ಸುಂದರ ತ್ವಚೆಗಾಗಿ ಅತ್ಯುತ್ತಮ ಆಯುರ್ವೇದ ಫೇಸ್ ಪ್ಯಾಕ್‌ಗಳು
ಆಯುರ್ವೇದ ದೇಹದ ಆರೋಗ್ಯಕ್ಕೆ ಮಾತ್ರವಲ್ಲ ತ್ವಚೆಯ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.
ಆಯುರ್ವೇದ ಫೇಸ್ ಪ್ಯಾಕ್‌ಗಳ ಸಹಾಯದಿಂದ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಪರಿಹರಿಸಬಹುದು. ಚರ್ಮವನ್ನು ಹಾನಿಯಿಂದ ರಕ್ಷಿಸಿ, ಮೊಡವೆ, ಸುಕ್ಕುಗಳಿಂದ ತ್ವಚೆಯನ್ನು ಕಾಪಾಡಿಕೊಳ್ಳಲು ಈ ಆಯುರ್ವೇದ ಫೇಸ್ ಪ್ಯಾಕ್‌ಗಳು ತುಂಬಾ ಪ್ರಯೋಜನಕಾರಿಯಾಗಿದೆ. ಅವುಗಳೆಂದರೆ...
ಹಾಲಿನೊಂದಿಗೆ ಕೇಸರಿಯನ್ನು ಬೆರೆಸಿ ಮುಖಕ್ಕೆ ಹಚ್ಚುವುದರಿಂದ ಕಲೆರಹಿತ ತ್ವಚೆಯನ್ನು ನಿಮ್ಮದಾಗಿಸಬಹುದು.
ಗ್ರೀನ್ ಟೀಯಲ್ಲಿ ಆ್ಯಂಟಿಬ್ಯಾಕ್ಟೀರಿಯಲ್ ಗುಣಗಳು ಸಮೃದ್ಧವಾಗಿದ್ದು ಇದನ್ನು ಫೇಸ್ ಪ್ಯಾಕ್ ಆಗಿ ಬಳಸುವುದರಿಂದ ಇದು ಮೊಡವೆಯಂತಹ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
ಕಡಲೆಹಿಟ್ಟಿನೊಂದಿಗೆ ಅರಿಶಿನವನ್ನು ಹಾಲಿನೊಂದಿಗೆ ಬೆರೆಸಿ ಮುಖಕ್ಕೆ ಹಚ್ಚುವುದರಿಂದ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಅಲೋವೆರಾ ತ್ವಚೆಯ ಹಲವು ಸಮಸ್ಯೆಗಳನ್ನು ನಿವಾರಿಸಬಲ್ಲ ಅತ್ಯುತ್ತಮ ಔಷಧ. ಅಲೋವೆರಾ ಜೆಲ್ ಅನ್ನು ತೆಗೆದು 1 ಚಮಚ ರೋಸ್ ವಾಟರ್ ಮತ್ತು ನಿಂಬೆ ರಸವನ್ನು ಬೆರೆಸಿ ಮುಖಕ್ಕೆ ಹಚ್ಚಿ. ಬಳಿಕ ತಣ್ಣೀರಿನಿಂದ ಮುಖ ತೊಳೆಯಿರಿ.
ಅಂಜೂರ ಮತ್ತು ಕುಂಬಳಕಾಯಿ ಎರಡನ್ನೂ ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ ಮತ್ತು ಅದಕ್ಕೆ ಬಾದಾಮಿ ಎಣ್ಣೆಯನ್ನು ಸೇರಿಸಿ ಮುಖಕ್ಕೆ ಹಚ್ಚಿ. ಇದರಿಂದ ಚರ್ಮದ ಕಲೆಗಳು ನಿವಾರಣೆಯಾಗುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.