ರಾಸಾಯನಿಕಗಳ ಬಳಕೆಯಿಲ್ಲದೆ ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸುವ ಸುಲಭ ಉಪಾಯ ಇಲ್ಲಿದೆ

Natural Remedy for White Hair: ಯಾವುದೇ ರಾಸಾಯನಿಕಗಳ ಬಳಕೆಯಿಲ್ಲದೆ ನೈಸರ್ಗಿಕವಾಗಿ ಕೂದಲನ್ನು ಕಪ್ಪಗಿಸುವುದು ಕೂಡಾ ಸಾಧ್ಯ. ಈ ಕೆಳಗಿನ ಮನೆ ಮದ್ದುಗಳ ಸಹಾಯದಿಂದ ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು. 

Written by - Ranjitha R K | Last Updated : Sep 6, 2022, 04:08 PM IST
  • ಕೂದಲು ಬೆಳ್ಳಗಾಗುವುದು ಸಾಮಾನ್ಯ ಸಮಸ್ಯೆಯಾಗಿದೆ
  • ಬಿಳಿ ಕೂದಲಿನ ಸಮಸ್ಯೆಯ ನಿವಾರಣೆಗೆ ಹಲವು ಉತ್ಪನ್ನಗಳು ಲಭ್ಯವಿದೆ.
  • ಮನೆ ಮದ್ದುಗಳ ಸಹಾಯದಿಂದ ಬಿಳಿ ಕೂದಲನ್ನು ಕಪ್ಪಾಗಿಸಬಹುದು.
ರಾಸಾಯನಿಕಗಳ ಬಳಕೆಯಿಲ್ಲದೆ ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸುವ ಸುಲಭ ಉಪಾಯ ಇಲ್ಲಿದೆ  title=
white hair remdies (file photo)

Natural Remedy for White Hair : ವ್ಯಕ್ತಿಯ ವಯಸ್ಸು ಹೆಚ್ಚಾದಂತೆ ತಲೆ ಕೂದಲು ಬೆಳ್ಳಗಾಗುವುದು ಸಹಜ. ಆದರೆ ಸಮಯಕ್ಕಿಂತ ಮುಂಚೆಯೇ ತಲೆಯ ಕೂದಲು ಬಿಳಿಯಾಗಲು ಪ್ರಾರಂಭಿಸಿದರೆ, ಚಿಂತೆ ಶುರುವಾಗುತ್ತದೆ. ಬಿಳಿ ಕೂದಲಿನ ಕಾರಣದಿಂದಾಗಿ ಅನೇಕ ಬಾರಿ ಜನರು ತಮ್ಮ ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಾರೆ.  ಬಿಳಿ ಕೂದಲಿನ ಸಮಸ್ಯೆಯ ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವು ಉತ್ಪನ್ನಗಳು ಲಭ್ಯವಿದೆ. ಆದರೆ, ಇವುಗಳಲ್ಲಿ ರಾಸಾನಿಕಗಳ ಬಳಕೆ ಕೂಡಾ ಹೆಚ್ಚಾಗಿರುತ್ತದೆ. ಹಾಗಾಗಿ ಆ ಉತ್ಪನ್ನಗಳು ಕೂದಲಿಗೆ ಹಾನಿಯುಂಟು ಮಾಡುತ್ತದೆ. ಯಾವುದೇ ರಾಸಾಯನಿಕಗಳ ಬಳಕೆಯಿಲ್ಲದೆ ನೈಸರ್ಗಿಕವಾಗಿ ಕೂದಲನ್ನು ಕಪ್ಪಗಿಸುವುದು ಕೂಡಾ ಸಾಧ್ಯ. ಈ ಕೆಳಗಿನ ಮನೆ ಮದ್ದುಗಳ ಸಹಾಯದಿಂದ ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು. 

