Hanuman Chalisa: ಈ ರೀತಿ ಹನುಮಾನ್ ಚಾಲೀಸಾ ಪಠಿಸಿದ್ರೆ ನಿಮ್ಮ ಎಲ್ಲಾ ಸಮಸ್ಯೆಗೂ ಪರಿಹಾರ ಸಿಗುತ್ತೆ!
Hanuman Chalisa: ಮಂಗಳವಾರ ಅಥವಾ ಶನಿವಾರದಿಂದ ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸಿ. 40 ದಿನಗಳ ಕಾಲ ನಿರಂತರವಾಗಿ ಪಠಿಸಬೇಕು. ಇದಲ್ಲದೆ ಪ್ರತಿ ಶನಿವಾರ ಮತ್ತು ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಬೇಕು.
ನವದೆಹಲಿ: ಧರ್ಮಗ್ರಂಥಗಳಲ್ಲಿ ಪ್ರತಿದಿನವನ್ನೂ ಒಂದಲ್ಲ ಒಂದು ದೇವರಿಗೆ ಮೀಸಲಿಡಲಾಗಿದೆ. ಮಂಗಳವಾರ ಹನುಮಂತನ ಪೂಜೆಯ ದಿನ. ವಾಯುಪುತ್ರನನ್ನು ಮಂಗಳವಾರದಂದು ಪೂರ್ಣ ಭಕ್ತಿಯಿಂದ ಪೂಜಿಸಿದರೆ ವ್ಯಕ್ತಿಯ ಎಲ್ಲಾ ದುಃಖಗಳು ಮತ್ತು ತೊಂದರೆಗಳು ಶೀಘ್ರದಲ್ಲೇ ದೂರವಾಗುತ್ತವೆ. ಮಂಗಳವಾರದಂದು ಹನುಮಾನ್ ಚಾಲೀಸಾ ಪಠಣದ ವಿಶೇಷ ಮಹತ್ವವನ್ನೂ ಹೇಳಲಾಗಿದೆ. ಹನುಮಾನ್ ಚಾಲೀಸಾವನ್ನು ಕ್ರಮಬದ್ಧವಾಗಿ ಪಠಿಸಿದರೆ, ವ್ಯಕ್ತಿಯ ಪ್ರತಿಯೊಂದು ಆಸೆಯೂ ಈಡೇರುತ್ತದೆ ಮತ್ತು ಶನಿದೇವನ ಆಶೀರ್ವಾದವೂ ಸಿಗುತ್ತದೆ ಎಂದು ಹೇಳಲಾಗುತ್ತದೆ.
ಹನುಮಾನ್ ಚಾಲೀಸಾ ಪಠಿಸುವ ವಿಧಾನ
- ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹನುಮಾನ್ ಚಾಲೀಸಾವನ್ನು ಪಠಿಸುವ ಮೊದಲು ಸ್ನಾನ ಮಾಡಬೇಕು. ನಂತರ ಶುಭ್ರವಾದ ಬಟ್ಟೆಗಳನ್ನು ಧರಿಸಬೇಕು. ಹನುಮಾನ್ ಚಾಲೀಸಾ ಪಠಿಸುವ ವೇಳೆ ಕೇವಲ ಒಂದು ಬಟ್ಟೆ ಧರಿಸಿಬೇಕು.
- ಮರದ ಪಠ್ಯದ ಮೇಲೆ ಕೆಂಪು ಬಟ್ಟೆಯನ್ನು ಹಾಸಿ ಅದರ ಮೇಲೆ ಹನುಮಾನ್ ವಿಗ್ರಹ ಅಥವಾ ಚಿತ್ರವನ್ನು ಸ್ಥಾಪಿಸಿ. ಕುಶದ ಆಸನದ ಮೇಲೆ ಕುಳಿತು ಚಾಲೀಸಾವನ್ನು ಪಠಿಸಿ ಅಥವಾ ಪೂಜಿಸಬೇಕು.
