Muskmelon Benefits for Summer : ಇದೀಗ ಬೇಸಿಗೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಈ ಋತುವಿನಲ್ಲಿ, ನಾವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಬೇಸಿಗೆಯಲ್ಲಿ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ನೋಡಿಕೊಳ್ಳುವುದು ಮುಖ್ಯ. ಬೇಸಿಗೆಯಲ್ಲಿ ದೇಹದಲ್ಲಿ ಡಿಹೈಡ್ರೆಶನ್ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.  ಈ ನಿಟ್ಟಿನಲ್ಲಿ ಖರ್ಬೂಜ ಹಣ್ಣು ಬೇಸಿಗೆಗೆ ಅತ್ಯುತ್ತಮ ಆಹಾರವಾಗಿದೆ.  ಈ ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಇರುತ್ತದೆ. ಹಾಗೆಯೇ ಕಲ್ಲಂಗಡಿ, ಸೌತೆಕಾಯಿಯಂತಹ ನೀರಿನ ಅಂಶ ಸಮೃದ್ಧವಾಗಿರುವ ಹಣ್ಣುಗಳನ್ನು ಸೇವಿಸಬಹುದು. ಅವು ದೇಹವನ್ನು ಒಳಗಿನಿಂದ ತಂಪಾಗಿರಿಸಾಲು ಸಹಾಯ ಮಾಡುತ್ತದೆ. 


COMMERCIAL BREAK
SCROLL TO CONTINUE READING

ಖರ್ಬೂಜ  ಹಣ್ಣು  ಅತ್ಯಂತ ಆರೋಗ್ಯಕರ ಹಣ್ಣುಗಳಲ್ಲಿ ಒಂದು. ಇದು ಅನೇಕ ರೀತಿಯ ಪೌಷ್ಟಿಕಾಂಶಗಳನ್ನು ತನ್ನೊಳಗೆ ಅಡಗಿಸಿಕೊಂಡಿವೆ.  ಈ ಹಣ್ಣಿನಲ್ಲಿ ವಿಟಮಿನ್‌ಗಳು, ಖನಿಜಗಳು ಮತ್ತು  ಆಂಟಿ ಆಕ್ಸಿಡೆಂಟ್ ಗಳು ಹೇರಳವಾಗಿ ಕಂಡು ಬರುತ್ತವೆ. ಇದು ದೇಹವನ್ನು ಗಂಭೀರ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಖರ್ಬೂಜ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. 
 
ಇದನ್ನೂ ಓದಿ : Cholesterol: ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೇಹದಲ್ಲಿಯೇ ಕರಗಿಸುತ್ತದೆ ಈ ಎಲೆ!


ಬೇಸಿಗೆಯಲ್ಲಿ  ಖರ್ಬೂಜ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು? : 
1. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಮೊದಲೇ ಹೇಳಿದಂತೆ ಖರ್ಬೂಜ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ ಮತ್ತು ಆಂಟಿ ಆಕ್ಸಿಡೆಂಟ್ ಗಳು ಸಮೃದ್ದವಾಗಿವೆ. ಈ ಕಾರಣದಿಂದ ಇದರ ಸೇವನೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹದಲ್ಲಿ ರೋಗ  ನಿರೋಧಕ ಶಕ್ತಿ ಹೆಚ್ಚಾದರೆ ಸೋಂಕುಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು ಸುಲಭವಾಗುತ್ತದೆ. 


2. ಮೂತ್ರಪಿಂಡಗಳಿಗೆ ಪ್ರಯೋಜನಕಾರಿ :  ಬೇರೆ  ಋತುಗಳಿಗೆ ಹೋಲಿಸಿದರೆ ಬೇಸಿಗೆಯಲ್ಲಿ ಬಾಯಾರಿಕೆ ಹೆಚ್ಚು. ಖರ್ಬೂಜದಲ್ಲಿ ಸಕ್ಕರೆಯೊಂದಿಗೆ ನೀರಿನ ಅಂಶ ಕೂಡಾ ಸಮೃದ್ಧವಾಗಿದೆ. ಹಾಗಾಗಿ ಬೇಸಿಗೆಯಲ್ಲಿ ಈ ಹಣ್ಣು  ತಿನ್ನುವುದರಿಂದ ಮೂತ್ರಪಿಂಡಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  


