Onion Juice Health Benefits: ಪ್ರತಿ ಮನೆಯಲ್ಲೂ ಸಾಮಾನ್ಯವಾಗಿ ಕಂಡು ಬರುವ ತರಕಾರಿ ಎಂದರೆ ಈರುಳ್ಳಿ. ಬಹುತೇಕ ಭಾರತೀಯ ಖಾದ್ಯಗಳಲ್ಲಿ ಈರುಳ್ಳಿಯನ್ನು ಯತೇಚ್ಚವಾಗಿ ಬಳಸಲಾಗುತ್ತದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಪ್ರಯೋಜನಕಾರಿ ಆಗಿದೆ. ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಶೀತ, ಕೆಮ್ಮು, ನೆಗಡಿಯಿಂದ ಹಿಡಿದು ಕಾಲೋಚಿತ ಸಾಂಕ್ರಾಮಿಕ ರೋಗಗಳಿಂದ ಪರಿಹಾರ ಪಡೆಯಲು ಈರುಳ್ಳಿ ಜ್ಯೂಸ್ ನಿಮಗೆ ಸಹಕಾರಿ ಆಗಿದೆ.


COMMERCIAL BREAK
SCROLL TO CONTINUE READING

ಚಳಿಗಾಲದಲ್ಲಿ ಈರುಳ್ಳಿ ರಸ ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ:
ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ:

ಚಳಿಗಾಲದಲ್ಲಿ ಈರುಳ್ಳಿ ರಸ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಶೀತ, ಕೆಮ್ಮು, ನೆಗಡಿ, ಜ್ವರದಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಇದಕ್ಕಾಗಿ ಈರುಳ್ಳಿ ರಸವನ್ನು  ಜೇನುತುಪ್ಪದೊಂದಿಗೆ ಬೆರೆಸಿ ಕುಡಿಯುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ. ಇದು ನಿಮ್ಮ ಚಯಾಪಚಯ ದರವನ್ನು ಸುಧಾರಿಸುತ್ತದೆ. 


ಇದನ್ನೂ ಓದಿ- ಉತ್ತಮ ಆರೋಗ್ಯಕ್ಕಾಗಿ ಚಳಿಗಾಲದಲ್ಲಿ ಈ ಸೊಪ್ಪನ್ನು ತಪ್ಪದೇ ಸೇವಿಸಿ


ಗ್ಲೂಕೋಸ್ ಮಟ್ಟ ನಿಯಂತ್ರಣ:
ಈರುಳ್ಳಿ ಸೇವನೆಯಿಂದ ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಸುಲಭವಾಗಿ ನಿಯಂತ್ರಿಸಬಹುದು. ಅಷ್ಟೇ ಅಲ್ಲದೆ, ಇದು ಮಧುಮೇಹದ ಅಪಾಯವನ್ನೂ ಕೂಡ ಕಡಿಮೆ ಮಾಡುತ್ತದೆ.


ಉರಿಯೂತದಿಂದ ಪರಿಹಾರ:
ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳು ಈರುಳ್ಳಿಯಲ್ಲಿ ಕಂಡುಬರುತ್ತವೆ. ಈ ಕಾರಣದಿಂದಾಗಿ,  ಈರುಳ್ಳಿ ಜ್ಯೂಸ್ ಸೇವನೆಯಿಂದ ಉರಿಯೂತದ ಸಮಸ್ಯೆಯಿಂದ ಪರಿಹಾರ ದೊರೆಯುತ್ತದೆ. 


ಕೊಲೆಸ್ಟ್ರಾಲ್ ನಿಯಂತ್ರಣ:
ಈರುಳ್ಳಿ ರಸವು ದೇಹದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಕೆಲಸ ಮಾಡುತ್ತದೆ. ಇದಕ್ಕಾಗಿ ನೀವು ಇದನ್ನು ಸಲಾಡ್ ರೂಪದಲ್ಲಿಯೂ ಬಳಸಬಹುದು. ಇದರಲ್ಲಿರುವ ಫೈಬರ್ ಅಜೀರ್ಣ ಮತ್ತು ಮಲಬದ್ಧತೆಯಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಲೂ ಪರಿಹಾರವನ್ನು ನೀಡುತ್ತದೆ. 


ಇದನ್ನೂ ಓದಿ- ಚಳಿಗಾಲದಲ್ಲಿ ಮೆಂತ್ಯ ಸೊಪ್ಪಿನ ಸೇವನೆಯಿಂದ ಸಿಗುತ್ತೆ ಅದ್ಭುತ ಆರೋಗ್ಯ ಪ್ರಯೋಜನಗಳು


ಕೂದಲು ಉದುರುವಿಕೆ ಸಮಸ್ಯೆಯಿಂದ ಮುಕ್ತಿ:
ಚಳಿಗಾಲದಲ್ಲಿ ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಸಮಸ್ಯೆ ಸರ್ವೇ ಸಾಮಾನ್ಯವಾಗಿದೆ. ಆದರೆ, ಈರುಳ್ಳಿ ರಸ ಬಳಸಿ ಈ ಸಮಸ್ಯೆಗೆ ಸುಲಭವಾಗಿ ಪರಿಹಾರ ಪಡೆಯಬಹುದು.  ಈರುಳ್ಳಿ ರಸದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಕೂದಲಿನಲ್ಲಿ ಯಾವುದೇ ರೀತಿಯ ಸೋಂಕು ಇದ್ದಲ್ಲಿ ಅದನ್ನು ಸುಲಭವಾಗಿ ನಿವಾರಿಸುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.