ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುವವರಿಗೆ ಈ ಹಣ್ಣುಗಳು ವರದಾನ ..!

ಬದಲಾಗುತ್ತಿರುವ ಜೀವನಶೈಲಿ ಮತ್ತು ಕಳಪೆ ಪಆಹಾರ ಪದ್ದತಿಯಿಂದಾಗಿ ಹೆಚ್ಚಿನ ಜನರು ಹೈ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದನ್ನು ನಿಯಂತ್ರಿಸಲು ಕೆಲವು ಹಣ್ಣುಗಳು ತುಂಬಾ ಸಹಾಯಕವಾಗಿವೆ.

Written by - Ranjitha R K | Last Updated : Jun 7, 2022, 11:06 AM IST
  • ಅಧಿಕ ರಕ್ತದೊತ್ತಡ ಸಮಸ್ಯೆಯಿದ್ದರೆ ಈ ಹಣ್ಣನ್ನು ಸೇವಿಸಿ
  • ಅನೇಕರು ಹೈ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.
  • ಆಹಾರ ಪದ್ದತಿಯನ್ನು ಸುಧಾರಿಸುವುದು ಇದಕ್ಕೆ ಪರಿಹಾರವಾಗಬಹುದು
ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುವವರಿಗೆ ಈ ಹಣ್ಣುಗಳು ವರದಾನ ..!  title=
high blood pressure foods (file photo)

ಬೆಂಗಳೂರು : ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿರುವ ಜನರು ತಮ್ಮ ಜೀವನಶೈಲಿ ಮತ್ತು ಆಹಾರದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ.  ಇಲ್ಲದಿದ್ದರೆ ಅವರ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಅಧಿಕ ರಕ್ತದೊತ್ತಡ ಅಥವಾ ಹೈ ಬಿಪಿಯಿಂದ ಬಳಲುವವರು ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸಬೇಕಾಗುತ್ತದೆ. ನಿಯಮಿತವಾಗಿ ಈ ಹಣ್ಣುಗಳನ್ನು ಸೇವಿಸುತ್ತಾ ಬಂದರೆ ಹೈ ಬಿಪಿ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಬಹುದು.  

ಬಾಳೆಹಣ್ಣು :
ಬಾಳೆಹಣ್ಣು ದೇಹಕ್ಕೆ ಬಹಳ ಮುಖ್ಯ. ಬಾಳೆಹಣ್ಣಿನಲ್ಲಿ ನಮ್ಮ ಆರೋಗ್ಯಕ್ಕೆ ಅನುಕೂಲವಾಗುವ ಬಹಳಷ್ಟು ಅಂಶಗಳಿವೆ. ಇದು ದೇಹವನ್ನು ತಂಪು ಮಾಡುತ್ತದೆ. ಅಧಿಕ ರಕ್ತದೊತ್ತಡದ ಸಮಯದಲ್ಲಿ ಬಾಳೆ ಹಣ್ಣನ್ನು ಸೇವಿಸಿದರೆ ಲಾಭವಾಗುತ್ತದೆ.  ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ಈ ಹಣ್ಣು ಸಹಾಯ ಮಾಡುತ್ತದೆ.  

ಇದನ್ನೂ ಓದಿ  : Cholesterol Control Tips: ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ ಈ ಜ್ಯೂಸ್..!

ಸೇಬು ಹಣ್ಣು : 
ಸೇಬು ಹಣ್ಣನ್ನು ಪ್ರತಿ ನಿತ್ಯ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ  ಅನೇಕ ದೊಡ್ಡ ಸಮಸ್ಯೆಗಳನ್ನು ನಿವಾರಿಸಬಹುದು. ಹಾಗೆಯೇ ಹೈ ಬಿಪಿ ಸಮಸ್ಯೆ ಇದ್ದವರಿಗೂ ಸೇಬು ಹಣ್ಣು ರಾಮಬಾಣ. ಅಧಿಕ ಬಿಪಿ ಸಮಸ್ಯೆ ಇರುವವರು ತನಿತ್ಯ ಒಂದು ಸೇಬು ಹಣ್ಣನ್ನು ತಿಂದರೆ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.  

ಕಿವಿ ಹಣ್ಣು : 
ಕಿವಿ ಹಣ್ಣಿನ ಸೇವನೆ ಕೂಡಾ ಹೈ ಬಿಪಿ ಸಮಸ್ಯೆಯಲ್ಲಿ ಭಾರೀ ಪ್ರಯೋಜನ ನೀಡುತ್ತದೆ. ಈ ಹಣ್ಣಿನಲ್ಲಿರುವ ಅಂಶವು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.  ಮಾತ್ರವಲ್ಲ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುವಲ್ಲಿ ಕೂಡಾ ಈ ಹಣ್ಣು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. 

ಇದನ್ನೂ ಓದಿ  : Weight loss: ತೂಕ ಇಳಿಸಿಕೊಳ್ಳಲು ಮಲಗುವ ಮುನ್ನ ಈ ಕೆಲಸ ಮಾಡಿ

 

( ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಇದು ಯಾವುದೇ ರೀತಿಯಲ್ಲಿ  ಚಿಕಿತ್ಸೆಗೆ ಪರ್ಯಾಯವಲ್ಲ. ಹೆಚ್ಚಿನ ವಿವರಗಳಿಗಾಗಿ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News