Shiva Temple: ಕೃಷ್ಣ ನದಿ ಬರಿದಾದ ಬೆನ್ನಲ್ಲೇ ಹಳೆ ಕಾಲದ ಶಿವನ ದೇವಾಲಯವೊಂದು ಗೋಚರಿಸುತ್ತಿದ್ದು, ಎಲ್ಲರನ್ನ ಆಶ್ಚರ್ಯ ಚಕಿತಗೊಳಿದೆ. ಪ್ರತಿ ಮೂರ್ನಾಲ್ಕು ವರ್ಷಗಳಿಗೊಮ್ಮೆ ಬಾಗಲಕೋಟೆ ಜಿಲ್ಲೆ ಅನಾವೃಷ್ಠಿಗೆ ತುತ್ತಾದಾಗ ಈ ದೇವಾಲಯ ಗೋಚರವಾಗುತ್ತದೆ ಎಂಬುದು ಇಲ್ಲಿನ ವಿಶೇಷವಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಿಷವಾಡಗಿ ಬ್ಯಾರೇನ ಹಿಂಭಾಗದಲ್ಲಿದೆ. 


COMMERCIAL BREAK
SCROLL TO CONTINUE READING

ಅಂದಹಾಗೆ ಇದು ಶಿವನ ದೇವಸ್ಥಾನ, ಕೆಲವು ಸ್ಥಳೀಯರು‌ ಇದನ್ನ ಬಾಳಪ್ಪಜ್ಜನ ದೇವಾಲಯ ಎಂದೂ ಕರೆಯುತ್ತಾರೆ. ಅದನ್ನು ಯಾರು ಕಟ್ಟಿಸಿದರು? ಯಾವಾಗ ಕಟ್ಟಿಸಿದರು? ನದಿಯ ನಡುವೆ ಯಾಕೆ ಕಟ್ಟಿಸಿದರೂ ? ಎಂಬು ನೂರೆಂಟು ಪ್ರಶ್ನೆಗಳು ಇಂದಿಗೂ ಎಲ್ಲರನ್ನ ಕಾಡುತ್ತಿವೆ.


ಕೃಷ್ಣಾ ನದಿ ಖಾಲಿಯಾಗಿದ್ದರಿಂದ ಮಹಿಷವಾಡಗಿ ಬ್ಯಾರೇಜನ ಹಿಂಭಾಗದಲ್ಲಿ ಕಟ್ಟಿರುವ ಈ ಗುಡಿ(ದೇವಸ್ಥಾನ) ಪೂರ್ತಿಯಾಗಿ ಕಾಣತೊಡಗಿದ್ದು,  ಕೃಷ್ಣೆ ಪೂರ್ತಿ ಬರಿದಾದಾಗ ಮಾತ್ರ ಕಾಣುವ ಈ ದೇವಸ್ಥಾನ ಅಪರೂಪ ಎನ್ನುವಂತೆ ವರ್ಷದಲ್ಲಿ ಒಂದು ಬಾರಿ ಇಲ್ಲವೇ, ಎರಡು ಮೂರು ವರ್ಷಕ್ಕೆ ಒಮ್ಮೆ ಹೀಗೆ ಬರಗಾಲ ಬಂದಾಗ ಮಾತ್ರ ಇದು ಗೋಚರಿಸುವುದರ ಜೊತೆಗೆ ಕೆಲವೇ ದಿನಗಳು ಪೂಜೆಗೊಳ್ಳುವ ವಿಶೇಷ ದೇವಸ್ಥಾನ ಇದಾಗಿದೆ. 


