ಬೆಂಗಳೂರು : ಭಾರತದಲ್ಲಿ ಪಾಲಕ್ ಬಹಳ ಜನಪ್ರಿಯವಾಗಿದೆ. ಪಾಲಕ್ ಸೊಪ್ಪಿನಲ್ಲಿ ಅಪಾರ ಪ್ರಮಾಣದಲ್ಲಿ ಪೌಷ್ಟಿಕ ಅಂಶಗಳು ಕಂಡು ಬರುತ್ತವೆ. ಇದರ ದೈನಂದಿನ ಸೇವನೆಯು ದೇಹದಲ್ಲಿ ಕಬ್ಬಿಣ ಮತ್ತು ಪ್ರೋಟೀನ್ ಕೊರತೆಯನ್ನು ಪೂರೈಸುತ್ತದೆ (Benefits of Palak). ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಪಾಲಕ್ ಸೊಪ್ಪಿನ ಸೇವನೆಯು ಮಧುಮೇಹವನ್ನು ಸಹ ನಿಯಂತ್ರಿಸುತ್ತದೆ. 


COMMERCIAL BREAK
SCROLL TO CONTINUE READING

ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ​​ಪ್ರಕಾರ, ಪಾಲಕ್ ಮಧುಮೇಹ ರೋಗಿಗಳಿಗೆ ಸೂಪರ್ ಫುಡ್ ಆಗಿದೆ. ಪಾಲಕ್ ಸೊಪ್ಪು ಜೀವಸತ್ವಗಳು, ಖನಿಜಗಳು ಮತ್ತು ಫೈಟೊಕೆಮಿಕಲ್‌ಗಳಲ್ಲಿ ಸಮೃದ್ಧವಾಗಿದೆ. ಇದರ ಹೊರತಾಗಿ, ಅದರ ಗ್ಲೈಸೆಮಿಕ್ ಇಂಡೆಕ್ಸ್ ಕೂಡ ಕಡಿಮೆ ಇರುತ್ತದೆ. ಇದರಿಂದಾಗಿ ಶುಗರ್ ಲೆವೆಲ್ (Sugar Level Control) ನಿಯಂತ್ರಣದಲ್ಲಿದೆ. ಕಡಿಮೆ ಕ್ಯಾಲೋರಿ ಹೊಂದಿರುವ ಪಾಲಕ್ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.


ಇದನ್ನೂ ಓದಿ : Health Tips : ಇಂತಹ ತಪ್ಪುಗಳಿಂದ ನಿಮ್ಮ ತುಟಿ ಕಪ್ಪಾಗುತ್ತದೆ..! 


ಪಾಲಕ್‌ನ ದೈನಂದಿನ ಸೀಮಿತ ಸೇವನೆಯು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತದೆ. ಪ್ರತಿದಿನ ಸೀಮಿತ ಪ್ರಮಾಣದಲ್ಲಿ ಪಾಲಕ್ ಸೊಪ್ಪನ್ನು ಸೇವಿಸುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ (Palak for diabetes). ಇದು ಹೃದಯದ ಆರೋಗ್ಯವನ್ನು ಸಹ ಕಾಪಾಡುತ್ತದೆ. 


ಸಕ್ಕರೆಯನ್ನು ನಿಯಂತ್ರಿಸುತ್ತದೆ: ಪಾಲಕ್ ಮೆಗ್ನೀಸಿಯಮ್ ಮತ್ತು ಫೈಬರ್ ನಲ್ಲಿ  ಸಮೃದ್ಧವಾಗಿರುವ ಹಸಿರು ತರಕಾರಿಯಾಗಿದೆ. ಈ ಎರಡೂ ಪೋಷಕಾಂಶಗಳು ಮಧುಮೇಹವನ್ನು ನಿಯಂತ್ರಣದಲ್ಲಿರಿಸುತ್ತದೆ. ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಹೆಚ್ಚಾಗಲು ಬಿಡುವುದಿಲ್ಲ. 


