Glowing Skin ಪಡೆಯಲು ಟೊಮೆಟೊ ಹೀಗೆ ಬಳಸಿ.. ಕೊರಿಯಾ ಮಹಿಳೆಯರ ಸೌಂದರ್ಯ ರಹಸ್ಯ!

Tomato For Glowing Skin : ಹಬ್ಬ ಹರಿದಿನಗಳಲ್ಲಿ ವಿಶೇಷವಾಗಿ ಕಾಣಲು ಮಹಿಳೆಯರು ವಿವಿಧ ರೀತಿಯ ಸೌಂದರ್ಯವರ್ಧಕಗಳನ್ನು ಬಳಸುತ್ತಾರೆ. ಅದರ ಬದಲು ಕೆಲವೊಂದು ಬ್ಯೂಟಿ ಟಿಪ್ಸ್ ಪಾಲಿಸಿದರೆ ಹೊಳೆಯುವ ತ್ವಚೆ ನಿಮ್ಮದಾಗಿಸಿಕೊಳ್ಳಬಹುದು.   

Written by - Chetana Devarmani | Last Updated : Jan 26, 2024, 07:17 PM IST
  • ಹೊಳೆಯುವ ಮುಖಕ್ಕೆ ಮನೆಮದ್ದು
  • ಹೊಳೆಯುವ ತ್ವಚೆಗೆ ಬ್ಯೂಟಿ ಟಿಪ್ಸ್
  • ನೈಸರ್ಗಿಕವಾಗಿ ಅಂದವಾಗಿ ಕಾಣಲು ಟಿಪ್ಸ್‌
Glowing Skin ಪಡೆಯಲು ಟೊಮೆಟೊ ಹೀಗೆ ಬಳಸಿ.. ಕೊರಿಯಾ ಮಹಿಳೆಯರ ಸೌಂದರ್ಯ ರಹಸ್ಯ!  title=

Tomato For Glowing Skin : ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಕ್ರೀಮ್ ಗಳನ್ನು ಬಳಸುತ್ತಾರೆ. ಇದರಿಂದ ಮುಖ ಕಾಂತಿಯುತವಾಗಿ ಕಾಣುತ್ತದೆ. ಆದರೆ ಕ್ರೀಂಗಳು ಅನಗತ್ಯ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಕೆಲವು ಪದಾರ್ಥಗಳು ನಮಗೆ ನೈಸರ್ಗಿಕವಾಗಿ ಅಂದವಾಗಿ ಕಾಣಲು ಸಹಾಯ ಮಾಡುತ್ತವೆ. ಅದರಲ್ಲಿ ಟೊಮೆಟೊ ಕೂಡ ಒಂದು.  

ಟೊಮೆಟೊ ತ್ವಚೆಯ ಆರೈಕೆಗೂ ಒಳ್ಳೆಯದು ಎನ್ನುತ್ತಾರೆ ತಜ್ಞರು. ಟೊಮೆಟೊವನ್ನು ಮುಖಕ್ಕೆ ಹಚ್ಚುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಟೊಮೆಟೊದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಚರ್ಮದ ಟೋನ್ ಸುಧಾರಿಸಲು ಇದು ಒಳ್ಳೆಯದು. ಇದನ್ನು ಬಳಸುವುದರಿಂದ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ನಿವಾರಣೆಯಾಗುತ್ತವೆ. 

ಕಡಲೆ ಹಿಟ್ಟಿಗೆ ಮೊಸರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಅದಕ್ಕೆ ರೋಸ್ ವಾಟರ್ ಹಾಕಿ ಪಕ್ಕಕ್ಕೆ ಇಡಿ. ಟೊಮೆಟೊ ತೆಗೆದುಕೊಂಡು ಪ್ಯೂರಿ ಮಾಡಿ. ಈ ರಸವನ್ನು ಆ ಮಿಶ್ರಣಕ್ಕೆ ಸೇರಿಸಿ. ನಂತರ ಅದನ್ನು ಮುಖಕ್ಕೆ ಹಚ್ಚಿಕೊಳ್ಳಿ. ವಾರದಲ್ಲಿ ಮೂರು ಬಾರಿ ಹೀಗೆ ಮಾಡಿ. ಮುಖದ ಹೊಳಪು ಹೆಚ್ಚುವುದು. 

ಇದನ್ನೂ ಓದಿ: Tulsi For White Hair: ತುಳಸಿ ನಿಮ್ಮ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ.! 

ಎರಡು ಚಮಚ ಟೊಮೆಟೊ ತಿರುಳನ್ನು ತೆಗೆದುಕೊಂಡು ಅದಕ್ಕೆ ಜೇನುತುಪ್ಪ ಸೇರಿಸಿ. ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ಹೀಗೆ ಮಾಡುವುದರಿಂದ ಚರ್ಮವು ಸಾಕಷ್ಟು ತೇವಾಂಶವನ್ನು ಪಡೆಯುತ್ತದೆ.

ತೆರೆದ ರಂಧ್ರಗಳ ಸಮಸ್ಯೆ ಪ್ರತಿಯೊಬ್ಬರನ್ನೂ ಬಾಧಿಸುತ್ತದೆ. ಇದಕ್ಕಾಗಿ ಮುಲ್ತಾನಿ ಮಿಟ್ಟಿಯನ್ನು ತೆಗೆದುಕೊಂಡು ಅದಕ್ಕೆ ಟೊಮೆಟೊ ರಸವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಪ್ಯಾಕ್ ಅನ್ನು ಮುಖಕ್ಕೆ ಹಚ್ಚಿಕೊಳ್ಳಿ. ಹೀಗೆ ಮಾಡುವುದರಿಂದ ತೆರೆದ ರಂಧ್ರಗಳು ಕಡಿಮೆಯಾಗುತ್ತವೆ.

ಇದನ್ನು ನಿಯಮಿತವಾಗಿ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಕಪ್ಪು ಕಲೆಗಳು ಮತ್ತು ಮೊಡವೆಗಳು ಮಾಯವಾಗುತ್ತವೆ. ಇದಲ್ಲದೆ ಚರ್ಮವು ಅಗತ್ಯವಿರುವ ಪೋಷಕಾಂಶಗಳನ್ನು ಪಡೆಯುತ್ತದೆ.  

ಇದನ್ನೂ ಓದಿ: ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊಡೆದೋಡಿಸಲು ಬಿಳಿ ಉಪ್ಪಿ ಬದಲು ಇದನ್ನು ಬಳಸಿ! 

ಸೂಚನೆ: ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News