ಮನೆಯ ಸುತ್ತ ಈ ಗಿಡಗಳನ್ನು ನೆಟ್ಟರೆ ಸೊಳ್ಳೆ ಹತ್ತಿರವೂ ಸುಳಿಯುವುದಿಲ್ಲ
ಸೊಳ್ಳೆ ಕಚ್ಚಿದರೆ ಡೆಂಗ್ಯೂ (Dengue), ಮಲೇರಿಯಾ, ಚಿಕುನ್ ಗುನ್ಯಾದಂಥಹ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಮಾತ್ರವಲ್ಲ ಸೊಳ್ಳೆ ಕಚ್ಚಿದ ಸ್ಥಳದಲ್ಲಿ ತುರಿಕೆ ಕಾಣಿಸಿಕೊಂಡು ಚರ್ಮದ ಅಲರ್ಜಿ ಬಾದಿಸುತ್ತದೆ.
ಬೆಂಗಳೂರು : ಮಳೆಗಾಲ ಬಂತೆಂದರೆ ಸೊಳ್ಳೆಗಳ (Mosquito) ಕಾಟ ಹೆಚ್ಚಾಗಿರುತ್ತದೆ. ಆದರೆ ಬೇಸಿಗೆಯ ಸಮಯದಲ್ಲಿಯೂ ಬೆಳಿಗ್ಗೆ, ಸಂಜೆ ಸೊಳ್ಳೆಗಳು ಹೆಚ್ಚಾಗಿರುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ (Dengue), ಮಲೇರಿಯಾ, ಚಿಕುನ್ ಗುನ್ಯಾದಂಥಹ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಮಾತ್ರವಲ್ಲ ಸೊಳ್ಳೆ ಕಚ್ಚಿದ ಸ್ಥಳದಲ್ಲಿ ತುರಿಕೆ ಕಾಣಿಸಿಕೊಂಡು ಚರ್ಮದ ಅಲರ್ಜಿ ಬಾದಿಸುತ್ತದೆ. ಮನೆಯ ಸುತ್ತ ಮುತ್ತ ಕೆಲವೊಂದು ಸಸ್ಯಗಳನ್ನು ನೆಡುವ ಮೂಲಕ ಸೊಳ್ಳೆ ಕಾಟದಿಂದ ಮುಕ್ತಿ ಪಡೆಯಬಹುದು.
ಮನೆ ಸುತ್ತ ಈ ಗಿಡಗಳನ್ನು ನೆಟ್ಟರೆ ಸೊಳ್ಳೆಗಳು ಹತ್ತಿರವೂ ಸುಳಿಯುವುದಿಲ್ಲ :
ಸೊಳ್ಳೆಗಳ (Mosquito) ಕಾಟ ತಪ್ಪಿಸಲು ಲೋಷನ್ ಗಳು , ಕ್ರೀಮ್ ಗಳು, ಮಾರುಕಟ್ಟೆಯಲ್ಲಿ ಸಿಗುತ್ತವೆ. ಆದರೆ ಇದರಲ್ಲಿ ರಾಸಾಯನಿಕಗಳಿರುತ್ತವೆ. ಈ ಕಾರಣದಿಂದಾಗಿ ಇವೆಲ್ಲವೂ ಚರ್ಮದ ಮೇಲೆ ಅಡ್ಡಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ ಸೊಳ್ಳೆಗಳ ಕಾಟವನ್ನು ತಪ್ಪಿಸುವ ಸಲುವಾಗಿ ನೈಸರ್ಗಿಕ ವಿಧಾನವನ್ನು ಅಳವಡಿಸಿಕೊಳ್ಳುವುದು ಉತ್ತಮ.
ಇದನ್ನೂ ಓದಿ : ಅಸಿಡಿಟಿ ಸಮಸ್ಯೆ ಹೋಗಲಾಡಿಸಲು ಸಿಂಪಲ್ ಮನೆ ಮದ್ದುಗಳಿವು ..!
