Herbal Teas Benefits: ಕೆಲವರು ಚಹಾ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಿದರೆ, ಇನ್ನೂ ಕೆಲವರು ಚಹಾ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳುತ್ತಾರೆ. ಅದರಲ್ಲೂ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಬೆಡ್ ಟೀ (Bed Tea) ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಲಾಗುತ್ತದೆ. ಆದರೆ, ನೀವು ಸಾಧಾರಣವಾಗಿ ಹಾಲಿನಿಂದ ತಯಾರಿಸಿದ ಚಹಾ ಸೇವಿಸುವುದಕ್ಕಿಂತ ಕೆಲವು ಗಿಡಮೂಲಿಕೆಗಳನ್ನು ಬಳಸಿ ತಯಾರಿಸಿದ ಚಹಾ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ?
ವಾಸ್ತವವಾಗಿ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ (Tea on an empty stomach) ಕುಡಿಯುವುದರಿಂದ ಗ್ಯಾಸ್, ಅಸಿಡಿಟಿ ಸೇರಿದಂತೆ ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಉಂಟಾಗಬಹುದು. ಆದರೆ, ಹಾಲಿನ ಚಹಾ (Milk Tea) ಬದಲಿಗೆ ಗಿಡಮೂಲಿಕೆಗಳಿಂದ ತಯಾರಿಸಿದ ಚಹಾ ಎಂದರೆ ಹರ್ಬಲ್ ಟೀ ಕುಡಿಯುವುದು ನಿಮಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಅಂತಹ ಚಹಾಗಳು ಯಾವುವೆಂದರೆ...
ದಾಲ್ಚಿನ್ನಿ ಚಹಾ (Cinnamon Tea):
ಭಾರತೀಯ ಅಡುಗೆ ಮನೆಯಲ್ಲಿ ಪ್ರಮುಖ ಮಸಾಲೆಯಾಗಿರುವ ದಾಲ್ಚಿನ್ನಿಯಿಂದ ಚಹಾ ತಯಾರಿಸಿ ಕುಡಿಯುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಡಯಾಬಿಟಿಸ್ ರೋಗಿಗಳಿಗೆ ಪ್ರಯೋಜನಕಾರಿ ಆಗಿದೆ.
ಇದನ್ನೂ ಓದಿ- ತ್ವಚೆಯ ಕಾಂತಿ ಕಾಪಾಡಲು ಐಶ್ವರ್ಯ ರೈ ಬಳಸುವುದು ಮನೆಯಲ್ಲಿಯೇ ತಯಾರಿಸುವ ಈ ಫೇಸ್ ಪ್ಯಾಕ್ ಅಂತೆ!ನೀವೂ ಒಮ್ಮೆ ಟ್ರೈ ಮಾಡಿ !
ಫೆನ್ನೆಲ್ ಚಹಾ (Fennel Tea):
ಫೆನ್ನೆಲ್ ಅಥವಾ ಸೋಂಪಿನಿಂದ ತಯಾರಿಸಿದ ಚಹಾ ಕೂಡ ಆರೋಗ್ಯಕ್ಕೆ ಒಳ್ಳೆಯದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಫೆನ್ನೆಲ್ ಚಹಾ ಕುಡಿಯುವುದರಿಂದ ಗ್ಯಾಸ್, ಅಸಿಡಿಟಿ, ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲ, ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
ಅರಿಶಿನದ ಚಹಾ (Turmeric Tea):
ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನದಿಂದ ಟೀ ತಯಾರಿಸಿ ಕುಡಿಯುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.
ಹೈಬಿಸ್ಕಸ್ ಚಹಾ (Hibiscus Tea):
ಹೈಬಿಸ್ಕಸ್ ಎಂದರೆ ದಾಸವಾಳದಿಂದ ಮಾಡಲ್ಪಟ್ಟ ಚಹಾ ಪುಡಿಯಿಂದ ತಯಾರಿಸಿದ ಚಹಾ ಕುಡಿಯುವುದರಿಂದ ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಲು ಸಹಕಾರಿ ಆಗಿದೆ. ಅಲ್ಲದೆ, ಇದು ಕೂದಲಿಗೂ ಕೂಡ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ಇದನ್ನೂ ಓದಿ- Weight Loss In Summer: ಬೇಸಿಗೆಯಲ್ಲಿ ಈ 3 ಆಹಾರಗಳಿಂದ ಬೊಜ್ಜಿನ ಸಮಸ್ಯೆಗೆ ಹೇಳಿ ಬೈ! ಬೈ!
ಶುಂಠಿ ಚಹಾ (Ginger Tea):
ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ಚಹಾ ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.