Mysuru Dasara: ಸಾಂಸ್ಕೃತಿಕ ನಗರಿಯಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ. ಕೃಷ್ಣ
ಸರ್ಕಾರದ ವತಿಯಿಂದ ಇಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರೆ, ಅರಮನೆಯಲ್ಲಿ ಮೈಸೂರು ರಾಜ ವಂಶಸ್ಥರು ರತ್ನಕಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಶರನ್ನವರಾತ್ರಿ ಆಚರಣೆಗೆ ಚಾಲನೆ ನೀಡಲಿದ್ದಾರೆ.
ಮೈಸೂರು : ಇಂದಿನಿಂದ ನವರಾತ್ರಿ ಆಚರಣೆ ಆರಂಭವಾಗಿದೆ. ನವರಾತ್ರಿ ಎಂದೊಡನೆ ನೆನಪಾಗುವಾಗುವುದು ವಿಶ್ವವಿಖ್ಯಾತ ಮೈಸೂರು ದಸರಾ. ಈ ವರ್ಷ ಕರೋನಾ ಹಿನ್ನಲೆಯಲ್ಲಿ ಸರಳ ದಸರಾ ಆಚರಿಸಲು ನಿರ್ಧರಿಸಲಾಗಿದೆ. ನಾಡದೇವತೆ ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಚಾಲನೆ ನೀಡಿದರು.
Chamundi Hills) ನಾಡದೇವತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರೆ, ಅರಮನೆಯಲ್ಲಿ ಮೈಸೂರು ರಾಜ ವಂಶಸ್ಥರು ರತ್ನಕಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಶರನ್ನವರಾತ್ರಿ ಆಚರಣೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ಖಾಸಗಿ ದರ್ಬಾರ್‌ಗೆ ಇಂದು ಚಾಲನೆ ದೊರೆಯಲಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನವನ್ನು ಅಲಂಕರಿಸಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಇದನ್ನೂ ಓದಿ- Navratri 2021: ನವರಾತ್ರಿಯ ಉಪವಾಸದ ನಿಯಮಗಳು; ಮರೆತೂ ಮಾಡದಿರಿ ಈ ತಪ್ಪು
ಇದಲ್ಲದೆ ನವರಾತ್ರಿಯ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ (Mysuru Palace) ರಾಜ ವಂಶಸ್ಥರು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಕ್ಟೋಬರ್ 7 ರಿಂದ ಆಕ್ಟೋಬರ್ 15ರವರೆಗೆ ಮಧ್ಯಾಹ್ನ 02:30ರವರೆಗೆ ಅರಮನೆಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿಗಳು:
ಇಂದು (ಅ.7) ಸಂಜೆ ಅರಮನೆಯ ಮುಂಭಾಗದಲ್ಲಿ ಸಿದ್ಧವಾಗಿರುವ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BS Basavaraj Bommai) ಅವರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಅರಮನೆಗಷ್ಟೇ ಸೀಮಿತವಾಗಲಿರುವ ಸಾಂಸ್ಕೃತಿಕ ಕಾರ್ಯಕ್ರಮ:
ಸಾಮಾನ್ಯವಾಗಿ ನವರಾತ್ರಿಯ ಸಂದರ್ಭದಲ್ಲಿ ಮೈಸೂರಿನಲ್ಲಿ (Mysuru) ಹಬ್ಬದ ವಾತಾವರಣ ಮನೆ ಮಾಡಿರುತ್ತದೆ. ಅರಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ನಗರದ ವಿವಿಧ ಭಾಗಗಳಲ್ಲಿ ಫ್ಲವರ್ ಶೋ, ಯುವ ದಸರಾ, ಕ್ರೀಡಾ ದಸರಾ, ರೈತ ದಸರಾ ಹೀಗೆ ಹಲವು ಕಾರ್ಯಕ್ರಮಗಳನ್ನೂ ಕೂಡ ಆಯೋಜಿಸಲಾಗುತ್ತದೆ. ಆದರೆ ಕಳೆದ ವರ್ಷದಂತೆ ಈ ವರ್ಷವೂ ಕೂಡ ಕರೋನಾ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮವನ್ನು ಹೊರತುಪಡಿಸಿ ಉಳಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ.
ಇದನ್ನೂ ಓದಿ- Navratri 2021: ಡೋಲಿಯಲ್ಲಿ ದೇವಿ ದುರ್ಗೆಯ ಆಗಮನ-ಆನೆಯ ಮೇಲೆ ನಿರ್ಗಮನ, ಈ ಬಾರಿಯ ನವರಾತ್ರಿ ಪ್ರಭಾವ ಹೇಗಿರಲಿದೆ?
ಕರೋನಾವೈರಸ್ (Coronavirus) ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮೈಸೂರು ಅರಮನೆಯಲ್ಲಿ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರತಿ ದಿನ 500 ಜನರಿಗಷ್ಟೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಇದಲ್ಲದೆ ದಸರಾ ಉದ್ಘಾಟನೆ, ಅರಮನೆ ಅಂಗಳದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಜಂಬೂಸವಾರಿ ಎಲ್ಲವನ್ನೂ ಆನ್‌ಲೈನ್‌ನಲ್ಲಿ ಪ್ರಸಾರಮಾಡಲು ಕ್ರಮ ಕೈಗೊಳ್ಳಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.