)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂದಲನ್ನು ಆರೋಗ್ಯವಾಗಿಡುವುದು ಒಂದು ದೊಡ್ಡ ಟಾಸ್ಕ್ ಆಗಿ ಬಿಟ್ಟಿದೆ. ಅನೇಕರು ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರುವಿಕೆಯಿಂದ ಬಳಲುತ್ತಿದ್ದಾರೆ. ಇನ್ನು ಕೆಲವರ ಕೂದಲು ಎಷ್ಟು ಉದುರುತ್ತದೆಯೆಂದರೆ ಸಣ್ಣ ವಯಸ್ಸಿನಲ್ಲಿಯೇ ಬೋಳು ತಲೆ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೂದಲು ಯಾವ ಕಾರಣದಿಂದ ಹಾನಿಗೊಳಗಾದರೂ ಅದು ಡ್ರೈ ಆಗಲು ಶುರುವಾಗುತ್ತದೆ. ಪರಿಣಾಮ ಕೂದಲು ಉದುರುತ್ತದೆ. ಕೂದಲ ಬೆಳವಣಿಗೆ ನಿಲ್ಲುತ್ತದೆ. ಹೀಗಾಗುತ್ತಿದ್ದಾಗ ಕೆಮಿಕಲ್ ಬಳಸುವ ಬದಲು ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸಿದರೆ ಕೂದಲ ಸಮಸ್ಯೆ ಬಗೆಹರಿಯುತ್ತದೆ. ಮೊಸರು ಕೂಡಾ ಕೂದಲಿಗೆ ನೈಸರ್ಗಿಕವಾಗಿ ಬಳಸುವ ಒಂದು ಉತ್ಪನ್ನವಾಗಿದೆ.
ಕೂದಲಿಗೆ ಮೊಸರು :
ಮೊಸರು ಹೊಟ್ಟೆ ಮತ್ತು ಕರುಳಿಗೆ ಮಾತ್ರವಲ್ಲದೆ ಕೂದಲಿಗೆ ಕೂಡಾ ತುಂಬಾ ಪ್ರಯೋಜನಕಾರಿಯಾಗಿದೆ. ಕೂದಲಿಗೆ ಮೊಸರನ್ನು ಹಚ್ಚಿದರೆ, ಅದರಲ್ಲಿರುವ ವಿಶೇಷ ಪೋಷಕಾಂಶಗಳು ಕೂದಲನ್ನು ತಲುಪುತ್ತವೆ. ಇದು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಕೂದಲು ನೈಸರ್ಗಿಕವಾಗಿ ರೇಷ್ಮೆಯಂತಾಗುತ್ತದೆ :
ಮೊಸರಿನಲ್ಲಿರುವ ವಿಶೇಷ ಪೋಷಕಾಂಶಗಳು ಕೂದಲಿಗೆ ಅಗತ್ಯವಾದ ಪೋಷಣೆಯನ್ನು ಒದಗಿಸುತ್ತವೆ. ಇದು ಬೇರುಗಳಿಂದ ಶುಷ್ಕತೆಯನ್ನು ನಿವಾರಿಸಿ, ಪೋಷಣೆಯನ್ನು ನೀಡುತ್ತದೆ. ಕೂದಲನ್ನು ನೈಸರ್ಗಿಕವಾಗಿ ರೇಷ್ಮೆಯಂತೆ ಮೃದುವಾಗಿರುವಂತೆ ಮಾಡುತ್ತದೆ. ಮೊಸರಿನಲ್ಲಿರುವ ಆರೋಗ್ಯಕರ ಕೊಬ್ಬು ಕೂದಲಿನ ನುಣುಪನ್ನು ಕಾಯ್ದುಕೊಳ್ಳುತ್ತದೆ. ಇದರಿಂದಾಗಿ ಕೂದಲು ದೀರ್ಘಕಾಲದವರೆಗೆ ರೇಷ್ಮೆಯಂತೆ ಇರುತ್ತದೆ.
ಕೂದಲು ಉದುರುವಿಕೆಯನ್ನು ತಡೆಯುತ್ತದೆ :
ಹೆಚ್ಚಿನ ಸಂದರ್ಭಗಳಲ್ಲಿ, ಕೂದಲಿನಲ್ಲಿ ಪೋಷಕಾಂಶಗಳ ಕೊರತೆಯಿಂದ ಕೂದಲು ಉದುರುತ್ತದೆ. ಮೊಸರನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಕೂದಲಿಗೆ ಪೋಷಣೆ ದೊರೆಯುತ್ತದೆ. ಇದು ಪೋಷಕಾಂಶಗಳ ಕೊರತೆಯನ್ನು ನೀಗಿಸುತ್ತದೆ ಮತ್ತು ಕೂದಲು ಉದುರುವುದನ್ನು ತಡೆಯುತ್ತದೆ.
ಬಿಳಿ ಕೂದಲ ಸಮಸ್ಯೆಯನ್ನು ನಿವಾರಿಸುತ್ತದೆ.
ಒಂದು ಕಪ್ ಮೊಸರಿಗೆ ನಿಂಬೆ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ. ಈ ಮಿಶ್ರಣವನ್ನು ನಿಯಮಿತವಾಗಿ ಬಳಸಿದರೆ ಕ್ರಮೇಣ ಬಿಳಿ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ.
ಬಳಸುವ ಸರಿಯಾದ ವಿಧಾನ :
ಬೆಳಿಗ್ಗೆ ಕೂದಲು ತೊಳೆಯುವ 2 ಗಂಟೆಗಳ ಮೊದಲು ಮೊಸರನ್ನು ಕೂದಲಿಗೆ ಚೆನ್ನಾಗಿ ಹಚ್ಚಿ ನಂತರ ಶುದ್ಧ ನೀರಿನಿಂದ ತೊಳೆಯಿರಿ. ನಿಮ್ಮ ಕೂದಲನ್ನು ಸರಿಯಾಗಿ ತೊಳೆದ ನಂತರ, ಕೂದಲು ರೇಷ್ಮೆಯಂತಾಗುತ್ತದೆ.
(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೊದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.