Cholesterol Control Tips: ಸಾಮಾನ್ಯವಾಗಿ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದರೆ, ನೀವು ಮೊದಲು ನಿಮ್ಮ ಆಹಾರದಲ್ಲಿ ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಅಧಿಕ ಕೊಲೆಸ್ಟ್ರಾಲ್ ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಹೇಗೆ ಕಡಿಮೆ ಮಾಡಿಕೊಳ್ಳಬೇಕು ಅಥವಾ ಅದನ್ನು ಹೇಗೆ ನಿರ್ವಹಿಸಬೇಕು ಎಂಬುದು ಬಹುತೇಕರಿಗೆ ತಿಳಿದಿಲ್ಲ.ಇದೇ ವೇಳೆ ಇಂತಹ ಪರಿಸ್ಥಿತಿಯಲ್ಲಿ ಕೆಲ ಆಹಾರಗಳನ್ನು ಸೇವಿಸುವುದು ನಿಮ್ಮ ದೇಹಕ್ಕೆ ಹಾನಿಕಾರಕ ಸಾಬೀತಾಗಬಹುದು. ಔಷಧಿ ಮತ್ತು ವ್ಯಾಯಾಮದ ಜೊತೆಗೆ, ನೀವು ಆಹಾರದ ಬಗ್ಗೆಯೂ ವಿಶೇಷ ಕಾಳಜಿ ವಹಿಸುವುದು ಮುಖ್ಯವಾಗಿದೆ. ತಿನ್ನುವ ಮತ್ತು ಕುಡಿಯುವ ಕೆಲವು ದೈನಂದಿನ ಅಭ್ಯಾಸಗಳು ದೇಹದ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.


COMMERCIAL BREAK
SCROLL TO CONTINUE READING

ಈ ವಿಷಯಗಳನ್ನು ನೆನಪಿನಲ್ಲಿಡಿ
1. ಕೊಬ್ಬಿನಿಂದ ಕೂಡಿದ ಮಾಂಸ ಸೇವನೆಯನ್ನು ತಪ್ಪಿಸಿ

ಮಾಂಸವನ್ನು ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವೆಂದು ಪರಿಗಣಿಸಲಾಗಿದೆ, ಆದರೆ ಕೆಲವು ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಸ್ಯಾಚುರೇಟೆಡ್ ಕೊಬ್ಬನ್ನು ಸೇವಿಸುವುದು ಕೊಲೆಸ್ಟ್ರಾಲ್ ಮಟ್ಟದ ಮೇಲೆ ಪ್ರಭಾವ ಬೀರುತ್ತದೆ.


2. ಸಿಹಿ ಪದಾರ್ಥಗಳ ಸೇವನೆ ತಪ್ಪಿಸಿ
ಸಿಹಿ ಮತ್ತು ಸಕ್ಕರೆಯ ಪದಾರ್ಥಗಳನ್ನು ಸೇವಿಸುವುದರಿಂದ ದೇಹದಲ್ಲಿನ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಸಕ್ಕರೆ ಸೇರಿಸಿದ ಆಹಾರ ಪದಾರ್ಥಗಳ ಬದಲಿಗೆ ಸಿಹಿ ಹಣ್ಣುಗಳನ್ನು ಸೇವಿಸಿ.


3. ಫೈಬರ್ ನಿಂದ ಸಮೃದ್ಧವಾಗಿರುವ ಆಹಾರ ಸೇವಿಸಿ
ಆಹಾರದಲ್ಲಿ ಸ್ಯಾಚುರೇಟೆಡ್ ಕೊಬ್ಬನ್ನು ಕಡಿಮೆ ಮಾಡಿ ಮತ್ತು ಫೈಬರ್ ಸಮೃದ್ಧವಾಗಿರುವ ಆಹಾರ ಸೇವನೆಯನ್ನು ಹೆಚ್ಚಿಸಿ, ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಾಕಷ್ಟು ರೀತಿಯಲ್ಲಿ ಸಹಾಯ ಮಾಡುತ್ತದೆ. ನಿಮ್ಮ ತೂಕವು ಪದೇ ಪದೇ ಹೆಚ್ಚಾಗುತ್ತಿದ್ದರೆ ಮತ್ತು ಕಡಿಮೆಯಾಗುತ್ತಿದ್ದರೆ, ಅದು ಹೃದಯ ರಕ್ತನಾಳದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.


4. ಆಹಾರದಲ್ಲಿ ಈ ವಸ್ತುಗಳನ್ನು ಶಾಮೀಲುಗೊಳಿಸಿ
ಓಟ್ಸ್, ಬಾರ್ಲಿ, ಸೇಬು, ಬೀನ್ಸ್, ಅಗಸೆ ಬೀಜಗಳು ಮತ್ತು ಚಿಯಾ ಬೀಜಗಳನ್ನು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಿ. ಸಾಕಷ್ಟು ಪ್ರಮಾಣದ ಕರಗುವ ಫೈಬರ್ ಅನ್ನು ಸೇವಿಸಿ, ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.


5. ಆರೋಗ್ಯಕರ ಕೊಬ್ಬು ಸೇವಿಸಿ
ಆಹಾರದಲ್ಲಿ ಸ್ಯಾಚುರೇಟೆಡ್ ಕೊಬ್ಬನ್ನು ತೆಗೆದುಕೊಳ್ಳಬೇಡಿ, ಆದರೆ ನಿಮ್ಮ ದೈನಂದಿನ ಆಹಾರದಲ್ಲಿ ಇತರ ಆರೋಗ್ಯಕರ ಕೊಬ್ಬನ್ನು ಶಾಮೀಲುಗೊಳಿಸಿ. ಆಹಾರದಲ್ಲಿ ನಟ್ಸ್, ಆವಕಾಡೊಗಳು ಮತ್ತು ಡ್ರೈ ಫ್ರೂಟ್ಸ್ ಗಳನ್ನು ಶಾಮೀಲುಗೊಳಿಸಿ.


ಇದನ್ನೂ ಓದಿ-


6. ತರಕಾರಿ ತಿನ್ನದೇ ಇರುವ ಅಭ್ಯಾಸ ಕೆಟ್ಟದ್ದು
ಆಹಾರದಲ್ಲಿ ಸಾಕಷ್ಟು ತರಕಾರಿಗಳನ್ನು ಹೊಂದಿರದೆ ಇರುವುದು ಆರೋಗ್ಯಕ್ಕೆ ಹಾನಿಕಾರಕ. ನಿಮ್ಮ ಆಹಾರದಲ್ಲಿ ಬ್ರೊಕೊಲಿ ಮತ್ತು ಹೂಕೋಸುಗಳಂತಹ ಕ್ರೂಸಿಫೆರಸ್ ತರಕಾರಿಗಳನ್ನು ಸೇರಿಸಿ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಇದನ್ನೂ ಓದಿ-

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹ್ತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹ್ತಿಯನ್ನು ಪುಷ್ಠಿಕರಿಸುವುದಿಲ್ಲ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.