ಚಾಮರಾಜನಗರ: ಭಾರತದ ನಯಾಗರ ಎಂದೇ ಪ್ರಸಿದ್ಧಿಯಾಗಿರುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೆನಕಲ್ ಜಲಪಾತಕ್ಕೆ ತೆರಳುವ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕೇರಳದ ವೈನಾಡಿನಲ್ಲಿ (Kerala Wyanad) ಅಪಾರ ಪ್ರಮಾಣದ ಮಳೆಯಾಗಿ ಕಬಿನಿ ಜಲಾಶಯ ಭರ್ತಿಯಾಗಿದ್ದ ಹಿನ್ನೆಲೆ ಕಬಿನಿ ಜಲಾಶಯದಿಂದ 70 ಸಾವಿರ ಕ್ಯೂಸೆಕ್ಸ್ ಹಾಗೂ ಕೆ ಆರ್ ಎಸ್ ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದರಿಂದ ಹೊಗೆನಕಲ್ ಫಾಲ್ಸ್ ನಲ್ಲಿ ಕಾವೇರಿ ರೌದ್ರ ನರ್ತನ ಉಂಟಾಗಿ ಜಲಪಾತವೇ ಮುಚ್ಚಿ ಹೋಗಿತ್ತು. ಈ ಹಿನ್ನೆಲೆ ಕಾವೇರಿ ವನ್ಯಜೀವಿ ವಲಯ (Kaveri Wildlife Zone) ವ್ಯಾಪ್ತಿಯಲ್ಲಿ ಬರುವ ಗೋಪಿನಾಥಂ ವಲಯ ಅರಣ್ಯ ಅಧಿಕಾರಿಗಳು ಜುಲೈ 20 ರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದರು.
ಇದನ್ನೂ ಓದಿ- ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಭರಚುಕ್ಕಿ: ಕಾವೇರಿ ಜಲ ವೈಯ್ಯಾರ ಸೃಷ್ಟಿ
ಇದೀಗ ನದಿ ಹರಿವಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಆಗಸ್ಟ್ ಏಳರಿಂದ ಪ್ರವಾಸಿಗರಿಗೆ (Tourists) ತೆಪ್ಪದಲ್ಲಿ ಸಂಚಾರ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಇದನ್ನೂ ಓದಿ- ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ಈ ಥೀಮ್ ನೊಂದಿಗೆ ಫಲಪುಷ್ಪ ಪ್ರದರ್ಶನ..!
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಪ್ರವಾಸಿಗರಿಗೆ ತೆಪ್ಪ ಸಂಚಾರ ನಿರ್ಬಂಧ ಮಾಡಲಾಗಿತ್ತು. ಇದೀಗ ನೀರಿನ ಪ್ರಮಾಣ ಕಡಿಮೆಯಾಗಿದ್ದು ತೆಪ್ಪ ಸಂಚರಿಸಲು ಅನುಕೂಲವಾಗಿರುವುದರಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ ಎಫ್ಒ ಸಂಪತ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.