- ಮಂಗಳವಾರ ಅಥವಾ ಶನಿವಾರದಿಂದ ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸಿ. 40 ದಿನಗಳ ಕಾಲ ನಿರಂತರವಾಗಿ ಪಠಿಸಬೇಕು. ಇದಲ್ಲದೆ ಪ್ರತಿ ಶನಿವಾರ ಮತ್ತು ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಬೇಕು.
- ಹನುಮಾನ್ ಚಾಲೀಸಾವನ್ನು ಪಠಿಸುವ ಸಮಯದಲ್ಲಿ ವ್ಯಕ್ತಿಯು ತಾಮಸಿಕ ಆಹಾರ ಮತ್ತು ಮದ್ಯಪಾನ ತ್ಯಜಿಸಬೇಕು.
- ಹನುಮಾನ್ ಚಾಲೀಸಾವನ್ನು ಪಠಿಸಿದ ನಂತರ ಹನುಮಂತನ ವಿಗ್ರಹದ ಮೇಲೆ ಮಲ್ಲಿಗೆ ಎಣ್ಣೆ ಮತ್ತು ಸಿಂಧೂರ ಇತ್ಯಾದಿಗಳನ್ನು ಅರ್ಪಿಸಬೇಕು.
- ಹನುಮಂತನ ಆಶೀರ್ವಾದ ಪಡೆಯಲು ಭಗವಾನ್ ರಾಮನ ಹೆಸರನ್ನು ಸ್ಮರಿಸಬೇಕು. ಹನುಮಂತನನ್ನು ನೆನಪಿಸಿಕೊಂಡ ನಂತರವೇ ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸಬೇಕು.
- ಹನುಮಂತನಿಗೆ ಪೂಜೆ ಸಲ್ಲಿಸುವ ವೇಳೆ ತುಳಸಿ ಎಲೆಗಳನ್ನು ಬಳಸುವುದನ್ನು ಖಚಿತಪಡಿಸಿಕೊಳ್ಳಿ.
ಇದನ್ನೂ ಓದಿ: Astro Tips: ದೀಪಗಳನ್ನು ಬೆಳಗಿಸುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!
ಹನುಮಾನ್ ಚಾಲೀಸಾ ಪಠ್ಯ
ದೋಹಾ:
ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ |
ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ||
ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ |
ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ||
ಧ್ಯಾನಂ:
ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಂ |
ರಾಮಾಯಣ ಮಹಾಮಾಲಾ ರತ್ನಂ ವಂದೇ ನಿಲಾತ್ಮಜಂ ||
ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಂ |
ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಂ ||
ಚೌಪಾಈ:
ಜಯ ಹನುಮಾನ ಜ್ಞಾನ ಗುಣ ಸಾಗರ |