ತೆಂಗಿನ ಎಣ್ಣೆ ಮತ್ತು ನಿಂಬೆ ರಸ ಮಿಶ್ರಣ :
4 ಚಮಚ ತೆಂಗಿನ ಎಣ್ಣೆ ಮತ್ತು 2 ಚಮಚ ನಿಂಬೆ ರಸವನ್ನು ಬೆರೆಸಿ  ಈ ದ್ರಾವಣವನ್ನು ನೆತ್ತಿ ಮತ್ತು ಕೂದಲಿನ ಮೇಲೆ ಚೆನ್ನಾಗಿ ಮಸಾಜ್ ಮಾಡಬೇಕು. ಈ ದ್ರಾವಣದಲ್ಲಿ ಹಲವು ಪೋಷಕಾಂಶಗಳಿದ್ದು, ಇದು ತಲೆ ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ. ಮತ್ತು ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ. ಈ ದ್ರಾವಣದ ಬಳಕೆಯು ತಲೆಯ ರಕ್ತನಾಳಗಳಲ್ಲಿ ರಕ್ತದ ಪೂರೈಕೆಯನ್ನು ಹೆಚ್ಚಿಸುತ್ತದೆ. ಮೈಗ್ರೇನ್ ಮತ್ತು ತಲೆನೋವಿನ ಸಮಸ್ಯೆಯಿಂದಲೂ ಪರಿಹಾರವನ್ನು ನೀಡುತ್ತದೆ. 

ಇದನ್ನೂ ಓದಿ : ಈ ಆಹಾರಗಳನ್ನು ಸೇವಿಸಿದರೆ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾಗುವುದೇ ಇಲ್ಲ

ಪ್ರೋಟೀನ್ ನ ಸಮೃದ್ಧ ಮೂಲವಾಗಿದೆ ಮೊಟ್ಟೆ :  
ಕೂದಲು ಉದುರುವಿಕೆ ಮತ್ತು ಕೂದಲು ಬಿಳಿಯಾಗುವುದಕ್ಕೆ ಪ್ರೋಟೀನ್ ಕೊರತೆಯೂ ಪ್ರಮುಖ ಕಾರಣವಾಗಿದೆ. ಈ ಕೊರತೆಯನ್ನು ನೀಗಿಸಲು ಮೊಟ್ಟೆಯ ದ್ರಾವಣವನ್ನು ತಯಾರಿಸಿ ಕೂದಲಿಗೆ ಹಚ್ಚಬೇಕು. ಮೊಟ್ಟೆಯಲ್ಲಿ ಪ್ರೋಟೀನ್ ಸಮೃದ್ಧವಾಗಿರುತ್ತದೆ. ಈ ದ್ರಾವಣದಲ್ಲಿ ತೆಂಗಿನಕಾಯಿ ಅಥವಾ ಸಾಸಿವೆ ಎಣ್ಣೆ ಮತ್ತು ನಿಂಬೆ ರಸವನ್ನು ಮಿಶ್ರಣ ಮಾಡಬಹುದು. ಇದರ ನಂತರ ಈ  ಮಿಶ್ರಣವನ್ನು  ಕೂದಲಿಗೆ ವಾರಕ್ಕೆ 2-3 ಬಾರಿ ಹಚ್ಚಬೇಕು. ಹೀಗೆ ಮಾಡುವುದರಿಂದ ಕೂದಲು ಬೆಳ್ಳಗಾಗುವುದು ಕಡಿಮೆಯಾಗುತ್ತದೆ. 

ಕರಿಬೇವಿನ ಎಲೆ  :
ಕರಿಬೇವಿನ ಎಲೆಗಳನ್ನು ಸಾಮಾನ್ಯವಾಗಿ ಒಗ್ಗರಣೆಗೆ ಬಳಸಲಾಗುತ್ತದೆ. ಕರಿಬೇವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಕರಿಬೇವಿನ ಎಲೆಗಳನ್ನು ಬಳಸುವುದರಿಂದ ಕೂದಲಿಗೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ.   ಇದರಿಂದ ಕೂದಲಿನ ಬೇರುಗಳು ಬಲಗೊಳ್ಳುತ್ತವೆ.  ಒಂದು ಬಟ್ಟಲು ತೆಂಗಿನೆಣ್ಣೆ ತೆಗೆದುಕೊಂಡು ಅದನ್ನು ಬಿಸಿಮಾಡಿ. ಎಣ್ಣೆ ಬಿಸಿ ಮಾಡುವಾಗ ಆ ಎಣ್ಣೆಗೆ 20 ರಿಂದ 30 ಕರಿಬೇವಿನ ಎಲೆಗಳನ್ನು ಹಾಕಿ. ನಂತರ ಈ ಎಣ್ಣೆಯನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಸುಮಾರು ಅರ್ಧ ಘಂಟೆಯ ನಂತರ, ಕೂದಲನ್ನು  ಶುದ್ಧ ನೀರಿನಿಂದ ತೊಳೆಯಿರಿ. ವಾರದಲ್ಲಿ ಎರಡು ಬಾರಿ ಈ ವಿಧಾನವನ್ನು ಅಳವಡಿಸಿಕೊಂಡರೆ,  ಬಿಳಿ ಕೂದಲಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ. 

