Navratri 2021: ನವರಾತ್ರಿಯಲ್ಲಿ ಈ ಗಿಡಗಳನ್ನು ನೆಡುವುದು ಅತ್ಯಂತ ಶುಭ, ದೂರವಾಗುತ್ತೆ ಹಣಕ್ಕೆ ಸಂಬಂಧಿಸಿದ ಸಮಸ್ಯೆ
Navratri 2021: ನವರಾತ್ರಿಯ ಸಮಯದಲ್ಲಿ ನೀವು ಕೆಲವು ವಿಶೇಷ ಗಿಡಗಳನ್ನು ನೆಡುವುದರಿಂದ, ಅದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಇದು ನಿಮ್ಮ ಹಣಕಾಸಿನ ಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ.
Navratri 2021: ಯಾವುದೇ ಶುಭ ಸಮಾರಂಭಗಳನ್ನೂ ನವರಾತ್ರಿಯಲ್ಲಿ ಮಾಡುವುದು ಅತ್ಯಂತ ಮಂಗಳಕರವೆಂದು ನಂಬಲಾಗಿದೆ. ಅಷ್ಟೇ ಅಲ್ಲದೆ ನವರಾತ್ರಿಯ ಸಮಯದಲ್ಲಿ ಕೆಲವು ವಿಶೇಷ ಗಿಡಗಳನ್ನು ಮನೆಯಲ್ಲಿ ನೆಡುವುದು ಅತ್ಯಂತ ಶುಭ ಎಂದು ಪರಿಗಣಿಸಿಸಲಾಗಿದೆ. ಇದರಲ್ಲಿ ಅತ್ಯಂತ ವಿಶೇಷವೆಂದರೆ ತುಳಸಿ ಗಿಡ. ನವರಾತ್ರಿಯ ಸಮಯದಲ್ಲಿ ನೀವು ಮನೆಯಲ್ಲಿ ತುಳಸಿ ಗಿಡವನ್ನು ನೆಟ್ಟರೆ ಅದು ಸಮೃದ್ಧಿಯನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಅದೇ ರೀತಿ, ಬಾಳೆ, ಶಂಖಪುಷ್ಪ ಮತ್ತು ಪಾರಿಜಾತ ಗಿಡಗಳನ್ನು ನವರಾತ್ರಿಯಲ್ಲಿ ನೆಡುವುದು ಶುಭವೆಂದು ಪರಿಗಣಿಸಲಾಗಿದೆ. ನವರಾತ್ರಿಯಲ್ಲಿ ಈ ಗಿಡಗಳನ್ನು ನೆಡುವುದರಿಂದ ಮಾತೆಯು ಸಂತೋಷಗೊಳ್ಳುವಳು ಮತ್ತು ಅಂತಹ ಮನೆಯಲ್ಲಿ ಹಣದ ಸಮಸ್ಯೆ ಇರುವುದಿಲ್ಲ ಎಂಬ ನಂಬಿಕೆ ಇದೆ.
ತುಳಸಿ ಗಿಡ:
ಹಿಂದೂ ಧರ್ಮದಲ್ಲಿ ತುಳಸಿ (Tulsi) ಗಿಡಕ್ಕೆ ವಿಶೇಷ ಮಹತ್ವವಿದೆ. ನವರಾತ್ರಿಯ ಸಮಯದಲ್ಲಿ ಮನೆಯಲ್ಲಿ ತುಳಸಿ ಗಿಡವನ್ನು ನೆಡುವುದರಿಂದ ಲಕ್ಷ್ಮಿ ಸಂತೋಷವಾಗುತ್ತಾಳೆ ಎಂದು ನಂಬಲಾಗಿದೆ. ಇದು ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಈ ಗಿಡವನ್ನು ನೆಟ್ಟ ನಂತರ, ಭಾನುವಾರ ಮತ್ತು ಏಕಾದಶಿ ಹೊರತುಪಡಿಸಿ ಪ್ರತಿದಿನ ತುಳಸಿಗೆ ನೀರನ್ನು ಅರ್ಪಿಸಿ. ಹಾಗೆಯೇ, ಸಂಜೆ, ಖಂಡಿತವಾಗಿಯೂ ತುಳಸಿ ಗಿಡದ ಬಳಿ ದೀಪವನ್ನು ಹಚ್ಚಿದರೆ ಮನೆಯಲ್ಲಿ ಸದಾ ಸಕಾರಾತ್ಮಕ ಶಕ್ತಿ ಮನೆಮಾಡುತ್ತದೆ ಎಂದು ಹೇಳಲಾಗುತ್ತದೆ.
