ಬೆಂಗಳೂರು : ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ, ಹೆಚ್ಚಿನ ಜನರು ಕೆಲವು ಕಾಯಿಲೆಗಳಿಗೆ ತುತ್ತಾಗುತ್ತಾರೆ. ಅಧಿಕ ಕೊಲೆಸ್ಟ್ರಾಲ್ ಕೂಡಾ ಇದೇ ಕಾರಣದಿಂದ ಬರುವ ಕಾಯಿಲೆ.  ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಹೃದಯಾಘಾತದ ಸಾಧ್ಯತೆಗಳು ಹೆಚ್ಚಾಗುತ್ತವೆ. ಆ ಪರಿಸ್ಥಿತಿಯನ್ನು ನಿಭಾಯಿಸಲು, ಆಹಾರ ಪದ್ದತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಇಲ್ಲವಾದರೆ ನಂತರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜೀವನ ಪರ್ಯಂತ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ತಡೆಯುವ ನಾಲ್ಕು ವಸ್ತುಗಳ ಬಗ್ಗೆ ನಾವಿಲ್ಲಿ ಮಾಹಿತಿ ನೀಡಲಿದ್ದೇವೆ. 


COMMERCIAL BREAK
SCROLL TO CONTINUE READING

1. ಸ್ಯಾಚುರೇಟೆಡ್ ಆಹಾರಗಳಿಂದ ದೂರವಿರಿ :
ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡಬೇಕಾದರೆ, ತಕ್ಷಣ ಸ್ಯಾಚುರೇಟೆಡ್ ಆಹಾರಗಳಿಂದ ದೂರವಿರಬೇಕು. ಇಲ್ಲದಿದ್ದರೆ  ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ವಾಸ್ತವವಾಗಿ, ಸ್ಯಾಚುರೇಟೆಡ್ ಆಹಾರಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. 


ಇದನ್ನೂ ಓದಿ : Oxygen Rich Fruits: ಶರೀರದಲ್ಲಿ ಆಕ್ಸಿಜನ್ ಕೊರತೆಯನ್ನು ನೀಗಿಸಲು ಈ ಹಣ್ಣುಗಳನ್ನು ಸೇವಿಸಿ


2. ಅತಿಯಾದ ಉಪ್ಪು-ಸಕ್ಕರೆ ಸೇವನೆಯನ್ನು ತಪ್ಪಿಸಿ :
ಕೊಲೆಸ್ಟ್ರಾಲ್ ನಿಯಂತ್ರಿಸಲು, ಹೆಚ್ಚು ಸಕ್ಕರೆ ಮತ್ತು ಉಪ್ಪನ್ನು ಸೇವಿಸಬಾರದು. ಈ ಎರಡು ವಸ್ತುಗಳನ್ನು ಹೆಚ್ಚು ಸೇವಿಸಿದರೆ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಈ ಕಾರಣದಿಂದ ಉಪ್ಪು ಮತ್ತು ಸಕ್ಕರೆಯನ್ನು ಅಗತ್ಯಕ್ಕಿಂತ ಹೆಚ್ಚು ಬಳಸಲೇ ಬಾರದು. ಸಾಧ್ಯವಾದಷ್ಟು ಕಡಿಮೆ ಉಪ್ಪು ಮತ್ತು ಸಕ್ಕರೆ ಸೇವಿಸಿದರೆ ಒಳ್ಳೆಯದು. 


3. ತಂಬಾಕು ಬಳಸಬೇಡಿ :
ತಂಬಾಕು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ತಂಬಾಕು ತಿಂದರೆ ಕ್ಯಾನ್ಸರ್ ಬರುವ ಅಪಾಯವಿರುತ್ತದೆ.  ಮಾತ್ರವಲ್ಲ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವ ಸಾಧ್ಯತೆಯೂ ಇದೆ. ಆದ್ದರಿಂದ ತಂಬಾಕಿನಿಂದ ಅಂತರ ಕಾಯ್ದುಕೊಳ್ಳುವುದು ಒಳ್ಳೆಯದು.  


ಇದನ್ನೂ ಓದಿ : ಹಾಲಿಗೆ ಒಂದು ಚಿಟಕಿ ಇಂಗು ಹಾಕಿ ಕುಡಿದರೆ ತಕ್ಷಣವೇ ಸಿಗುತ್ತದೆ ಈ ಸಮಸ್ಯೆಗಳಿಂದ ಮುಕ್ತಿ


4. ಮದ್ಯಪಾನ ಮಾಡಬೇಡಿ  :
ಆಲ್ಕೋಹಾಲ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮದ್ಯಪಾನದ ಅಭ್ಯಾಸವಿದ್ದರೆ ಅದನ್ನು ಈ ಕ್ಷಣವೇ ಬಿಟ್ಟು ಬಿಡುವುದು ಒಳ್ಳೆಯದು. ಇಲ್ಲವಾದರೆ ಆರೋಗ್ಯ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿರುತ್ತದೆ. ಮದ್ಯಪಾನ ದೇಹದಲ್ಲಿ ನಾನಾ ರೀತಿಯ ಸಮಸ್ಯೆ ಹುಟ್ಟಿಕೊಳ್ಳಲು ಕಾರಣವಾಗುತ್ತದೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ. 



https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.