Foot massage with milk : ಹಸಿ ಹಾಲು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಒಂದು ತಿಂಗಳ ಕಾಲ ಈ ಹಸಿ ಹಾಲಿನಿಂದ ಪಾದಗಳಿಗೆ ಮಸಾಜ್ ಮಾಡಿದರೆ ಹಲವು ಸಮಸ್ಯೆಗಳು ದೂರವಾಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಮಸಾಜ್ ನಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ. ಅದರಲ್ಲೂ ಪಾದಗಳನ್ನು ಮಸಾಜ್ ಮಾಡುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ವಿಶೇಷವಾಗಿ ರಾತ್ರಿ ಮಲಗುವ ಮುನ್ನ ಪಾದಗಳಿಗೆ ಮಸಾಜ್ ಮಾಡುವುದರಿಂದ ಚರ್ಮ ಮತ್ತು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಹಲವರು ಸಾಸಿವೆ ಎಣ್ಣೆ, ತೆಂಗಿನಎಣ್ಣೆ ಮತ್ತು ಬಾದಾಮಿ ಎಣ್ಣೆಯನ್ನು ಪಾದದ ಮಸಾಜ್‌ಗೆ ಬಳಸುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಹಸಿ ಹಾಲಿನಿಂದ  ಮಸಾಜ್ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ.  


COMMERCIAL BREAK
SCROLL TO CONTINUE READING

ಹಸಿ ಹಾಲಿನಿಂದ ಪಾದಗಳಿಗೆ ಮಸಾಜ್ ಮಾಡುವುದರಿಂದ ರಕ್ತ ಸಂಚಾರ ಸುಧಾರಿಸುತ್ತದೆ. ಇದು ದೇಹವನ್ನು ಬೆಚ್ಚಗಿಡುತ್ತದೆ. ಅಲ್ಲದೆ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಯೂ ದೂರವಾಗುತ್ತದೆ. ಅಧಿಕ ರಕ್ತದೊತ್ತಡವನ್ನು ಸಹ ನಿಯಂತ್ರಿಸಬಹುದು.  


ಇದನ್ನೂ ಓದಿ: ನೀರಿನ ಕೊರತೆಯನ್ನು ನೀಗಿಸಲು ಈ 4 ಪದಾರ್ಥಗಳನ್ನು ಸೇವಿಸಿ, ನಿರ್ಜಲೀಕರಣದ ಸಮಸ್ಯೆ ಇರುವುದಿಲ್ಲ


ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ನಿಮ್ಮ ಪಾದಗಳನ್ನು ಹಸಿ ಹಾಲಿನಿಂದ ಮಸಾಜ್ ಮಾಡಿ. ರಾತ್ರಿಯಲ್ಲಿ ನಿಮ್ಮ ಪಾದಗಳನ್ನು ಮಸಾಜ್ ಮಾಡುವುದರಿಂದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇದರಿಂದ ನೀವು ಸೇವಿಸಿದ ಆಹಾರವು ಜೀರ್ಣವಾಗಲು ತುಂಬಾ ಸುಲಭವಾಗುತ್ತದೆ.  
 
ಹೆಚ್ಚುತ್ತಿರುವ ಒತ್ತಡ ಮತ್ತು ಆಯಾಸದಿಂದಾಗಿ ಅನೇಕ ಜನರು ರಾತ್ರಿಯಲ್ಲಿ ನಿದ್ರಾಹೀನತೆ ಅನುಭವಿಸುತ್ತಿದ್ದಾರೆ. ನೀವು ರಾತ್ರಿ ಹೊತ್ತು ಉತ್ತಮ ನಿದ್ರೆ ಬಯಸಿದರೆ, ಮಲಗುವ ಮೊದಲು ನಿಮ್ಮ ಪಾದಗಳನ್ನು ಹಸಿ ಹಾಲಿನಿಂದ ಮಸಾಜ್ ಮಾಡಿ. ಈ ರೀತಿ ಮಾಡುವುದರಿಂದ ಉತ್ತಮ ನಿದ್ದೆ ಬರುತ್ತದೆ.


ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವು ಸಾಮಾನ್ಯವಾಗಿ ಮಹಿಳೆಯರನ್ನು ಕಾಡುತ್ತದೆ. ಇದು ನಿಮ್ಮ ದೈನಂದಿನ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತದೆ. ರಾತ್ರಿ ಸಮಯದಲ್ಲಿ ಹಸಿ ಹಾಲಿನಿಂದ ಪಾದಗಳಿಗೆ ಮಸಾಜ್ ಮಾಡಿದರೆ ಹೊಟ್ಟೆನೋವು ಕಡಿಮೆಯಾಗುತ್ತದೆ. 


ಇದನ್ನೂ ಓದಿ: ವಾರಕ್ಕೆ ಒಂದು ಲೋಟ ಕಬ್ಬಿನ ಜ್ಯೂಸ್… ಈ ಕಾಯಿಲೆಗಳಿಗೆ ರಾಮಬಾಣ- ದೇಹಕ್ಕಿದೆ ಅಸಂಖ್ಯಾತ ಪ್ರಯೋಜನ


ರಾತ್ರಿ ಮಲಗುವ ಮುನ್ನ ಹಸಿ ಹಾಲಿನಿಂದ ಪಾದಗಳಿಗೆ ಮಸಾಜ್ ಮಾಡುವುದರಿಂದ ಒತ್ತಡವನ್ನು ಸಾಕಷ್ಟು ಕಡಿಮೆ ಮಾಡಬಹುದು. ಹೀಗೆ ಮಾಡುವುದರಿಂದ ಪಾದದ ಅಡಿಭಾಗದಲ್ಲಿ ರಕ್ತ ಸಂಚಾರ ಹೆಚ್ಚುತ್ತದೆ. ಇದು ನರಮಂಡಲವನ್ನು ಸಡಿಲಗೊಳಿಸುತ್ತದೆ. ನೀವು ಕೆಲಸದ ಒತ್ತಡದಿಂದ ಬಳಲುತ್ತಿದ್ದರೆ ಪ್ರತಿದಿನ ರಾತ್ರಿ ನಿಮ್ಮ ಪಾದಗಳನ್ನು ಹಸಿ ಹಾಲಿನಿಂದ ಮಸಾಜ್ ಮಾಡಿ.


ಹಾಲಿನಲ್ಲಿ ಪ್ರೋಟೀನ್ ಜೊತೆಗೆ ಕ್ಯಾಲ್ಸಿಯಂ, ರಂಜಕ, ವಿಟಮಿನ್ ಬಿ, ಪೊಟ್ಯಾಸಿಯಮ್ ಮತ್ತು ವಿಟಮಿನ್ ಡಿ ನಂತಹ ಅನೇಕ ಪೋಷಕಾಂಶಗಳಿವೆ. ಹಸಿ ಹಾಲು ಮಸಾಜ್ ಮಾಡುವುದು ಆರೋಗ್ಯಕ್ಕೆ ಬಹಳಷ್ಟು ಒಳ್ಳೆಯದು.


ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.