ಇದನ್ನೂ ಓದಿ- Navratri 2021: ನವರಾತ್ರಿಯಲ್ಲಿ ಈ 4 ರಾಶಿಯವರ ಮೇಲೆ ದುರ್ಗಾ ಮಾತೆಯ ವಿಶೇಷ ಕೃಪೆ
ಬಾಳೆ ಗಿಡ:
ನವರಾತ್ರಿಯ (Navaratri) ಸಮಯದಲ್ಲಿ ಬಾಳೆ ಗಿಡವನ್ನು (Banana Plant) ನೆಡುವುದು ಕೂಡ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಗಿಡವನ್ನು ಮನೆಯಲ್ಲಿ ನೆಡುವುದು ಮತ್ತು ಪ್ರತಿ ಗುರುವಾರ ನೀರು ಮಿಶ್ರಿತ ಹಾಲನ್ನು ಗಿಡಕ್ಕೆ ಅರ್ಪಿಸುವುದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ.
ಶಂಖಪುಷ್ಪಿ:
ಶಂಖಪುಷ್ಪಿಯನ್ನು ಮಾಂತ್ರಿಕ ಮೂಲಿಕೆ ಎಂದು ಪರಿಗಣಿಸಲಾಗಿದೆ. ಅದರ ಬೇರುಗಳಿಂದ ಎಲೆಗಳವರೆಗೆ, ಇದನ್ನು ಮೂಲಿಕೆಯಾಗಿ ಬಳಸಲಾಗುತ್ತದೆ. ಈ ಸಸ್ಯವು ಆರೋಗ್ಯಕ್ಕೆ ಮಾತ್ರವಲ್ಲ, ಮನೆಯಲ್ಲಿ ಸಮೃದ್ಧಿಯನ್ನೂ ತರುತ್ತದೆ. ನವರಾತ್ರಿಯ ಸಮಯದಲ್ಲಿ ಅದರ ಮೂಲವನ್ನು ಮನೆಗೆ ತಂದು ಬೆಳ್ಳಿಯ ಪೆಟ್ಟಿಗೆಯಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಇದು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಮನೆಯಲ್ಲಿ ಆರ್ಥಿಕ ಸಮಸ್ಯೆ ಕೊನೆಗೊಳ್ಳುತ್ತದೆ ಎನ್ನಲಾಗಿದೆ.
ಇದನ್ನೂ ಓದಿ- ನವರಾತ್ರಿಯಲ್ಲಿ ತಪ್ಪಿಯೂ ಮಾಡದಿರಿ ಈ ಕೆಲಸಗಳನ್ನು , ದುರ್ಗೆಯ ಮುನಿಸಿಗೆ ಕಾರಣವಾಗಬಹುದು
ಪಾರಿಜಾತ ಸಸ್ಯ:
ನವರಾತ್ರಿಯಲ್ಲೂ ಹರ್ಸಿಂಗರ್ ಗಿಡವನ್ನು ಅಂದರೆ ಪಾರಿಜಾತ ಗಿಡವನ್ನು ನೆಡಬಹುದು. ನವರಾತ್ರಿಯಲ್ಲಿ ಈ ಗಿಡವನ್ನು ನೆಡುವುದು ಕೂಡ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಸ್ನಾನ ಮಾಡಿದ ನಂತರ ಮತ್ತು ಸ್ವಚ್ಛವಾದ ಬಟ್ಟೆಗಳನ್ನು ಧರಿಸಿದ ನಂತರ ಈ ಗಿಡವನ್ನು ನೆಡಿ.
ಸೂಚನೆ: ಇಲ್ಲಿ ನೀಡಿರುವ ಮಾಹಿತಿಯು ಸಾಮಾನ್ಯ ಊಹೆಗಳನ್ನು ಆಧರಿಸಿದೆ. ಜೀ ಹಿಂದೂಸ್ಥಾನ್ ಕನ್ನಡ ನ್ಯೂಸ್ ಇದನ್ನು ದೃಢೀಕರಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