ಮೀನು ತಿನ್ನುವುದರಿಂದ ಇಷ್ಟೆಲ್ಲಾ ಪ್ರಯೋಜನೆಗಳಿವೆಯಾ!

Zee Kannada News Desk
Jan 20,2024

ಹೃದಯದ ಆರೋಗ್ಯ

ಮೀನಿನಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ಉರಿಯೂತವನ್ನು ಕಡಿಮೆ ಮಾಡುತ್ತದೆ, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಕಣ್ಣಿನ ಆರೋಗ್ಯ

ಮೀನುಗಳನ್ನು ತಿನ್ನುವುದು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ಅಪಾಯವನ್ನು ಕಡಿಮೆ ಮಾಡಬಹುದು. ವಯಸ್ಸಾದವರಲ್ಲಿ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಲು ಇದು ಸಹಾಯ ಮಾಡುತ್ತದೆ.

ಚಿತ್ತ

ಮೀನಿನ ನಿಯಮಿತ ಸೇವನೆಯು ಮನಸ್ಥಿತಿ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹ ಒಳ್ಳೆಯದು.

ದೇಹದ ತೂಕ

ಮೀನಿನಲ್ಲಿ ಕೊಬ್ಬಿನಾಮ್ಲಗಳ ಜೊತೆಗೆ ಹೆಚ್ಚಿನ ಪ್ರಮಾಣದ ಪ್ರೋಟೀನ್ ಇರುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಮೂಳೆಗಳು

ಮೂಳೆಗಳ ಆರೋಗ್ಯವನ್ನು ಸುಧಾರಿಸಲು ಮೀನು ತಿನ್ನುವುದು ಬಹುಳ ಒಳ್ಳೆಯದು. ಇದು ಮೂಳೆಗಳ ಆರೋಗ್ಯಕ್ಕೆ ಸಹಾಯ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯುತ್ತದೆ.

ಗರ್ಭಾವಸ್ಥೆ

ಮೀನು DHA ಅನ್ನು ಹೊಂದಿರುತ್ತದೆ. ಇದು ಗರ್ಭಾವಸ್ಥೆಯಲ್ಲಿ ಮಕ್ಕಳ ಮೆದುಳು ಮತ್ತು ಕಣ್ಣಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಹಾಲುಣಿಸುವ ತಾಯಂದಿರಿಗೂ ಇದು ಒಳ್ಳೆಯದು.

ಮಧುಮೇಹ

ಮೀನುಗಳನ್ನು ತಿನ್ನುವುದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

VIEW ALL

Read Next Story