ಇದನ್ನೂ ಓದಿ : ಈ ವಿಟಮಿನ್ಗಳ ಕೊರತೆಯಿಂದ ದುರ್ಬಲಗೊಳ್ಳುತ್ತೆ ಮೂಳೆಗಳು

ಮೆಹಂದಿ ಮತ್ತು  ಪಲಾವ್ ಎಲೆ : 
ನೈಸರ್ಗಿಕವಾಗಿ ಕೂದಲಿನ ಬಣ್ಣವನ್ನು ಗಾಢವಾಗಿಸಲು ಮೆಹೆಂದಿ ಮತ್ತು  ಪಲಾವ್ ಎಲೆಗಳನ್ನು ಬಳಸಲಾಗುತ್ತದೆ. ಇದಕ್ಕಾಗಿ, ಒಂದು ಪಾತ್ರೆಯಲ್ಲಿ 2 ಕಪ್ ನೀರು ಹಾಕಿ. ನಂತರ  ಪಲಾವ್ ಎಲೆ ಮತ್ತು ಗೋರಂಟಿ ಹಾಕಿ ಒಟ್ಟಿಗೆ ಕುದಿಸಿ. ಈ ಮಿಶ್ರಣ ತಣ್ಣಗಾದ ನಂತರ ತಲೆ ಕೂದಲಿಗೆ ಹಚ್ಚಿ. ವಾರಕ್ಕೊಮ್ಮೆ ಈ ದ್ರಾವಣವನ್ನು ಹಚ್ಚುವುದರಿಂದ ಕೂದಲು ಮೊದಲಿನಂತೆ ಕಪ್ಪು ಮತ್ತು ದಟ್ಟವಾಗುತ್ತದೆ. 

ನೆಲ್ಲಿಕಾಯಿ ಕೂದಲನ್ನು ಕಪ್ಪಾಗಿಸುತ್ತದೆ : 
ಆಮ್ಲಾ ಬಳಸಿ ನಿಮ್ಮ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. ಇದಕ್ಕಾಗಿ ನೆಲ್ಲಿ ಕಾಯಿ ರಸವನ್ನು ತೆಗೆಯಬೇಕು. ಈ ರಸವನ್ನು ನಿಮಗೆ ಬೇಕಾದ ಎಣ್ಣೆಯಲ್ಲಿ  ಕೂದಲಿನ ಎಣ್ಣೆಯಹಾಕಿ ಮಿಶ್ರಣ ಮಾಡಿಕೊಳ್ಳಿ. ಆ ದ್ರಾವಣವನ್ನು ಕೂದಲಿಗೆ ಹಚ್ಚಿ ಮತ್ತು 4-5 ಗಂಟೆಗಳ ಕಾಲ ಹಾಗೆ ಬಿಡಿ. ದ್ರಾವಣವು ಒಣಗಿದಾಗ, ಅದನ್ನು ಶುದ್ಧ ನೀರಿನಿಂದ ತೊಳೆಯಿರಿ. ಈ ಮಿಶ್ರಣವನ್ನು ವಾರಕ್ಕೆ 2-3 ಬಾರಿ ಹಚ್ಚುತ್ತಾ ಬರಬೇಕು.  

 

( ಸೂಚನೆ :  ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News