Belly Fat: ಆಧುನಿಕ ಜೀವನಶೈಲಿಯಿಂದಾಗಿ ಹೊಟ್ಟೆಯ ಕೊಬ್ಬು ಪುರುಷರು ಮತ್ತು ಮಹಿಳೆಯರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ದೇಹ ಸ್ಲಿಮ್‌ ಆಗಿದ್ದರು ಸಹ ಹೊಟ್ಟೆಯ ಫ್ಯಾಟ್‌ನಿಂದಾಗಿ ದೇಹದ ಅಂದಕ್ಕೆ ಕುತ್ತು ಬರುತ್ತದೆ. ಹೆಚ್ಚಾಗಿ ಕುಳಿತು ಕೆಲಸ ಮಾಡುವುದು, ಹೆಚ್ಚು ಓಡಾಟವಿಲ್ಲದ ಜೀವನಶೈಲಿ ಈ ರೀತಿಯ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ ನೀವು ಕೆಲವು ಮನೆಮದ್ದುಗಳಿಂದ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ಮನೆಯಲ್ಲಿರುವ ಕೆಲವು ವಸ್ತುಗಳು ಬೆಲ್ಲಿ ಫ್ಯಾಟ್‌ ಕರಗಿಸಲು ನಿಮಗೆ ಸಹಾಯ ಮಾಡುತ್ತವೆ. 


COMMERCIAL BREAK
SCROLL TO CONTINUE READING

ಆಪಲ್ ಸೈಡರ್ ವಿನೆಗರ್ : ಆಪಲ್ ಸೈಡರ್ ವಿನೆಗರ್ ಕೊಬ್ಬನ್ನು ಸುಡುವಲ್ಲಿ ಪ್ರಯೋಜನಕಾರಿಯಾಗಿದೆ. ಇದನ್ನು ನೀರಿನೊಂದಿಗೆ ಕುಡಿಯುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಆದ್ದರಿಂದ ನೀವು ಪ್ರತಿದಿನ ಬೆಳಿಗ್ಗೆ ಆಪಲ್ ಸೈಡರ್ ವಿನೆಗರ್ ಅನ್ನು ಸೇವಿಸಿದರೆ ನೀವು ತೂಕವನ್ನು ಕಳೆದುಕೊಳ್ಳಬಹುದು. ಮಧುಮೇಹಕ್ಕೂ ಇದು ಪ್ರಯೋಜನಕಾರಿ.


ಕೊತ್ತಂಬರಿ ಬೀಜದ ನೀರು : ಕೊತ್ತಂಬರಿ ಬೀಜದಲ್ಲಿರುವ ಪೋಷಕಾಂಶಗಳು ತೂಕ ಇಳಿಸಲು ಸಹಾಯ ಮಾಡುತ್ತದೆ. ಈ ಬೀಜಗಳನ್ನು ನೀರಿನಲ್ಲಿ ನೆನೆಸಿ ಕುಡಿದರೆ ತೂಕ ಕಡಿಮೆಯಾಗುತ್ತದೆ. ಕೊತ್ತಂಬರಿ ನೀರು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಕ್ಯಾಲೊರಿಗಳನ್ನು ಬರ್ನ್ ಮಾಡಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೂ ಇದು ಪ್ರಯೋಜನಕಾರಿ.


ಇದನ್ನೂ ಓದಿ: ಕೊಳಕು ಸ್ವಿಚ್ ಬೋರ್ಡ್‌ನ್ನು ಕ್ಲೀನ್‌ ಮಾಡಲು ಇಲ್ಲಿದೆ ಸಿಂಪಲ್‌ ಟ್ರಿಕ್ಸ್‌


ತರಕಾರಿ/ಹಣ್ಣಿನ ರಸ : ಹಸಿರು ತರಕಾರಿಗಳು ಮತ್ತು ಹಣ್ಣುಗಳು ಆರೋಗ್ಯಕ್ಕೆ ಪ್ರಯೋಜನಕಾರಿ. ಅನೇಕ ರೀತಿಯ ಹಸಿರು ಹಣ್ಣು ಮತ್ತು ತರಕಾರಿ ರಸಗಳು ತೂಕ ನಷ್ಟಕ್ಕೆ ಪರಿಣಾಮಕಾರಿ. ಅವು ಉತ್ಕರ್ಷಣ ನಿರೋಧಕಗಳನ್ನು ಹೊಂದಿವೆ. ಕ್ಯಾಲೊರಿ ಬರ್ನ್‌ ಮಾಡಲು ಸಹಾಯ ಮಾಡುತ್ತದೆ. ಕಡಿಮೆ ಕಾರ್ಬೋಹೈಡ್ರೇಟ್ ಹಣ್ಣಿನ ರಸವನ್ನು ಕುಡಿಯುವುದು ಪ್ರಯೋಜನಕಾರಿ. ಸೌತೆಕಾಯಿ, ಹಲಸಿನ ಹಣ್ಣಿನ ರಸವನ್ನು ಸೇವಿಸುವುದರಿಂದ ನೀವು ತೂಕವನ್ನು ಕಳೆದುಕೊಳ್ಳಬಹುದು.


ಗ್ರೀನ್‌ ಟೀ : ಗ್ರೀನ್‌ ಟೀ ತೂಕ ನಷ್ಟಕ್ಕೆ ಬಹಳ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಚಯಾಪಚಯವನ್ನು ಹೆಚ್ಚಿಸಿ ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ. ಗ್ರೀನ್ ಟೀ ಕೂಡ ತುಂಬಾ ಕಡಿಮೆ ಕ್ಯಾಲೋರಿ ಹೊಂದಿದೆ. ಇದನ್ನು ಕುಡಿಯುವುದರಿಂದ ಹೊಟ್ಟೆಯ ಬೊಜ್ಜು ಕಡಿಮೆಯಾಗುತ್ತದೆ.


ಇದನ್ನೂ ಓದಿ: ಆಲೂಗಡ್ಡೆ ಜೊತೆ ಇದನ್ನು ಬೆರೆಸಿ ಮುಖಕ್ಕೆ ಹಚ್ಚಿ.. ಕಲೆ, ಸುಕ್ಕುಗಳಿಂದ ಸಿಗುತ್ತೆ ಮುಕ್ತಿ! 


ಬ್ಲ್ಯಾಕ್‌ ಕಾಫಿ : ಬ್ಲ್ಯಾಕ್‌ ಕಾಫಿ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದರಲ್ಲಿರುವ ಖನಿಜಾಂಶಗಳು ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ತೂಕ ಇಳಿಸಲು ಸಹಾಯ ಮಾಡುತ್ತದೆ. ಬ್ಲ್ಯಾಕ್‌ ಕಾಫಿಯಲ್ಲಿರುವ ಕೆಫೀನ್ ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.


ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಲು ಮರೆಯದಿರಿ. ಈ ಮಾಹಿತಿಗೆ ಜೀ ಕನ್ನಡ ನ್ಯೂಸ್‌ ಜವಾಬ್ದಾರನಾಗಿರುವುದಿಲ್ಲ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.