3. ಮಲಬದ್ಧತೆಯಲ್ಲಿ ಪ್ರಯೋಜನಕಾರಿ :  ಖರ್ಬೂಜ ಹಣ್ಣು ತಿನ್ನುವುದರಿಂದ ಮಲಬದ್ಧತೆಯಿಂದ ಪರಿಹಾರ ಸಿಗುತ್ತದೆ.  ಈ ಹಣ್ಣಿನಲ್ಲಿ ನೀರು ಮತ್ತು ಫೈಬರ್  ಹೇರಳವಾಗಿದೆ. ನೀರು ಮತ್ತು ಫೈಬರ್ ಎರಡೂ ಜೀರ್ಣಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಜೀರ್ಣಕ್ರಿಯೆ ಸರಿಯಾಗಿ ಆದಾಗ  ಮಲಬದ್ಧತೆಯ ಸಮಸ್ಯೆ ನಿವಾರಣೆಯಾಗುತ್ತದೆ. 


ಇದನ್ನೂ ಓದಿ : Lifestyle:  ನಿಮ್ಮ ಮಕ್ಕಳು ಅತಿಯಾಗಿ  ಡಿಜಿಟಲ್ ಸಾಧನಕ್ಕೆ ಒಳಗಾಗಿದ್ದಾರಾ.. ಹಾಗಿದ್ದರೇ  ಅಂಥವರಿಗೆ ಇಲ್ಲಿದೆ ಪರಿಹಾರ 


4. ತೂಕ ಇಳಿಸಲು ಸಹಾಯ ಮಾಡುತ್ತದೆ: ಖರ್ಬೂಜ ಹಣ್ಣಿನಲ್ಲಿ ನೀರು ಮತ್ತು ಫೈಬರ್ ಸಮೃದ್ಧವಾಗಿರುತ್ತದೆ. ಈ ಕಾರಣದಿಂದ ದೇಹ ಹೈಡ್ರೇಟ್ ಆಗಿ ಇರುತ್ತದೆ.  ನೀರು ಮತ್ತು ಫೈಬರ್ ಕಾರಣದಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ. ಇದು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.


5. ತ್ವಚೆಯನ್ನು ಆರೋಗ್ಯವಾಗಿರಿಸುತ್ತದೆ : ಬೇಸಿಗೆಯಲ್ಲಿ ತ್ವಚೆಗೆ ಸಂಬಂಧಪಟ್ಟ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಖರ್ಜೂಜ  ಹಣ್ಣು ಮಾತ್ರವಲ್ಲ ಅದರ ಬೀಜ ಕೂಡಾ ಆರೋಗ್ಯಕ್ಕೆ ಪ್ರಯೋಜನಕಾರಿ. ಈ ಹಣ್ಣನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ತಿನ್ನುವುದರಿಂದ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಬಹುದು. ಈ ಹಣ್ಣಿನ ತಿರುಳು ಮತ್ತು ಬೀಜಗಳಿಂದ ಪೇಸ್ಟ್ ಅನ್ನು ತಯಾರಿಸಿ ಫೇಸ್ ಮಾಸ್ಕ್ ಆಗಿ ಬಳಸಬಹುದು. ಇದು ಕಲೆಗಳು, ಒಣ ಚರ್ಮದ ಲಕ್ಷಣಗಳು ಇತ್ಯಾದಿ ಸಮಸ್ಯೆಗಳನ್ನು ನಿವಾರಿಸುತ್ತದೆ.


6. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ : ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ತಮ್ಮ ಆಹಾರದಲ್ಲಿ ಖರ್ಬೂಜ ಹಣ್ಣನ್ನು ಸೇವಿಸುವಂತೆ  ಸಲಹೆ ನೀಡುತ್ತಾರೆ. ಈ ಹಣ್ಣಿನಲ್ಲಿ ಪೊಟ್ಯಾಸಿಯಮ್ ಪ್ರಮಾಣ ಕೂಡಾ ಅತ್ಯಧಿಕವಾಗಿದ್ದು, ಇದು ರಕ್ತನಾಳಗಳನ್ನು ಸಡಿಲಗೊಳಿಸಿ, ರಕ್ತವು ಸರಾಗವಾಗಿ ಹರಿಯುವಂತೆ ಮಾಡುತ್ತದೆ. ಈ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುವುದು ಸಾಧ್ಯವಾಗುತ್ತದೆ. ಬೇಸಿಗೆಯಲ್ಲಿ ಖರ್ಬೂಜ  ಹಣ್ಣು ತಿನ್ನುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.