ಇದನ್ನೂ ಓದಿ- Tulsi Remedis: ಒಣಗಿದ ತುಳಸಿ ಸಸ್ಯದಿಂದ ನಿಮ್ಮ ಖಜಾನೆಯನ್ನೂ ತುಂಬಿಸಬಹುದು


ದಿನ ದಿನಕ್ಕೆ ನೀರು ಕಡಿಮೆಯಾದಂತೆ ಗೋಚರಿಸುವ ಈ ದೇವಾಲಯವು ಪೂರ್ವಕ್ಕೆ ಮುಖ ಮಾಡಿ ಕಟ್ಟಲಾಗಿದೆ. ದೇವಾಲಯದ ಗರ್ಭಗುಡಿಯಲ್ಲಿ ಲಿಂಗವಿದೆ. ವಿಶಾಲವಾದ ಪಡಶಾಲೆ ಇದೆ. ಮೂರು ಕಮಾನುಗಳ ಪ್ರವೇಶ ದ್ವಾರವಿದ್ದು, ನದಿಯ ಕಡೆ ಒಂದು ಬಾಗಿಲು, ಅದಕ್ಕೆ ಎದುರುಗಡೆ ಮತ್ತೊಂದು ಬಾಗಿಲು, ಬೃಹತ್ ಆಕಾರದ ಕರಿ ಕಲ್ಲಿನಿಂದ ನಿರ್ಮಿಸಲಾಗಿರುವ ಕಟ್ಟಡದಲ್ಲಿ ಯಾವುದೇ ವಾಸ್ತು ಶಿಲ್ಪವಾಗಲಿ ಕೆತ್ತನೆಯ ಕೆಲಸವಾಗಲಿ ಇಲ್ಲ. ಅದರೂ ಅದು ನೋಡುಗರನ್ನು ಆರ್ಕರ್ಷಿಸುವಂತಿದೆ.


ಈ ದೇವಾಲಯದ ಕುರಿತು ಮಾಹಿತಿ ಕಲೆ ಹಾಕುವಾಗ ರಬಕವಿಯ ಮರೆಗುದ್ದಿ ಮನೆತನದ ಹಿರಿಯ ಅಜ್ಜ ಬಾಳಪ್ಪ ಮರೆಗುದ್ದಿ ಕಟ್ಟಿಸಿದ್ದು ಎಂದು ತಿಳಿದು ಬಂದಿದ್ದು, ಈಗಲೂ ಆ ದೇವಸ್ಥಾನಕ್ಕೆ ಬಾಳಪ್ಪನ ಗುಡಿ ಅಂತಾ ಕರಿಯುತ್ತಾರೆ. ಆದರೆ ಅದು ಈಶ್ವರನ ದೇವಸ್ಥಾನ. 


ಮರೆಗುದ್ದಿ ಮನೆತನದವರು ಹೇಳುವ ಪ್ರಕಾರ, ಇವರ ಅಜ್ಜನಿಗೆ ಗಂಡು ಸಂತಾನ ಇರಲಿಲ್ಲ. ಇಬ್ಬರು ಹೆಣ್ಣು ಮಕ್ಕಳಿದ್ದರು. ಅವರಿಗೂ ಮದುವೆ ಆಗಿತ್ತು. ಬಾಳಪ್ಪ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿದ್ದರು. ಹಾಗೆಯೇ, ಚಿಲ್ಲರೆ ನಾಣ್ಯಗಳಿಂದ ಸಾಕಷ್ಟು ಹಣ ಕೂಡಿಸಿದ್ದರು. ಆ ಹಣ ಏನು ಮಾಡುವುದು ಎಂಬ ವಿಚಾರ ಹಿರಿಯರನ್ನು ಕೇಳಿದಾಗ ಅವರು ಕೃಷ್ಣಾ ನದಿಯ ದಡದಲ್ಲಿ ಒಂದು ಗುಡಿ ಇಲ್ಲ. ಅಲ್ಲಿ ಗುಡಿ ಕಟ್ಟಿಸಿದರ ಹೋಗಿ ಬರುವ ಜನಕ್ಕೆ ಪೂಜೆ ಮಾಡಲಿಕ್ಕೆ ಒಂದು ಜಾಗ ಆಗತದ್ ಮತ್ತು ಇದರಿಂದ ಬಹಳ ಜನಕ್ಕ ಅನಕೂಲ ಆಗತದ್ ಅದಕ್ಕ ಅಲ್ಲೇ ಗುಡಿ ಕಟ್ಟಿಸು ಎಂದು ಸಲಹೆ ನೀಡಿದ್ದರಂತೆ. 