ಜಯ ಕಪೀಶ ತಿಹು ಲೋಕ ಉಜಾಗರ ||1||
ರಾಮದೂತ ಅತುಲಿತ ಬಲಧಾಮಾ |
ಅಂಜನಿ ಪುತ್ರ ಪವನಸುತ ನಾಮಾ ||2||
ಮಹಾವೀರ ವಿಕ್ರಮ ಬಜರಂಗೀ |
ಕುಮತಿ ನಿವಾರ ಸುಮತಿ ಕೇ ಸಂಗೀ ||3||
ಕಂಚನ ವರಣ ವಿರಾಜ ಸುವೇಶಾ |
ಕಾನನ ಕುಂಡಲ ಕುಂಚಿತ ಕೇಶಾ ||4||
ಹಾಥವಜ್ರ ಔ ಧ್ವಜಾ ವಿರಾಜೈ |
ಕಾಂಥೇ ಮೂಂಜ ಜನೇವೂ ಸಾಜೈ ||5||
ಶಂಕರ ಸುವನ ಕೇಸರೀ ನಂದನ |
ತೇಜ ಪ್ರತಾಪ ಮಹಾಜಗ ವಂದನ ||6||
ವಿದ್ಯಾವಾನ ಗುಣೀ ಅತಿ ಚಾತುರ |
ರಾಮ ಕಾಜ ಕರಿವೇ ಕೋ ಆತುರ ||7||
ಪ್ರಭು ಚರಿತ್ರ ಸುನಿವೇ ಕೋ ರಸಿಯಾ |
ರಾಮಲಖನ ಸೀತಾ ಮನ ಬಸಿಯಾ ||8||
ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ |
ವಿಕಟ ರೂಪಧರಿ ಲಂಕ ಜಲಾವಾ ||9||
ಭೀಮ ರೂಪಧರಿ ಅಸುರ ಸಂಹಾರೇ |
ರಾಮಚಂದ್ರ ಕೇ ಕಾಜ ಸಂವಾರೇ ||10||
ಲಾಯ ಸಂಜೀವನ ಲಖನ ಜಿಯಾಯೇ |
ಶ್ರೀ ರಘುವೀರ ಹರಷಿ ಉರಲಾಯೇ ||11||
ರಘುಪತಿ ಕೀನ್ಹೀ ಬಹುತ ಬಡಾಯೀ |
ತುಮ ಮಮ ಪ್ರಿಯ ಭರತ ಸಮ ಭಾಯೀ ||12||
ಸಹಸ್ರ ವದನ ತುಮ್ಹರೋ ಯಶಗಾವೈ |
ಅಸ ಕಹಿ ಶ್ರೀಪತಿ ಕಂಠ ಲಗಾವೈ ||13||
ಸನಕಾದಿಕ ಬ್ರಹ್ಮಾದಿ ಮುನೀಶಾ |
ನಾರದ ಶಾರದ ಸಹಿತ ಅಹೀಶಾ ||14||
ಯಮ ಕುಬೇರ ದಿಗಪಾಲ ಜಹಾಂ ತೇ |
ಕವಿ ಕೋವಿದ ಕಹಿ ಸಕೇ ಕಹಾಂ ತೇ ||15||
ತುಮ ಉಪಕಾರ ಸುಗ್ರೀವಹಿ ಕೀನ್ಹಾ |
ರಾಮ ಮಿಲಾಯ ರಾಜಪದ ದೀನ್ಹಾ ||16||
ತುಮ್ಹರೋ ಮಂತ್ರ ವಿಭೀಷಣ ಮಾನಾ |
ಲಂಕೇಶ್ವರ ಭಯೇ ಸಬ ಜಗ ಜಾನಾ ||17||
ಯುಗ ಸಹಸ್ರ ಯೋಜನ ಪರ ಭಾನೂ |
ಲೀಲ್ಯೋ ತಾಹಿ ಮಧುರ ಫಲ ಜಾನೂ ||18||
ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ |
ಜಲಧಿ ಲಾಂಘಿ ಗಯೇ ಅಚರಜ ನಾಹೀ ||19||
ದುರ್ಗಮ ಕಾಜ ಜಗತ ಕೇ ಜೇತೇ |
ಸುಗಮ ಅನುಗ್ರಹ ತುಮ್ಹರೇ ತೇತೇ ||20||
ರಾಮ ದುಆರೇ ತುಮ ರಖವಾರೇ |
ಹೋತ ನ ಆಜ್ಞಾ ಬಿನು ಪೈಸಾರೇ ||21||
