Heart Attack Risk Food: ಹೃದಯಾಘಾತದ ಅಪಾಯವನ್ನು ತಪ್ಪಿಸಲು ಈ ನಾಲ್ಕು ವಸ್ತುಗಳಿಂದ ಅಂತರ ಕಾಯ್ದುಕೊಳ್ಳಿ

Heart Attack Risk Food: ಕಳಪೆ ಆಹಾರ ಪದ್ಧತಿಯಿಂದಾಗಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ.  ಈ ಕಾರಣದಿಂದಾಗಿ ನಿಮ್ಮ ದೈನಂದಿನ ದಿನಚರಿಗೆ ವಿಶೇಷ ಗಮನವನ್ನು ನೀಡಬೇಕು. ಇಲ್ಲದಿದ್ದರೆ ಹೃದಯಾಘಾತದ ಅಪಾಯವನ್ನು ಎದುರಿಸಬೇಕಾಗುತ್ತದೆ.   

Written by - Ranjitha R K | Last Updated : May 3, 2022, 01:18 PM IST
  • ಹೃದಯಾಘಾತಕ್ಕೆ ಕಾರಣವಾಗುವ ಆಹಾರಗಳು
  • ದೈನಂದಿನ ದಿನಚರಿಗೆ ವಿಶೇಷ ಗಮನವನ್ನು ನೀಡಬೇಕು
  • ಇದನ್ನು ನಿರ್ಲಕ್ಷಿಸಿದರೆ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಬಹುದು.
Heart Attack Risk Food: ಹೃದಯಾಘಾತದ ಅಪಾಯವನ್ನು ತಪ್ಪಿಸಲು ಈ ನಾಲ್ಕು ವಸ್ತುಗಳಿಂದ ಅಂತರ ಕಾಯ್ದುಕೊಳ್ಳಿ  title=
Heart Attack Risk Food (file photo)

ಬೆಂಗಳೂರು : Heart Attack Risk Food: ನಾವು ಸೇವಿಸುವ ಕೆಲವೊಂದು  ಹೃದಯಾಘಾತದ ಅಪಾಯವನ್ನು ಹೆಚ್ಚಿಸಲು ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಇಂಥಹ ಆಹಾರಗಳಿಂದ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಕಳಪೆ ಆಹಾರ ಪದ್ಧತಿಯಿಂದಾಗಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ.  ಈ ಕಾರಣದಿಂದಾಗಿ ನಿಮ್ಮ ದೈನಂದಿನ ದಿನಚರಿಗೆ ವಿಶೇಷ ಗಮನವನ್ನು ನೀಡಬೇಕು. ಇಲ್ಲದಿದ್ದರೆ ಹೃದಯಾಘಾತದ ಅಪಾಯವನ್ನು ಎದುರಿಸಬೇಕಾಗುತ್ತದೆ. ಇದನ್ನು ನಿರ್ಲಕ್ಷಿಸಿದರೆ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಬಹುದು. 

1. ಹೆಚ್ಚು ಉಪ್ಪನ್ನು ಸೇವಿಸುವುದು :
ನೀವು ಕೂಡ ಹೆಚ್ಚು ಉಪ್ಪನ್ನು ಸೇವಿಸುತ್ತಿದ್ದರೆ, ಈ ಅಭ್ಯಾಸವನ್ನು ಇಂದೇ ಬದಲಾಯಿಸಿಕೊಳ್ಳಿ.  ಏಕೆಂದರೆ ಹೆಚ್ಚು ಉಪ್ಪು ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚು ಉಪ್ಪನ್ನು ಸೇವಿಸುವುದರಿಂದ ರಕ್ತದೊತ್ತಡ ಹೆಚ್ಚಾಗುತ್ತದೆ ಎಂಬುದನ್ನು ಯಾವಾಗಲೂ ನೆನಪಿನಲ್ಲಿಡಿ. 

ಇದನ್ನೂ ಓದಿ : Benefits of raw Mango : ಶುಗರ್ ನಿಯಂತ್ರಣ ಮಾಡಲು ಮಾವಿನಕಾಯಿ ಹೇಗೆ ಸಹಾಯ ಮಾಡುತ್ತದೆ ತಿಳಿದಿದೆಯಾ?

2. ಹೆಚ್ಚು ಸಿಹಿತಿಂಡಿಗಳನ್ನು ಸೇವಿಸುವುದು :
ಇದರೊಂದಿಗೆ ಹೆಚ್ಚು ಸಕ್ಕರೆ ಇರುವ ತಿನಿಸುಗಳನ್ನು ತಿನ್ನುವುದು ಸಹ ಹೃದಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಹೆಚ್ಚು ಸಕ್ಕರೆ ತಿನ್ನುವುದರಿಂದ ದೇಹವು ಇನ್ಸುಲಿನ್ ಅನ್ನು ಬಳಸಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ ಮಧುಮೇಹದ ಅಪಾಯವೂ ಹೆಚ್ಚುತ್ತದೆ. 

3. ಮೊಟ್ಟೆಯ ಹಳದಿ ಲೋಳೆ ಕೂಡ ಅಪಾಯಕಾರಿ :
ಇದರೊಂದಿಗೆ, ನಿಮ್ಮ ಆಹಾರದಲ್ಲಿ ಮೊಟ್ಟೆಯ ಹಳದಿ ಲೋಳೆಯನ್ನು ಅತಿಯಾಗಿ ಸೇವಿಸಬೇಡಿ. ಏಕೆಂದರೆ ಮೊಟ್ಟೆಯ ಹಳದಿ ಭಾಗ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಆದ್ದರಿಂದ, ಮೊಟ್ಟೆಗಳನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿ.

ಇದನ್ನೂ ಓದಿ : Diabetes Treatment: ಡಯಾಬಿಟಿಸ್ ರೋಗಿಗಳ ಚಿಕಿತ್ಸೆ ಇನ್ಮುಂದೆ ಮತ್ತಷ್ಟು ಸುಲಭವಾಗಲಿದೆ, ಹೇಗೆ ತಿಳಿಯಲು ಸುದ್ದಿ ಓದಿ

4. ಮೈದಾ ಸೇವಿಸಬೇಡಿ :
ಮೈದಾ ಯಾವುದೇ ಸಂದರ್ಭದಲ್ಲೂ ಆರೋಗ್ಯಕ್ಕೆ ಒಳ್ಳೆಯದಲ್ಲ. ವಿಶೇಷವಾಗಿ ಹೃದ್ರೋಗಿಗಳಿಗೆ ಇದು ತುಂಬಾ ಅಪಾಯಕಾರಿ. ಇದರ ಸೇವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News