Health Tips: ಸಂಜೆ ನಂತರ ಈ 3 ಆಹಾರಗಳನ್ನು ಸೇವಿಸಬೇಡಿ, ಇಲ್ಲದಿದ್ದರೆ ತೂಕ ಹೆಚ್ಚಾಗುತ್ತದೆ!

ತೂಕ ಕಳೆದುಕೊಳ್ಳಲು ನೀವು ಹಲವಾರು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಮೊದಲನೆಯದಾಗಿ ಸಂಜೆ 6 ಗಂಟೆಯ ನಂತರ ಹಣ್ಣುಗಳನ್ನು ತಿನ್ನುವುದನ್ನು ನಿಲ್ಲಿಸಬೇಕು ಮತ್ತು ರಾತ್ರಿಯಲ್ಲಿ ಚಿಪ್ಸ್ ತಿನ್ನುವವರು ಈ ಅಭ್ಯಾಸವನ್ನು ಸಹ ಬದಲಾಯಿಸಬೇಕಾಗುತ್ತದೆ. ಇಲ್ಲದಿದ್ದರೆ ತೂಕ ಕಡಿಮೆಯಾಗುವ ಬದಲು ಹೆಚ್ಚಾಗುತ್ತದೆ.

Written by - Puttaraj K Alur | Last Updated : Apr 9, 2022, 05:52 PM IST
  • ಸೂರ್ಯಾಸ್ತದ ನಂತರ ಹಣ್ಣುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಹಾಳಾಗುತ್ತದೆ
  • ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದು, ನಿದ್ರೆ ಮಾಡುವುದು ತುಂಬಾ ಮುಖ್ಯ
  • ಅಗತ್ಯಕ್ಕಿಂತ ಹೆಚ್ಚು ಚಹಾ ಅಥವಾ ಕಾಫಿಯನ್ನು ಕುಡಿಯುವುದು ಸಹ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆ
Health Tips: ಸಂಜೆ ನಂತರ ಈ 3 ಆಹಾರಗಳನ್ನು ಸೇವಿಸಬೇಡಿ, ಇಲ್ಲದಿದ್ದರೆ ತೂಕ ಹೆಚ್ಚಾಗುತ್ತದೆ! title=
ತೂಕ ಇಳಿಸಿಕೊಳ್ಳಲು ಉಪಯುಕ್ತ ಸಲಹೆ

ನವದೆಹಲಿ: ತೂಕವನ್ನು ಕಡಿಮೆ ಮಾಡಿಕೊಳ್ಳಲು ಅನೇಕರು ಭರ್ಜರಿ ಸರ್ಕಸ್ ಮಾಡುತ್ತಾರೆ. ಆದರೆ, ನಿರೀಕ್ಷಿತ ಫಲಿತಾಂಶ ಸಿಗದೆ ಸುಸ್ತಾಗಿ ಹೋಗಿರುತ್ತಾರೆ. ನಿಮ್ಮ ದೈನಂದಿನ ಜೀವನಶೈಲಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಂಡೆರೆ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು.ಹಾಗಾದರೆ ತೂಕ ಇಳಿಸಿಕೊಳ್ಳಲು ಸಂಜೆ 6 ಗಂಟೆಯ ನಂತರ ಯಾವ 3 ವಸ್ತುಗಳನ್ನು ಸೇವಿಸಬಾರದು ಎಂಬುದರ ಬಗ್ಗೆ ತಿಳಿದುಕೊಳ್ಳಬೇಡಿ.