ಸಬ ಸುಖ ಲಹೈ ತುಮ್ಹಾರೀ ಶರಣಾ |
ತುಮ ರಕ್ಷಕ ಕಾಹೂ ಕೋ ಡರ ನಾ ||22||
ಆಪನ ತೇಜ ಸಮ್ಹಾರೋ ಆಪೈ |
ತೀನೋಂ ಲೋಕ ಹಾಂಕ ತೇ ಕಾಂಪೈ ||23||
ಭೂತ ಪಿಶಾಚ ನಿಕಟ ನಹಿ ಆವೈ |
ಮಹವೀರ ಜಬ ನಾಮ ಸುನಾವೈ ||24||
ನಾಸೈ ರೋಗ ಹರೈ ಸಬ ಪೀರಾ |
ಜಪತ ನಿರಂತರ ಹನುಮತ ವೀರಾ ||25||
ಸಂಕಟ ಸೇ ಹನುಮಾನ ಛುಡಾವೈ |
ಮನ ಕ್ರಮ ವಚನ ಧ್ಯಾನ ಜೋ ಲಾವೈ ||26||
ಸಬ ಪರ ರಾಮ ತಪಸ್ವೀ ರಾಜಾ |
ತಿನಕೇ ಕಾಜ ಸಕಲ ತುಮ ಸಾಜಾ ||27||
ಔರ ಮನೋರಧ ಜೋ ಕೋಯಿ ಲಾವೈ |
ತಾಸು ಅಮಿತ ಜೀವನ ಫಲ ಪಾವೈ ||28||
ಚಾರೋ ಯುಗ ಪ್ರತಾಪ ತುಮ್ಹಾರಾ |
ಹೈ ಪ್ರಸಿದ್ಧ ಜಗತ ಉಜಿಯಾರಾ ||29||
ಸಾಧು ಸಂತ ಕೇ ತುಮ ರಖವಾರೇ |
ಅಸುರ ನಿಕಂದನ ರಾಮ ದುಲಾರೇ ||30||
ಅಷ್ಠಸಿದ್ಧಿ ನವ ನಿಧಿ ಕೇ ದಾತಾ |
ಅಸ ವರ ದೀನ್ಹ ಜಾನಕೀ ಮಾತಾ ||31||
ರಾಮ ರಸಾಯನ ತುಮ್ಹಾರೇ ಪಾಸಾ |
ಸದಾ ರಹೋ ರಘುಪತಿ ಕೇ ದಾಸಾ ||32||
ತುಮ್ಹರೇ ಭಜನ ರಾಮಕೋ ಪಾವೈ |
ಜನ್ಮ ಜನ್ಮ ಕೇ ದುಖ ಬಿಸರಾವೈ ||33||
ಅಂತ ಕಾಲ ರಘುಪತಿ ಪುರಜಾಯೀ |
ಜಹಾಂ ಜನ್ಮ ಹರಿಭಕ್ತ ಕಹಾಯೀ ||34||
ಔರ ದೇವತಾ ಚಿತ್ತ ನ ಧರಯೀ |
ಹನುಮತ ಸೇಯಿ ಸರ್ವ ಸುಖ ಕರಯೀ ||35||
ಸಂಕಟ ಕ(ಹ)ಟೈ ಮಿಟೈ ಸಬ ಪೀರಾ |
ಜೋ ಸುಮಿರೈ ಹನುಮತ ಬಲ ವೀರಾ ||36||
ಜೈ ಜೈ ಜೈ ಹನುಮಾನ ಗೋಸಾಯೀ |
ಕೃಪಾ ಕರಹು ಗುರುದೇವ ಕೀ ನಾಯೀ ||37||
ಜೋ ಶತ ವಾರ ಪಾಠ ಕರ ಕೋಯೀ |
ಛೂಟಹಿ ಬಂದಿ ಮಹಾ ಸುಖ ಹೋಯೀ ||38||
ಜೋ ಯಹ ಪಡೈ ಹನುಮಾನ ಚಾಲೀಸಾ |
ಹೋಯ ಸಿದ್ಧಿ ಸಾಖೀ ಗೌರೀಶಾ ||39||
ತುಲಸೀದಾಸ ಸದಾ ಹರಿ ಚೇರಾ |
ಕೀಜೈ ನಾಥ ಹೃದಯ ಮಹ ಡೇರಾ ||40||
ದೋಹಾ:
ಪವನತನಯ ಸಂಕಟ ಹರಣ
ಮಂಗಳ ಮೂರತಿ ರೂಪ ||
ರಾಮ ಲಖನ ಸೀತಾ ಸಹಿತ
ಹೃದಯ ಬಸಹು ಸುರ ಭೂಪ ||
ಇದನ್ನೂ ಓದಿ: Astro Tips: ದೀಪಗಳನ್ನು ಬೆಳಗಿಸುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.