Natural way to turn white hair black: ಕೂದಲಿನ ಉದ್ದಕ್ಕೆ ಅನುಗುಣವಾಗಿ ಒಂದು ಅಥವಾ ಎರಡು ಮೊಟ್ಟೆಗಳನ್ನು ಒಂದು ಬಟ್ಟಲಿನಲ್ಲಿ ತೆಗೆದುಕೊಂಡು ಚೆನ್ನಾಗಿ ಬೀಟ್ ಮಾಡಿ. ಇದನ್ನು ನೆತ್ತಿಯ ಮೇಲೆ ಹಾಗೂ ಕೂದಲಿನ ಬುಡದಿಂದ ತುದಿವರೆಗೆ ಹಚ್ಚಿಕೊಳ್ಳಿ. ಸುಮಾರು 30-45 ನಿಮಿಷಗಳ ಕಾಲ ಹಾಗೆಯೇ ಬಿಡಿ ಮತ್ತು ನಂತರ ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ.
ಒಂದು ಬಟ್ಟಲಿನಲ್ಲಿ ಮೊಟ್ಟೆಯನ್ನು ಒಡೆದು ಹಾಕಿ. ನಂತರ ಅದಕ್ಕೆ ಕನಿಷ್ಠ 2 ರಿಂದ 3 ಚಮಚ ಮೊಸರು ಸೇರಿಸಿ. ಈಗ ಎರಡೂ ವಸ್ತುಗಳನ್ನು ಚೆನ್ನಾಗಿ ಮಿಶ್ರಣ ಮಾಡಿ. ತಕೆಗೆ ಹಚ್ಚಿಕೊಂಡು 30 ರಿಂದ 40 ನಿಮಿಷ ಬಿಡಿ ಮತ್ತು ನಂತರ ಶಾಂಪೂ ಬಳಸಿ ತೊಳೆಯಿರಿ.
ಮೊಟ್ಟೆ ಮತ್ತು 2 ಚಮಚ ತೆಂಗಿನ ಹಾಲನ್ನು ಮಿಶ್ರಣ ಮಾಡಿ. ಚೆನ್ನಾಗಿ ಕಲಿಸಿ. ಇದನ್ನು ಕೂದಲಿಗೆ ಹಚ್ಚಿ. 10 ನಿಮಿಷಗಳ ವರೆಗೆ ಮಾತ್ರ ಬಿಟ್ಟು. ಸ್ವಲ್ಪ ಒಣಗಿದ ನಂತರ ಶಾಂಪೂ ಬಳಸಿ ತೊಳೆಯಿರಿ. ವಾರಕ್ಕೆ ಒಂದು ಅಥವಾ ಎರಡು ಬಾರಿ ಇದನ್ನು ಬಳಸಿ.
ಮೊಟ್ಟೆ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿ. ಇದನ್ನು ಕೂದಲಿಗೆ ಹಚ್ಚಿ. ಒಂದು ಗಂಟೆ ಹಾಗೆಯೇ ಇಟ್ಟ ನಂತರ, ಶಾಂಪೂ ಬಳಸಿ ತೊಳೆಯಿರಿ. ನೀವು ಇದನ್ನು ವಾರಕ್ಕೆ ಎರಡು ಬಾರಿ ಬಳಸಬಹುದು. ಈ ಹೇರ್ ಮಾಸ್ಕ್ ಶುಷ್ಕತೆಯನ್ನು ತೆಗೆದುಹಾಕುತ್ತದೆ ಮತ್ತು ಕೂದಲು ಉದುರುವಿಕೆಯ ಸಮಸ್ಯೆಯನ್ನು ನಿವಾರಿಸುತ್ತದೆ.
ಕೂದಲಿನ ಉದ್ದಕ್ಕೆ ಅನುಗುಣವಾಗಿ ಮೊಟ್ಟೆ, ಅಲೋವೆರಾ ಜೆಲ್ ಮತ್ತು ಒಂದು ಚಮಚ ತೆಂಗಿನ ಎಣ್ಣೆ ಮಿಶ್ರಣ ಮಾಡಿ. ಇದನ್ನು ಕೂದಲು ಮತ್ತು ನೆತ್ತಿಗೆ ಹಚ್ಚಿ. 30 ನಿಮಿಷಗಳ ನಂತರ, ಕೂದಲನ್ನು ಸಾಮಾನ್ಯ ನೀರು ಮತ್ತು ಶಾಂಪೂ ಬಳಸಿ ತೊಳೆಯಿರಿ. ಇದು ಬಿಳಿ ಕೂದಲನ್ನು ಕಪ್ಪಾಗಿಸುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಇದನ್ನೂ ಓದಿ: ಈ ಹಣ್ಣುಗಳನ್ನ ತಿಂದ್ರೆ ಮುಖದಲ್ಲಿ ಸುಕ್ಕು ಮಾಯ, ಹೊಳೆಯ ಚರ್ಮ ನಿಮ್ಮದಾಗುತ್ತೆ...
ಇದನ್ನೂ ಓದಿ: ತುಪ್ಪದ ಜೊತೆ ಈ ಪುಡಿ ಬೆರೆಸಿ ತಿಂದರೆ ಒಂದೇ ವಾರದಲ್ಲಿ ತೂಕ ಕಡಿಮೆಯಾಗುವುದು!