1. ರಾತ್ರಿಯಲ್ಲಿ ಚಹಾ ಅಥವಾ ಕಾಫಿ ಕುಡಿಯಬೇಡಿ

ಹೆಚ್ಚಿನ ಜನರು ಅಗತ್ಯಕ್ಕಿಂತ ಹೆಚ್ಚು ಚಹಾ ಅಥವಾ ಕಾಫಿಯನ್ನು ಕುಡಿಯುತ್ತಾರೆ. ಆದರೆ, ಇದು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಲ್ಲ. ಏಕೆಂದರೆ ಕೆಫೀನ್ ಜೊತೆಗೆ ಸಕ್ಕರೆಯ ಸೇವನೆಯು ತುಂಬಾ ಹೆಚ್ಚಾಗಿರುತ್ತದೆ. ರಾತ್ರಿಯಲ್ಲಿ ಚಹಾ ಅಥವಾ ಕಾಫಿ ಕುಡಿಯುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ನಿದ್ರಾಹೀನತೆಗೆ ಕಾರಣವಾಗುತ್ತದೆ. ತೂಕ ನಷ್ಟದ ಪ್ರಕ್ರಿಯೆಯಲ್ಲಿ ಸಾಕಷ್ಟು ನಿದ್ರೆ ಪಡೆಯುವುದು ಸಹ ಬಹಳ ಮುಖ್ಯ.

ಇದನ್ನೂ ಓದಿ: Curd Benefits in Summer: ಈ ಪ್ರಯೋಜನಗಳಿಗಾಗಿ ಬೇಸಿಗೆಯಲ್ಲಿ ನಿತ್ಯ ಸೇವಿಸಿ ಒಂದು ಕಪ್ ಮೊಸರು

2. ಹಣ್ಣುಗಳನ್ನು ತಿನ್ನಬಾರದು

ಹಣ್ಣುಗಳು ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ, ಆದರೆ ಸೂರ್ಯಾಸ್ತದ ನಂತರ ಅವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಹಾಳಾಗುತ್ತದೆ. ಇದಲ್ಲದೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಸಂಜೆ 6 ಗಂಟೆಯ ನಂತರ ಹಣ್ಣುಗಳನ್ನು ಸೇವಿಸದಿರಲು ಸಾಧ್ಯವಾದಷ್ಟು ಪ್ರಯತ್ನಿಸಿ.

3. ಮಧ್ಯರಾತ್ರಿಯಲ್ಲಿ ತಿನ್ನುವ ಅಭ್ಯಾಸ ರೂಢಿಸಿಕೊಳ್ಳಬೇಡಿ

ಇಂದು ಹೆಚ್ಚಿನ ಜನರು ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದಿಲ್ಲ. ಒತ್ತಡಮಯ ಪರಿಸ್ಥಿತಿ ಹಾಗೂ ಬದಲಾದ ಜೀವನಶೈಲಿಯಿಂದ ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದನ್ನು ಬಹುತೇಕರು ಮರೆತಿರುತ್ತಾರೆ. ಸರಿಯಾದ ಸಮಯಕ್ಕೆ ನಿದ್ರೆ ಮಾಡದಿರುವುದು, ಆಹಾರ ಸೇವಿಸದಿರುವುದು ಕೆಟ್ಟ ಅಭ್ಯಾಸ. ತಡರಾತ್ರಿಯವರೆಗೆ ಎಚ್ಚರವಾಗಿರುವುದು ಹಸಿವಿನ ಭಾವನೆಯನ್ನು ಉಂಟುಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವರು ಏನನ್ನಾದರೂ ತಿನ್ನುತ್ತಾರೆ. ಈ ಹೆಚ್ಚುವರಿ ಕ್ಯಾಲೊರಿಗಳು ನಮ್ಮ ದೇಹದಲ್ಲಿ ಕೊಬ್ಬಿನ ರೂಪದಲ್ಲಿ ಸಂಗ್ರಹಗೊಳ್ಳುತ್ತವೆ. ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಹೀಗಾಗಿ ಆಹಾರ ಸೇವಿಸುವ ವಿಷಯದಲ್ಲಿ ನೀವು ಎಚ್ಚರಿಕೆ ವಹಿಸುವುದು ತುಂಬಾ ಮುಖ್ಯ.

ಇದನ್ನೂ ಓದಿ: Hing Water : ಪ್ರತಿದಿನ 'ಇಂಗು ಬೆರಿಸಿದ ನೀರು' ಕುಡಿಯಿರಿ, ಬೊಜ್ಜು ಕಡಿಮೆ ಮಾಡಿಕೊಳ್ಳಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News