Summer Protection Tips: ಬಿಸಿಲಿನ ಪ್ರಖರತೆ ತಪ್ಪಿಸಿಕೊಳ್ಳಲು ಈ ಕ್ರಮಗಳನ್ನು ಅನುಸರಿಸಿ...!

Summer Protection Tips: ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Written by - Manjunath N | Last Updated : Mar 31, 2024, 08:08 AM IST
Summer Protection Tips: ಬಿಸಿಲಿನ ಪ್ರಖರತೆ ತಪ್ಪಿಸಿಕೊಳ್ಳಲು ಈ ಕ್ರಮಗಳನ್ನು ಅನುಸರಿಸಿ...! title=
ಸಾಂಧರ್ಭಿಕ ಚಿತ್ರ

Summer Protection Tips: ಪ್ರಸ್ತುತ ಬೇಸಿಗೆಯಲ್ಲಿ ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ತಿಳಿಸಿದೆ.

ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇವುಗಳನ್ನು ಅನುಸರಿಸಿ:

ಹೆಚ್ಚು ನೀರು ಕುಡಿಯುವುದು:

ಬಾಯಾರಿಕೆ ಇಲ್ಲದಿದರೂ ಸಹ ಹೆಚ್ಚು ನೀರನ್ನು ಆಗಾಗ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‍ಎಸ್ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನÀ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‍ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ.

ಪ್ರಸ್ತುತ ಋತುಮಾನದ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ, ಕಿತ್ತಳೆ, ದ್ರಾಕ್ಷಿ ಅನಾನಸ್ ಹಾಗೂ ಸೌತೆಕಾಯಿ, ಎಳೆನೀರು ಕಾಯಿ ಹೆಚ್ಚು ಸೇವಿಸಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.

ಇದನ್ನೂ ಓದಿ: ಗಂಡು ಮಗು ಹೆರಲಿಲ್ಲವೆಂದು ಚಿತ್ರಹಿಂಸೆ: ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ..!

ಇವುಗಳನ್ನು ಮಾಡಬಾರದು:

ಬಿಸಿಲಿನಲ್ಲಿ ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮಧ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರಬಹುದು.

ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು.

ಸಾಮಾನ್ಯ ಅಪಾಯದ ಲಕ್ಷಣಗಳು:

ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಂಡುಬರುತ್ತವೆ.

ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‍ಎಸ್, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಇಲಾಖೆ ಸೂಚನೆ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News