ಆಮ್ಲಾ/ನೆಲ್ಲಿಕಾಯಿ ಜ್ಯೂಸ್ ಸೇವನೆಯು ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
ನೆಲ್ಲಿಕಾಯಿ ದೇಹದಲ್ಲಿ ಹಾರ್ಮೋನ್‌ಗಳನ್ನು ಬಲಪಡಿಸುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕೂಡ ನಿಯಂತ್ರಿಸುತ್ತದೆ.
ಆಮ್ಲಾ ಬಳಕೆಯಿಂದ ಮೂಳೆಗಳು ಬಲಗೊಳ್ಳುತ್ತವೆ. ಅಷ್ಟೇ ಅಲ್ಲದೆ, ಕೀಲು ನೋವಿಂದಲೂ ಪರಿಹಾರ ನೀಡುತ್ತದೆ.
ನೆಲ್ಲಿಕಾಯಿ ಜ್ಯೂಸ್ ಸೇವನೆಯಿಂದ ಒತ್ತಡದಿಂದ ಮುಕ್ತಿ ದೊರೆಯುತ್ತದೆ.
ಆಮ್ಲಾ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಉತ್ತಮ ನಿದ್ರೆ ಪಡೆಯಬಹುದು ಎಂದು ಹೇಳಲಾಗುತ್ತದೆ.
ಮೂಗಿನಿಂದ ರಕ್ತಸ್ರಾವ ಸಮಸ್ಯೆಯನ್ನು ಎದುರಿಸುತ್ತಿರುವವರಿಗೂ ಕೂಡ ನೆಲ್ಲಿಕಾಯಿ ಜ್ಯೂಸ್ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ನೆಲ್ಲಿಕಾಯಿ ಮತ್ತು ನಿಂಬೆ ರಸವನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಇದನ್ನು ಕೂದಲಿಗೆ ಹಚ್ಚಿ ಅರ್ಧಗಂಟೆ ಬಳಿಕ ಹೇರ್ ವಾಶ್ ಮಾಡುವುದರಿಂದ ಕೂದಲು ಬಲಗೊಳ್ಳುತ್ತದೆ.
ಆಮ್ಲಾ ದೇಹದ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಆಗಿದೆ. ನಿಯಮಿತವಾಗಿ ನೆಲ್ಲಿಕಾಯಿ ಸೇವನೆ, ಆಮ್ಲಾ ಜ್ಯೂಸ್ ಸೇವಿಸುವುದರಿಂದ ಆರೋಗ್ಯಕರ ತೂಕ ಇಳಿಕೆ ಸಾಧ್ಯವಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.