ಆಗ ಬನಹಟ್ಟಿ ಜಮಖಂಡಿ ಸಂಸ್ಥಾನಕ್ಕೆ ಸೇರಿದ್ದರೇ, ರಬಕವಿ ಸಾಂಗ್ಲಿ ಸಂಸ್ಥಾನಕ್ಕೆ ಸೇರಿತ್ತು. ಆಗಿನ ಸಾಂಗ್ಲಿ ಸಂಸ್ಥಾನದಿಂದ ದೇವಾಲಯ ಕಟ್ಟಲು ಪರವಾಣಿಗೆ ಪಡೆದು 1912ರ ಸುಮಾರಿಗೆ ಈ ದೇವಾಲಯವನ್ನು ನಿರ್ಮಿಸಲಾಯಿತು. 


ಧಾರ್ಮಿಕ ಕಾರ್ಯವಾಗಿದ್ದರಿಂದ ನಮ್ಮ ಮುತ್ಯಾ ಯಾವುದಕ್ಕೂ ನನ್ನ ಹೆಸರು ಬೇಡ ಅಂದರು. ಈ ದೇವಾಲಯ ಕಟ್ಟಿಸಿದರ ಬಗ್ಗೆ ಸಾಂಗ್ಲಿಯಲ್ಲಿ ದಾಖಲೆಗಳು ಮೋಡಿ ಭಾಷೆಯೊಳಗೆ ನೋಡಲು ಸಿಗುತ್ತಾವೆ ಎನ್ನುತ್ತಾರೆ ಮರೆಗುದ್ದಿ ಮನೆತನದವರು. 


ಇದನ್ನೂ ಓದಿ- Thursday Remedy: ಹಣದ ಸಮಸ್ಯೆಗೆ ಗುರುವಾರ ಈ ಕೆಲಸ ಮಾಡಿ


ಮೊದಲು ನದಿಯ ವ್ಯಾಪ್ತಿ ಬಹಳ ಕಡಿಮೆ ಇದ್ದ ಕಾರಣ ದೇವಾಲಯ ನದಿಯ ದಡದಲ್ಲಿ ಇತ್ತು. ಆದರೆ 1971ರಲ್ಲಿ ವಿರೇಂದ್ರ ಪಾಟೀಲ ಸರ್ಕಾರ ರಬಕವಿ-ಬನಹಟ್ಟಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಬ್ಯಾರೇಜ ನಿರ್ಮಿಸಲು ಅನುಮತಿ ನೀಡಿದರೆ, 1973ರಲ್ಲಿ ದೇವರಾಜ ಅರಸು ಸರ್ಕಾರವಿದ್ದಾಗ ಪ್ರಥಮ ಬಾರಿಗೆ ನೀರನ್ನು ತಡೆ ಹಿಡಿಯಲಾಯಿತು. ಕಾರಣ ದೇವಾಲಯ ನೀರೊಳಗೆ ಮುಳುಗಿ ಹೋಯಿತು. 


ಈಗ ಅದೇ ನದಿಯ ಮಧ್ಯ ಭಾಗವಾಯಿತು. ನಿಜಕ್ಕೂ ಒಂದು ಅಪರೂಪದ ದೇವಸ್ಥಾನವಾಗಿರುವ ಇದು ಶತಮಾನಗಳು ಕಳೆದರೂ ಯಾವುದೇ ನೀರಿಗೂ ಗರ್ಭಗುಡಿಯಲ್ಲಿರುವ ಮೂರ್ತಿಗಳು ಜಗ್ಗದೇ ಆಲುಗಾಡದೇ ಹಾಗೇ ನಿಂತಿರುವುದು ವಿಶೇಷವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