ಬೆಂಗಳೂರು : ನೀವು ಏನನ್ನು ತಿನ್ನುತ್ತೀರೋ ಅದು ನಿಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ಜನರ ಆರೋಗ್ಯವು ಹದಗೆಡಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಹಲವಾರು ರೀತಿಯ ರೋಗಗಳು ನಿಮ್ಮನ್ನು ಸುತ್ತುವರೆಯುತ್ತವೆ. ಕೊಲೆಸ್ಟ್ರಾಲ್ ಕೂಡಾ ಈ ಸಮಸ್ಯೆಗಳಲ್ಲಿ ಒಂದು.
ದೇಹದಲ್ಲಿ 2 ವಿಧದ ಕೊಲೆಸ್ಟ್ರಾಲ್ ಗಳು :
ನಿಮ್ಮ ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಇದೆ. ಮೊದಲನೆಯದ್ದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಎರಡನೆಯದ್ದು ಕೆಟ್ಟ ಕೊಲೆಸ್ಟ್ರಾಲ್. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಪ್ರಾರಂಭಿಸಿದರೆ, ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೊಲೆಸ್ಟ್ರಾಲ್ ಅನ್ನು ಸಮತೋಲನಗೊಳಿಸುವುದು ಬಹಳ ಮುಖ್ಯ. ಕೆಲವು ಒಣ ಹಣ್ಣುಗಳನ್ನು ಅಥವಾ ಡ್ರೈ ಫ್ರೂಟ್ಸ್ ಸೇವಿಸುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.
ಇದನ್ನೂ ಓದಿ : ಈ ಎರಡು ವಿಚಾರಗಳ ಬಗ್ಗೆ ಎಚ್ಚರ ವಹಿಸಿದರೆ ಸಾಕು ಸದಾ ಆರೋಗ್ಯವಾಗಿರುತ್ತದೆ ಹೃದಯ ..!
1. ವಾಲ್ ನಟ್ಸ್ ತಿನ್ನಿ :
ವಾಲ್ ನಟ್ಸ್ ಸೇವಿಸುವುದರಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಇದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವಾಲ್ ನಟ್ಸ್ ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಮೊನೊಸ್ಯಾಚುರೇಟೆಡ್ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ.
2. ಬಾದಾಮಿ :
ಫಿಟ್ ಆಗಿರಲು ಪ್ರತಿದಿನ ಬಾದಾಮಿ ತಿನ್ನುವುದು ಒಳ್ಳೆಯದು. ಬಾದಾಮಿಯು ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪತ್ತಿ ಮಾಡುತ್ತದೆ. ಬಾದಾಮಿಯನ್ನು ಪ್ರತಿದಿನ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ತ್ವರಿತವಾಗಿ ಕಡಿಮೆಯಾಗುತ್ತದೆ.
3. ಪಿಸ್ತಾ :
ಪ್ರತಿದಿನ ಪಿಸ್ತಾ ತಿನ್ನಬೇಕು. ಪ್ರತಿದಿನ ಒಂದಿಷ್ಟು ಪಿಸ್ತಾ ತಿನ್ನುವುದರಿಂದ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.
ಇದನ್ನೂ ಓದಿ : Sugar Control ಗಾಗಿ ಈ ಎಲೆಯನ್ನು ಬಳಸಿ, ಇಂದೇ ನಿಮ್ಮ ಆಹಾರದಲ್ಲಿ ಇದನ್ನು ಶಾಮೀಲುಗೊಳಿಸಿ
4. ಬೀಜಗಳು ಕೂಡಾ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ :
ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಬೀಜಗಳು ಸಹ ಪ್ರಯೋಜನಕಾರಿ. ನಿಮ್ಮ ಆಹಾರದಲ್ಲಿ ಬೀಜಗಳನ್ನು ಸೇರಿಸಿದರೆ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಖಂಡಿತವಾಗಿಯೂ ಇದು ಪ್ರಯೋಜನಕಾರಿಯಾಗಿದೆ ಎನ್ನಲಾಗಿದೆ.
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಈ ಪ್ರಿಸ್ಕ್ರಿಪ್ಷನ್‌ಗಳನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.