ಇದನ್ನೂ ಓದಿ : Chikoo Health Benefits: ಸಪೋಟ ಹಣ್ಣಿನ ಸೇವನೆ ಈ 4 ಸಮಸ್ಯೆಗಳಿಗೆ ರಾಮಬಾಣವಿದ್ದಂತೆ!


ವಿಟಮಿನ್‌ಗಳ ದೈನಂದಿನ ಡೋಸೇಜ್: ನಮಗೆಲ್ಲರಿಗೂ ತಿಳಿದಿರುವಂತೆ, ಪಾಲಕ್ ವಿಟಮಿನ್‌ಗಳಲ್ಲಿ ಸಮೃದ್ಧವಾಗಿದೆ. ವಿಟಮಿನ್ ಎ, ಸಿ ಮತ್ತು 'ಕೆ' ಜೊತೆಗೆ ವಿಟಮಿನ್ ಬಿ ಕಾಂಪ್ಲೆಕ್ಸ್ ಸಹ ಇದರಲ್ಲಿ ಕಂಡುಬರುತ್ತದೆ. ಪ್ರತಿದಿನ ಒಂದು ಲೋಟ ಪಾಲಕ್ ಸೊಪ್ಪನ್ನು ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ವಿಟಮಿನ್ ಗಳು ದೇಹಕ್ಕೆ ಸಿಗುತ್ತವೆ. ಇದು ಚರ್ಮಕ್ಕೆ ಹೊಳಪನ್ನು ನೀಡುತ್ತದೆ (Benefits of Spinach). ಕಣ್ಣುಗಳನ್ನು ಆರೋಗ್ಯವಾಗಿಡಲು ಇದು ಪರಿಹಾರವಾಗಿದೆ.


ಮೂಳೆಗಳನ್ನು ಗಟ್ಟಿಗೊಳಿಸುತ್ತದೆ : ಪಾಲಕ್ ಸೊಪ್ಪಿನಲ್ಲಿ ಕ್ಯಾಲ್ಸಿಯಂ ಹೇರಳವಾಗಿದ್ದು, ಮೂಳೆಗಳನ್ನು ಬಲಗೊಳಿಸುತ್ತದೆ. ಇದು ಸ್ನಾಯುವಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ.


ಹೃದಯದ ಆರೋಗ್ಯ ಕಾಪಾಡುತ್ತದೆ : ಪಾಲಕ್ ಸೊಪ್ಪಿನಲ್ಲಿ ಹೃದಯವನ್ನು ಆರೋಗ್ಯವಾಗಿಡುವ ಗುಣವಿದೆ. ಅದರಲ್ಲಿ ಕಬ್ಬಿಣದ ಅಂಶ ಇರುವುದರಿಂದ  ರಕ್ತಹೀನತೆಯಾಗಲು ಬಿಡುವುದಿಲ್ಲ. ಇದರಿಂದಾಗಿ ರಕ್ತದಲ್ಲಿನ ಹಿಮೋಗ್ಲೋಬಿನ್ ಪ್ರಮಾಣವು ಕಡಿಮೆಯಾಗುವುದಿಲ್ಲ. 


ಇದನ್ನೂ ಓದಿ : Diabetes : ಮಧುಮೇಹಿಗಳೆ ಅಪ್ಪಿತಪ್ಪಿಯೂ ತಿನ್ನಬೇಡಿ ಈ ಎರಡು Dry Fruits


(ಸೂಚನೆ : ಇಲ್ಲಿ ನೀಡಲಾಗಿರುವ ಮಾಹಿತಿಯು ಮನೆ ಮದ್ದು, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿದೆ. ಇದನ್ನು ಅಳವಡಿಸಿಕೊಳ್ಳುವ ಮುನ್ನ ವೈದ್ಯರ ಸಲಹೆಯನ್ನು ಪಡೆದುಕೊಳ್ಳಿ. ZEE News ಇದನ್ನು  ಖಚಿತಪಡಿಸುವುದಿಲ್ಲ )


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.