Weight loss drinks at home : ಚಳಿಗಾಲ ಸಮೀಪಿಸುತ್ತಿದ್ದಂತೆ ಹೆಚ್ಚಿನ ಜನರು ಕರಿದ ಆಹಾರಗಳು ಮತ್ತು ಹೆಚ್ಚಿನ ಕೊಬ್ಬಿನ ಆಹಾರವನ್ನು ಸೇವಿಸುತ್ತಾರೆ. ಅತಿಯಾಗಿ ತಿನ್ನುವುದು ತೂಕ ಹೆಚ್ಚಾಗಲು ಕಾರಣವಾಗಬಹುದು. ನೀವು ತೂಕವನ್ನು ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಹೆಚ್ಚಿನ ಕ್ಯಾಲೋರಿಯುಕ್ತ ಆಹಾರವನ್ನು ತಿನ್ನುವುದನ್ನು ತಪ್ಪಿಸಬೇಕು. ದೇಹದ ಕೊಬ್ಬನ್ನು ಸುಡುವ ಈ ಡಿಟಾಕ್ಸ್ ಪಾನೀಯಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಸುಧಾರಿಸಬಹುದು. ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತವೆ.
ಸೋಂಪು ಕಾಳು ನೀರು
ಸೋಂಪು ಕಾಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಉಪಯುಕ್ತವಾಗಿದೆ. ಸೋಂಪು ಕಾಳುಗಳನ್ನು ಬೆಚ್ಚಗಿನ ನೀರಿನಲ್ಲಿ ನೆನೆಸಿ ಮತ್ತು ನೆನೆಸಿದ ನೀರನ್ನು ದಿನವಿಡೀ ಆಗಾಗ ಕುಡಿಯುವುದು ಹಸಿವನ್ನು ನಿಯಂತ್ರಿಸುತ್ತದೆ. ಅಲ್ಲದೇ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ಬೆಳಗ್ಗೆ ಎದ್ದ ತಕ್ಷಣ ಹಳಸಿದ ಬಾಯಲ್ಲೇ 1 ಗ್ಲಾಸ್ ನೀರನ್ನು ಸೇವಿಸಿ, ಇದರಿಂದ ದೇಹಕ್ಕಿದೆ ಅನೇಕ ಲಾಭ!
ಶುಂಠಿ ನಿಂಬೆ ನೀರು
ತುರಿದ ಶುಂಠಿ ಮತ್ತು ನಿಂಬೆ ರಸದೊಂದಿಗೆ ಬೆಚ್ಚಗಿನ ನೀರನ್ನು ಬೆರೆಸಿ ಕುಡಿಯುವುದು ಕೊಬ್ಬನ್ನು ಸುಡುತ್ತದೆ. ಶುಂಠಿಯು ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುವ ಸಂಯುಕ್ತಗಳನ್ನು ಹೊಂದಿದೆ. ನಿಂಬೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಬೆಳಿಗ್ಗೆ ಇದನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯವನ್ನು ಸೂಪರ್ ಕಿಕ್ಸ್ಟಾರ್ಟ್ ಮಾಡಬಹುದು.
ದಾಲ್ಚಿನ್ನಿ ಜೇನು ಪಾನೀಯ
ಬೆಚ್ಚಗಿನ ನೀರಿನಲ್ಲಿ ದಾಲ್ಚಿನ್ನಿ ಮತ್ತು ಜೇನುತುಪ್ಪ ಹಾಕಿ ಕುಡಿಯಬಹುದು. ಇದು ಸಿಹಿ ಮತ್ತು ಟೇಸ್ಟಿ ಆರೋಗ್ಯ ಪಾನೀಯ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ದಾಲ್ಚಿನ್ನಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ನಿಂಬೆ ಶುಂಠಿ ಗ್ರೀನ್ ಟೀ
ಗ್ರೀನ್ ಟೀ ತೂಕ ನಷ್ಟಕ್ಕೆ ಸಹಾಯ ಮಾಡುವ ಸಾಮರ್ಥ್ಯ ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಕೊಬ್ಬನ್ನು ಸುಡಲು ಹೆಚ್ಚುಸಲು ಸಹಾಯ ಮಾಡುತ್ತದೆ. ನಿಂಬೆ ಹೋಳುಗಳನ್ನು ಸೇರಿಸುವುದರಿಂದ ಚಹಾದ ಉತ್ಕರ್ಷಣ ನಿರೋಧಕ ಗುಣಗಳನ್ನು ಹೆಚ್ಚಿಸುತ್ತದೆ ಶುಂಠಿಯು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ.
ಇದನ್ನೂ ಓದಿ : ಮೆಂತ್ಯ ಪಲ್ಯ ಹೆಚ್ಚು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳೇನು ಗೊತ್ತೇ?
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.