ಮೊಸರು ತಿನ್ನುವುದರಿಂದ ಆರೋಗ್ಯಕ್ಕಿದೆ ಹಲವು ಅದ್ಭುತ ಪ್ರಯೋಜನ

Yashaswini V
Oct 16,2023

ಪೋಷಕಾಂಶಗಳ ಗಣಿ

ಮೊಸರಿನಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ರೈಬೋಫ್ಲಾವಿನ್, ವಿಟಮಿನ್ ಬಿ ಮುಂತಾದ ಪೋಷಕಾಂಶಗಳು ಕಂಡು ಬರುತ್ತವೆ. ಇದರ ಪ್ರಯೋಜನಗಳ ಬಗ್ಗೆ ನೋಡುವುದಾದರೆ...

ಜೀರ್ಣ ಶಕ್ತಿ

ಮೊಸರಿನ ನಿಯಮಿತ ಸೇವನೆಯಿಂದ ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಹೊಟ್ಟೆ ಉಬ್ಬರ

ಮೊಸರು ಮಜ್ಜಿಗೆ ಅಥವಾ ಲಸ್ಸಿಯನ್ನು ತಯಾರಿಸಿ ಕುಡಿಯುವುದರಿಂದ ಹೊಟ್ಟೆಯ ಶಾಖವನ್ನು ಶಾಂತಗೊಳಿಸುತ್ತದೆ.

ಕರುಳಿನ ಕಾಯಿಲೆ

ಆಹಾರ ತಜ್ಞರ ಪ್ರಕಾರ, ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದ ಕರುಳಿನ ಕಾಯಿಲೆಗಳು ಮತ್ತು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ದೂರ ಉಳಿಯಬಹುದು.

ಹೃದ್ರೋಗ

ಮೊಸರು ಹೃದ್ರೋಗಗಳು, ಅಧಿಕ ರಕ್ತದೊತ್ತಡ ಮತ್ತು ಮೂತ್ರಪಿಂಡದ ಕಾಯಿಲೆಗಳನ್ನು ತಡೆಯುವ ಅದ್ಭುತ ಸಾಮರ್ಥ್ಯವನ್ನು ಹೊಂದಿದ್ದು, ಇದನ್ನು ಹಿತ ಮಿತವಾಗಿ ಮೊಸರು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

ಮೂಳೆ ಆರೋಗ್ಯ

ಮೊಸರಿನಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಮೂಳೆಗಳ ಬೆಳವಣಿಗೆಗೆ ಸಹಕಾರಿ.

ಕೀಲು ನೋವು

ಮೊಸರಿನಲ್ಲಿ ಇಂಗು ಬೆರೆಸಿ ಸೇವಿಸುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ.

ಸೌಂದರ್ಯವರ್ಧಕ

ಮೊಸರನ್ನು ಹಚ್ಚಿ ಸ್ನಾನ ಮಾಡುವುದರಿಂದ ಸುಂದರ, ಕೋಮಲ ತ್ವಚೆಯನ್ನು ನಿಮ್ಮದಾಗಿಸಬಹುದು.

ಕೂದಲಿಗೆ

ಮೊಸರು ಅಥವಾ ಮಜ್ಜಿಗೆಯನ್ನು ಕೂದಲಿಗೆ ಹಚ್ಚಿ ಸ್ವಲ್ವ ಸಮಯದ ಬಳಿಕ ಹೇರ್ ವಾಶ್ ಮಾಡುವುದೃಂದ ಸುಂದರ, ಆಕರ್ಷಕ ಕೂದಲನ್ನು ಪಡೆಯಬಹುದು. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story