ತೂಕ ಹೆಚ್ಚಳ, ಮಧುಮೇಹದಂತಹ ಹಲವು ಲೈಫ್ ಸ್ಟೈಲ್ ಕಾಯಿಲೆಗಳಿಗೆ ಒಂದು ವರದಾನ ಈ ಎಲೆ!

Betel Benefits:  ವೀಳ್ಯದೆಲೆಯಲ್ಲಿ ಹಲವು ರೀತಿಯ ಪೋಷಕಾಂಶಗಳಿವೆ. ಇದರ ಸೇವನೆಯಿಂದ ಅಲ್ಸರ್ ಮತ್ತು ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ.  

Written by - Nitin Tabib | Last Updated : Mar 26, 2023, 10:50 PM IST
  • ದೇಹದಲ್ಲಿ ಕೊಬ್ಬು ಹೆಚ್ಚಾದಾಗ, ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ.
  • ಇಂದಿನ ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಲ್ಲಿ ತೂಕ ಹೆಚ್ಚಾಗುವ ಸಮಸ್ಯೆ ಕಂಡು ಬರುತ್ತಿದೆ.
  • ವೀಳ್ಯದೆಲೆಯು ತೂಕವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ತೂಕ ಹೆಚ್ಚಳ, ಮಧುಮೇಹದಂತಹ ಹಲವು ಲೈಫ್ ಸ್ಟೈಲ್ ಕಾಯಿಲೆಗಳಿಗೆ ಒಂದು ವರದಾನ ಈ ಎಲೆ! title=
ಹಲವು ಲೈಫ್ ಸ್ಟೈಲ್ ಕಾಯಿಲೆಗಳಿಗೆ ವರದಾನ ಈ ಎಲೆ!

Betel Leaves Benefits: ಭಾರತದಲ್ಲಿ ಸಾಮಾನ್ಯವಾಗಿ ಎಲ್ಲರಿಗೂ ವೀಳ್ಯದೆಲೆಯ ಬಗ್ಗೆ ತಿಳಿದೇ ಇದೆ. ಇದರ ರುಚಿ ಕೆಲವರಿಗೆ ತುಂಬಾ ಇಷ್ಟವಾಗುತ್ತದೆ. ಹಿಂದೂ ಧರ್ಮದಲ್ಲಿ, ವೀಳ್ಯದೆಲೆಗಳನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಪೂಜೆ ಮತ್ತು ಇತರ ಧಾರ್ಮಿಕ ಆಚರಣೆಗಳಲ್ಲಿ ಅದನ್ನು ಬಳಸಲಾಗುತ್ತದೆ. ಆಯುರ್ವೇದದಲ್ಲಿ ವೀಳ್ಯದೆಲೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗಿದೆ. ಇದರ ಸೇವನೆಯಿಂದ ಅಲ್ಸರ್, ಮಧುಮೇಹ ಸೇರಿದಂತೆ ಹಲವು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ. ವೀಳ್ಯದೆಲೆಯು ಅಯೋಡಿನ್, ಪೊಟ್ಯಾಸಿಯಮ್, ವಿಟಮಿನ್ ಎ, ವಿಟಮಿನ್ ಬಿ 1, ವಿಟಮಿನ್ ಬಿ 2 ಮತ್ತು ನಿಕೋಟಿನಿಕ್ ಆಮ್ಲದಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.

ವೀಳ್ಯದೆಲೆಯ ಪ್ರಯೋಜನಗಳು
1. ಒಬ್ಬ ವ್ಯಕ್ತಿಗೆ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ, ವೀಳ್ಯದೆಲೆ ಅವರಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಇದರ ಸೇವನೆಯು ಚಯಾಪಚಯ ಕ್ರಿಯೆಯ ದರ ಸುಧಾರಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರೊಂದಿಗೆ, ಜೀರ್ಣಕ್ರಿಯೆ, ಅಲ್ಸರ್ ಮತ್ತು ಮಲಬದ್ಧತೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ದೂರಾಗುತ್ತವೆ. ಈ ಕಾರಣದಿಂದಾಗಿ, ನಮ್ಮ ಜೀರ್ಣಕ್ರಿಯೆಯು ಉತ್ತಮವಾಗಿರುತ್ತದೆ ಮತ್ತು ಹೊಟ್ಟೆಯ ಸಮಸ್ಯೆಯು ಪರಿಹರಿಸುತ್ತದೆ.

2. ದೇಹದಲ್ಲಿ ಕೊಬ್ಬು ಹೆಚ್ಚಾದಾಗ, ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಇಂದಿನ ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಲ್ಲಿ ತೂಕ ಹೆಚ್ಚಾಗುವ ಸಮಸ್ಯೆ ಕಂಡು ಬರುತ್ತಿದೆ. ವೀಳ್ಯದೆಲೆಯು ತೂಕವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ-Diabetes Symptoms: ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ ತಪ್ಪಿದರೆ ಈ ಲಕ್ಷಣಗಳು ಕಾಣಿಸುತ್ತವೆ!

3. ವೀಳ್ಯದೆಲೆಯು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತದೆ. ದೇಹದ ಗಾಯಗಳ ಮೇಲೆ ವೀಳ್ಯದೆಲೆಯನ್ನು ಹಚ್ಚುವುದರಿಂದ ಗಾಯಗಳು ಬೇಗ ಒಣಗುತ್ತವೆ. ಇದರೊಂದಿಗೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ-ಹಲವು ಆರೋಗ್ಯ ಸಮಸ್ಯೆಗಳ ಪರಿಹಾರ ಪಟಕದಲ್ಲಡಗಿದೆ, ಟ್ರೈ ಮಾಡಿ ನೋಡಿ!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News