ಸಮಸ್ಯೆಯನ್ನು ಗುಣಪಡಿಸಲು ಸಹಕಾರಿಯಾಗಿದೆ. ಇದು ಮೂತ್ರಪಿಂಡದ ವ್ಯವಸ್ಥೆಯನ್ನು ಬಲಪಡಿಸಲು ಕೆಲಸ ಮಾಡುತ್ತದೆ ಮತ್ತು ಎಲ್ಲಾ ರೀತಿಯ ಮೂತ್ರ ಸೋಂಕನ್ನು ತಡೆಯುತ್ತದೆ.
ನಿದ್ರಾಹೀನತೆ ಸಮಸ್ಯೆ ನಿವಾರಿಸುತ್ತದೆ
ನಿದ್ರಾಹೀನತೆಯ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಒಂದು ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ, ಇದಕ್ಕಾಗಿ ಜೇನುತುಪ್ಪ ಜೊತೆಗೆ ಕುಂಬಳಕಾಯಿ ಜ್ಯೂಸ್ ಅನ್ನು ಕುಡಿಯಿರಿ. ಇದರಿಂದ ಮನಸ್ಸು ಶಾಂತವಾಗಿರುತ್ತದೆ ಮತ್ತು ಉತ್ತಮ ನಿದ್ರೆ ಬರುತ್ತದೆ.
ಇದನ್ನೂ ಓದಿ-ಪುರುಷರೇ ನಿಮ್ಮ ವೈವಾಹಿಕ ಜೀವನ ಬಂಬಾಟಾಗಿರಬೇಕೇ? ಹಾಗಾದ್ರೆ, ರಾತ್ರಿಯ ನಿಮ್ಮೀ ಕೆಲಸ ಸರಿಯಾಗಿರಲಿ!
ಕೂದಲು ಆರೋಗ್ಯ ಕಾಪಾಡುತ್ತದೆ
ಹೆಚ್ಚು ಕೂದಲು ಉದುರುತ್ತಿದ್ದರೆ, ಕುಂಬಳಕಾಯಿ ರಸವನ್ನು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ ಕೂದಲಿನ ಬೆಳವಣಿಗೆ ಹೆಚ್ಚುತ್ತದೆ ಮತ್ತು ಕೂದಲು ಉದುರುವ ಸಮಸ್ಯೆಯೂ ನಿವಾರಣೆಯಾಗುತ್ತದೆ. ಇದರಲ್ಲಿ ಪೊಟ್ಯಾಸಿಯಮ್ ಹೇರಳ ಪ್ರಮಾಣದಲ್ಲಿದ್ದು, ಅದು ಹೊಸ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ಇದನ್ನೂ ಓದಿ-Cholesterol Control: ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಈ ವಿಶೇಷ ಚಟ್ನಿ!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.