1.ಚೆಂಡು ಹೂವು : ಚೆಂಡು ಹೂವು ಎಲ್ಲಾ ಕಾಲದಲ್ಲೂ ಅರಳುತ್ತದೆ. ಈ ಹೂವಿನ ಸುವಾಸನೆಯನ್ನು ಸೊಳ್ಳೆಗಳು ಇಷ್ಟಪಡುವುದಿಲ್ಲ. ಈ ಕಾರಣದಿಂದ ಸೊಳ್ಳೆಗಳು ಈ ಸಸ್ಯದಿಂದ ದೂರವಿರುತ್ತದೆ (mosquito repellent plants). ಈ ಗಿಡವನ್ನು ನೆಟ್ಟರೆ ಹೂವುಗಳಿಂದ ಮನೆಯ ಸೌಂದರ್ಯವೂ ಹೆಚ್ಚುತ್ತದೆ. ಸೊಳ್ಳೆ ಕಾಟದಿಂದ ಮುಕ್ತಿಯೂ ಸಿಗುತ್ತದೆ. ಈ ಸಸ್ಯವನ್ನು ಮನೆಯ ಹೊಸ್ತಿಲಲ್ಲಿಟ್ಟರೆ ಸೊಳ್ಳೆ ಮನೆ ಒಳಗೆ ಬರುವುದೇ ಇಲ್ಲ.
2. ಲ್ಯಾವೆಂಡರ್ ಸಸ್ಯ : ಈ ಸಸಿಯ ಸುತ್ತ ಸೊಳ್ಳೆಗಳು ಮಾತ್ರವಲ್ಲ, ಇತರ ಯಾವ ಕೀಟಗಳು ಕೂಡಾ ಬರುವುದಿಲ್ಲ. ಲ್ಯಾವೆಂಡರ್ (Lavender) ಸಸ್ಯದ ಎಲೆಗಳಲ್ಲಿ ಕಂಡುಬರುವ ಎಸೆನ್ಶಿಯಲ್ ಆಯಿಲ್ ಕಾರಣದಿಂದ ಈ ಸಸ್ಯದಿಂದ ಸುಗಂಧ ಹೊರ ಹೊಮ್ಮುತ್ತದೆ. ಈ ಸುಗಂಧದ ಕಾರಣದಿಂದ ಸೊಳ್ಳೆಗಳು ಈ ಸಸ್ಯದ ಸುತ್ತ ಮುತ್ತ ಪ್ರದೇಶಗಳಲ್ಲಿ ಸುಳಿಯುವುದಿಲ್ಲ. ಈ ಸಸ್ಯದ ಇನ್ನೊಂದು ವಿಶೇಷವೆಂದರೆ ಈ ಸಸ್ಯಕ್ಕೆ ನೀರಿನ ಅಗತ್ಯವಿರುವುದಿಲ್ಲ.
ಇದನ್ನೂ ಓದಿ : Spinach Juice Benefits: ಬೇಸಿಗೆಯಲ್ಲಿ ಆರೋಗ್ಯಕ್ಕೆ ವರದಾನ ಪಾಲಕ್ ಜ್ಯೂಸ್
3. ತುಳಸಿ ಮತ್ತು ಪುದೀನ ಗಿಡ : ತುಳಸಿ ಮತ್ತು ಪುದೀನ ಎರಡರಲ್ಲೂ ಔಷಧೀಯ ಗುಣಗಳಿರುತ್ತವೆ. ಸೊಳ್ಳೆಗಳನ್ನು ಮನೆಯಿಂದ ದೂರವಿರಿಸಲು ತುಳಸಿ (Tulsi) ಮತ್ತು ಪುದೀನ ಸಹಾಯ ಮಾಡುತ್ತದೆ. ತುಳಸಿ ಎಲೆಗಳಿಂದ ಹೊರ ಬರುವ ಪರಿಮಳವು ಸೊಳ್ಳೆಗಳು ಮತ್ತು ಕೀಟಗಳನ್ನು ದೂರವಿಡಲು ಸಹಾಯ ಮಾಡುತ್ತದೆ. ಪುದೀನ (Pudina) ಸಸ್ಯವು ಸೊಳ್ಳೆಗಳು ಮಾತ್ರವಲ್ಲ ನೊಣಗಳು ಮತ್ತು ಇರುವೆಗಳನ್ನು ಕೂಡಾ ಮನೆಯಿಂದ ದೂರವಿರಿಸುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.