ಯಾವ ಅಡ್ಡ ಪರಿಣಾಮವೂ ಇಲ್ಲದೆ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತವೆ ಈ ಮೂರು ವಸ್ತುಗಳು !

ಆಯುರ್ವೇದವು ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾಗಿದ್ದು, ಕೂದಲು  ಸಣ್ಣ ವಯಸ್ಸಿನಲ್ಲಿಯೇ ಬಿಳಿಯಾಗುವುದು ಸೇರಿದಂತೆ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ನೈಸರ್ಗಿಕ ಪರಿಹಾರಗಳನ್ನು ನೀಡುತ್ತದೆ. ಬಿಳಿ ಕೂದಲಿನ ಸಮಸ್ಯೆಯನ್ನು ನಿವಾರಿಸಲು   ಮೂರು ಆಯುರ್ವೇದ ಪರಿಹಾರಗಳು ಇಲ್ಲಿವೆ. 

Written by - Ranjitha R K | Last Updated : Jul 10, 2023, 12:32 PM IST
  • ಆಯುರ್ವೇದವು ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾಗಿದ್ದು, ಕೂದಲು ಸಣ್ಣ ವಯಸ್ಸಿನಲ್ಲಿಯೇ ಬಿಳಿಯಾಗುವುದು ಸೇರಿದಂತೆ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ನೈಸರ್ಗಿಕ ಪರಿಹಾರಗಳನ್ನು ನೀಡುತ್ತದೆ. ಬಿಳಿ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಮೂರು ಆಯುರ್ವೇದ ಪರಿಹಾರಗಳು ಇಲ್ಲಿವೆ.
ಯಾವ ಅಡ್ಡ ಪರಿಣಾಮವೂ ಇಲ್ಲದೆ  ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತವೆ ಈ ಮೂರು ವಸ್ತುಗಳು ! title=

ಬೆಂಗಳೂರು : ಚಿಕ್ಕ ವಯಸ್ಸಿನಲ್ಲಿಯೇ ಕೂದಲು ತನ್ನ ನೈಸರ್ಗಿಕ ಬಣ್ಣವನ್ನು ಕಳೆದುಕೊಳ್ಳುವ ಸ್ಥಿತಿ  ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಸಾಮಾನ್ಯವಾಗಿ, 40ರಿಂದ 50  ವಯಸ್ಸಿನ ಆಸುಪಾಸಿನಲ್ಲಿ  ಬಿಳಿ ಕೂದಲು ಬೆಳೆಯಲು ಆರಂಭವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವುದು ಬಹುತೇಕರು ಎದುರಿಸುವ ಸಮಸ್ಯೆ. ವಂಶವಾಹಿ, ಒತ್ತಡ, ಹಾರ್ಮೋನುಗಳ ಅಸಮತೋಲನ, ಪೌಷ್ಟಿಕಾಂಶದ ಕೊರತೆ, ಧೂಮಪಾನ ಮತ್ತು ಕೆಲವು ವೈದ್ಯಕೀಯ ಪರಿಸ್ಥಿತಿಗಳು ಸೇರಿದಂತೆ ವಿವಿಧ ಅಂಶಗಳಿಂದ ಕೂದಲು ಸಣ್ಣ ವಯಸ್ಸಿನಲ್ಲಿಯೇ ಬಿಳಿಯಾಗಬಹುದು. ಆದರೆ ಆಯುರ್ವೇದವು ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾಗಿದ್ದು, ಕೂದಲು  ಸಣ್ಣ ವಯಸ್ಸಿನಲ್ಲಿಯೇ ಬಿಳಿಯಾಗುವುದು ಸೇರಿದಂತೆ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ನೈಸರ್ಗಿಕ ಪರಿಹಾರಗಳನ್ನು ನೀಡುತ್ತದೆ. ಬಿಳಿ ಕೂದಲಿನ ಸಮಸ್ಯೆಯನ್ನು ನಿವಾರಿಸಲು   ಮೂರು ಆಯುರ್ವೇದ ಪರಿಹಾರಗಳು ಇಲ್ಲಿವೆ. ಅವುಗಳನ್ನು ಸುಲಭವಾಗಿ ಪ್ರಯತ್ನಿಸಬಹುದು. ಮಾತ್ರವಲ್ಲ ಯಾವುದೇ ಅಡ್ಡ ಪರಿಣಾಮವಿಲ್ಲದೆ ಬಯಸಿದ ಫಲಿತಾಂಶಗಳನ್ನು ಕೂಡಾ ಪಡೆಯಬಹುದು. 

ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ : 
ನೆಲ್ಲಿಕಾಯಿ ಎಣ್ಣೆಯಿಂದ ಮಸಾಜ್ ಮಾಡಿ :
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ನಿಮ್ಮ ಕೂದಲು ಕಿರುಚೀಲಗಳನ್ನು ಪೋಷಿಸಲು ಮತ್ತು ಕೂದಲಿನ ಬೆಳವಣಿಗೆಯನ್ನು ಹೆಚ್ಚು ಮಾಡಲು  ನೆಲ್ಲಿಕಾಯಿ ಎಣ್ಣೆಯಿಂದ  ನಿಯಮಿತವಾಗಿ ಕೂದಲಿಗೆ ಮಸಾಜ್ ಮಾಡಬೇಕು. ಮನೆಯಲ್ಲಿ ನೆಲ್ಲಿಕಾಯಿ ಎಣ್ಣೆಯನ್ನು ತಯಾರಿಸುವುದು ಕೂಡಾ ಬಹಳ ಸುಲಭ. ಇದಕ್ಕಾಗಿ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ನೆಲ್ಲಿಕಾಯಿ ಪುಡಿಯನ್ನು ಹಾಕಿ ಮಿಶ್ರಣ ಮಾಡಿ. ಈ ಮಿಶ್ರಣ ಕಪ್ಪು ಬಣ್ಣಕ್ಕೆ ತಿರುಗುವವರೆಗೆ  ಬಿಸಿ ಮಾಡಿ. ನಂತರ ಈ ಎಣ್ಣೆಯನ್ನು ತಣ್ಣಗಾಗಿಸಿ ಫಿಲ್ಟರ್ ಮಾಡಿ. ಈ ಎಣ್ಣೆಯನ್ನು ಕೂದಲಿಗೆ ಹಚ್ಚಿ 10-15 ನಿಮಿಷಗಳ ಕಾಲ ಮಸಾಜ್ ಮಾಡಿ. ನಂತರ ಸೌಮ್ಯವಾದ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ.

ಇದನ್ನೂ ಓದಿ : Lifestyle Tips: ಇಂದಿನಿಂದಲೇ ಈ ಪಾನೀಯಗಳ ಸೇವನೆ ಆರಂಭಿಸಿ ಮಧುಮೇಹ ನಿಯಂತ್ರಿಸಿ!

ಬೃಂಗರಾಜ್ ಹೇರ್ ಮಾಸ್ಕ್ :
ಬೃಂಗರಾಜ್ ಒಂದು ಆಯುರ್ವೇದ ಮೂಲಿಕೆಯಾಗಿದೆ. ಇದು ಕೂದಲು  ಸಣ್ಣ ವಯಸ್ಸಿನಲ್ಲಿಯೇ ಬಿಳಿಯಾಗುವುದನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಬೃಂಗರಾಜ್  ಪುಡಿಯನ್ನು ಮೊಸರಿನೊಂದಿಗೆ ಬೆರೆಸಿ ಹೇರ್ ಮಾಸ್ಕ್ ತಯಾರಿಸಿಕೊಳ್ಳಿ.  ಈ ಮಿಶ್ರಣವನ್ನು ಕೂದಲು ಮತ್ತು ನೆತ್ತಿಯ ಮೇಲೆ ಹಚ್ಚಿ. 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಸೌಮ್ಯವಾದ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಈ ಹೇರ್ ಮಾಸ್ಕ್ ನಿಮ್ಮ ಕೂದಲನ್ನು ಪೋಷಿಸಲು ಮತ್ತು ಅದರ ವಿನ್ಯಾಸವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕರಿಬೇವಿನ ಎಲೆಗಳು ಮತ್ತು ತೆಂಗಿನ ಎಣ್ಣೆ  :
ಕರಿಬೇವಿನ ಎಲೆಗಳು ವಿಟಮಿನ್, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಇದು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಕರಿಬೇವಿನ ಎಲೆಗಳನ್ನು ಸೇರಿಸಬೇಕು.  ಈಗ ಈ ಎಣ್ಣೆಯನ್ನು ತಣ್ಣಗಾಗಿಸಿ ಕೂದಲು ಮತ್ತು ನೆತ್ತಿಗೆ ಹಚ್ಚಿ ಮಸಾಜ್ ಮಾಡಿ. ಈ ಎಣ್ಣೆ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ಸಹಾಯ ಮಾಡುವುದಲ್ಲದೆ ಕೂದಲನ್ನು ಬಲಪಡಿಸುತ್ತದೆ ಮತ್ತು ಅದರ ಬೆಳವಣಿಗೆಯನ್ನು  ಹೆಚ್ಚಿಸುತ್ತದೆ. 

ಇದನ್ನೂ ಓದಿ : Shravana 2023 : ಶ್ರಾವಣ ಮಾಸ ಪ್ರಾರಂಭ, ಪೂಜಾ ಸಮಯ, ವಿಧಿ ವಿಧಾನಗಳು ಇಲ್ಲಿವೆ..!

ಆಯುರ್ವೇದ ಪರಿಹಾರಗಳು ಫಲಿತಾಂಶಗಳನ್ನು ನೀಡಲು ಸಮಯ ತೆಗೆದುಕೊಳ್ಳುತ್ತದೆ ಮತ್ತು ಅಪೇಕ್ಷಿತ ಫಲಿತಾಂಶಗಳನ್ನು ಪಡೆಯಲು ನಿಯಮಿತವಾಗಿ ಅವುಗಳನ್ನು ಅನುಸರಿಸಬೇಕಾಗುತ್ತದೆ. ಹೆಚ್ಚುವರಿಯಾಗಿ, ಯಾವುದೇ ಹೊಸ ಪರಿಹಾರವನ್ನು ಪ್ರಯತ್ನಿಸುವ ಮೊದಲು, ಇದು ಸುರಕ್ಷಿತ ಮತ್ತು ನಿಮಗೆ ಸೂಕ್ತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಆಯುರ್ವೇದ ವೈದ್ಯರನ್ನು ಸಂಪರ್ಕಿಸಿ.

 

 ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Media ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News